ಮುಖ್ಯ ಸುದ್ದಿ
ಹೊಸಪೇಟೆಯಿಂದ ಬಂದ ಕಾರಿನಲ್ಲಿತ್ತು ₹ 20.35 ಲಕ್ಷ | ಚೆಕ್ ಪೋಸ್ಟ್‌ನಲ್ಲಿ ಹಣ ವಶ
CHITRADURGA NEWS | 26 MARCH 2024
ಚಿತ್ರದುರ್ಗ: ನಗರದ ಪಿಳ್ಳೇಕೆರನಹಳ್ಳಿ ಚೆಕ್‌ಪೋಸ್ಟ್ ಬಳಿ ಸೂಕ್ತ ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ ₹ 20.35 ಲಕ್ಷ ಹಣವನ್ನು ಮಂಗಳವಾರ ವಶಪಡಿಸಿಕೊಳ್ಳಲಾಗಿದೆ.
ತಾಲ್ಲೂಕಿನ ಭರಮಸಾಗರ ಗ್ರಾಮದ ಮನೋಜ್ ಕುಮಾರ್ ಎಂಬುವವರು ಹೊಸಪೇಟೆಯಿಂದ ಹಣವನ್ನು ಕಾರಿನಲ್ಲಿ ಗ್ರಾಮಕ್ಕೆ ಕೊಂಡಯ್ಯುತ್ತಿದ್ದರು. ಲೋಕಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಹಿನ್ನಲೆಯಲ್ಲಿ ಸ್ಥಾಪಿಸಲಾಗಿರುವ ಪಿಳ್ಳೇಕೆರನಹಳ್ಳಿ ಚೆಕ್ ಪೋಸ್ಟ್‌ನಲ್ಲಿ ಎಸ್‌ಎಸ್‌ಟಿ ತಂಡ ತಪಾಸಣೆ ನಡೆಸುವ ವೇಳೆ ಕಾರಿನಲ್ಲಿ ನಗದು ಇರುವುದು ಪತ್ತೆಯಾಗಿದೆ.
ಕ್ಲಿಕ್ ಮಾಡಿ ಓದಿ: 150 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಣೆ | ಖಚಿತ ಮಾಹಿತಿ ಆಧರಿಸಿ ಪೊಲೀಸರ ಕಾರ್ಯಾಚರಣೆ
ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ, ಗ್ರಾಮಾಂತರ ಠಾಣೆ ಪೊಲೀಸ್ ನಿರೀಕ್ಷಕ ಸುನೀಲ್ ಕುಮಾರ್ ಇದ್ದರು.