ಮುಖ್ಯ ಸುದ್ದಿ
ಕರ್ನಾಟಕ ಬಂದ್ | ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ | ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ
ಚಿತ್ರದುರ್ಗ ನ್ಯೂಸ್.ಕಾಂ: ಕಾವೇರಿ ವಿಚಾರವಾಗಿ ಕನ್ನಡಪರ ಹಾಗೂ ರೈತ ಪರ ಸಂಘಟನೆಗಳು ಕರೆ ಕೊಟ್ಟಿರುವ ಬಂದ್ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಜಿಲ್ಲೆಯಾದ್ಯಂತ ಇಂದು ಸಂಜೆ 6 ಗಂಟೆವರೆಗೆ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಆದೇಶಿಸಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ರೈತರು ಹಾಗೂ ಕನ್ನಡಪರ ಸಂಘಟನೆಗಳು ಅಸಮಧಾನಗೊಂಡಿದ್ದಾರೆ.
ಇದನ್ನೂ ಓದಿ: ಕರ್ನಾಟಕ ಬಂದ್ | ಚಿತ್ರದುರ್ಗದಲ್ಲಿ ಏನಿರುತ್ತೆ, ಏನಿರಲ್ಲ | ಡಿಸಿ, ಎಸ್ಪಿ ಹೇಳಿದ್ದೇನು
ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯಿಂದಲೇ ರಾಜ್ಯಾದ್ಯಂತ ಬಂದ್ ಕರೆ ನೀಡಲಾಗಿದೆ. ಈ ವೇಳೆ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳ ಮುಖ್ಯ ರಸ್ತೆಗಳಲ್ಲಿ ಪ್ರತಿಭಟನೆ, ಮೆರವಣಿಗೆ ನಡೆಯಲಿದ್ದು, ಅಂಚೆ ಕಚೇರಿ, ಬಿಎಸ್‍ಎನ್‍ಎಲ್, ರೈಲ್ವೇ, ಆದಾಯ ತೆರಿಗೆ ಇಲಾಖೆ, ಕೆಎಸ್‍ಆರ್‍ಟಿಸಿ ಸೇರಿದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳ ಬಳಿ ಪ್ರತಿಭಟನೆ ನಡೆಯುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಸಿಆರ್‍ಪಿಸಿ ಕಲಂ 144 ಅನ್ವಯ ಪ್ರದತ್ತವಾದ ಅಧಿಕಾರಿ ಚಲಾಯಿಸಿ ಜಿಲ್ಲಾಧಿಕಾರಿಗಳು ಸೆ.29 ರಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ನಿಷೇಧಾಜ್ಞೆ ಹೊರಡಿಸಿದ್ದಾರೆ.