
CHITRADURGA NEWS | 22 NOVEMBER 2025
ಹೊಳಲ್ಕೆರೆ: ಇನ್ನೂ 50 ವರ್ಷಗಳ ಕಾಲ ದಿನಕ್ಕೆ 10 ಗಂಟೆ ವಿದ್ಯುತ್ ಕೊಡುತ್ತೇವೆ. ಐದಾರು ವರ್ಷಗಳ ಕಾಲ ರೈತರು ಶ್ರಮಪಟ್ಟು ಅಡಿಕೆ ಗಿಡಗಳನ್ನು ಬೆಳೆಸಿದರೆ ಮುಂದಿನ ಜೀವನ ಸುಖಕರವಾಗಿರುತ್ತದೆಎಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.
ಇದನ್ನೂ ಓದಿ: ಜೀವ ರಕ್ಷಣೆಗಾಗಿ ಹೆಲ್ಮೆಟ್ ಧರಿಸಿ | ADC ಕುಮಾರಸ್ವಾಮಿ

ಹಿರೇ ಎಮ್ಮಿಗನೂರು ಗ್ರಾಮದಲ್ಲಿ 35 ಲಕ್ಷ ರೂ.ವೆಚ್ಚದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಎರಡು ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶನಿವಾರ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದರು.
ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ 43 ಕೆರೆಗಳಿಗೆ ನೀರು ಕೊಡದಿದ್ದರೆ ಶಾಸಕರುಗಳೆಲ್ಲಾ ರಾಜೀನಾಮೆ ನೀಡುತ್ತೇವೆಂಬ ಹೇಳಿದಾಗ, ಸಿರಿಗೆರೆ ಗುರುಗಳ ಒತ್ತಡಕ್ಕೆ ಮಣಿದ ಫಲವಾಗಿ ತುಂಗಭದ್ರಾ ಡ್ಯಾಂನಿಂದ ಕೆರೆಗಳಿಗೆ ನೀರು ಬಂದಿರುವುದರಿಂದ ರೈತರಿಗೆ ಅನುಕೂಲವಾಗಿದೆ.
ತೋಪು ಜಾತ್ರೆಯಲ್ಲಿ 2 ಸಾವಿರ ಗುಡಿಸಲು ಮನೆಗಳಿಗೆ ನೀರು ವಿದ್ಯುತ್ ಪೂರೈಸಿ ಬಾಂಬೆ, ಪೂನಾದಿಂದ ಮೊಬೈಲ್ ಟಾಯ್ಲೆಟ್‍ಗಳನ್ನು ತರಿಸಿ, ಗ್ರಾಮಸ್ಥರಿಗೆ
ಅನುಕೂಲ ಮಾಡಿದ್ದೆ. ಆಕಸ್ಮಿಕವಾಗಿ ಬೆಂಕಿ ಬಿದ್ದರೆ ಗುಡಿಸಲುಗಳು ಭಸ್ಮವಾಗಿ ಅನಾಹುತ ಸಂಭವಿಸಬಹುದೆಂದು ದಾವಣಗೆರೆ, ಹರಿಹರ, ಮೊಳಕಾಲ್ಮುರುವಿನಿಂದ ಅಗ್ನಿಶಾಮಕ ವಾಹನಗಳನ್ನು ತರಿಸಿದ್ದಲ್ಲದೆ ಅಂಬ್ಯುಲೆನ್ಸ್ ವ್ಯವಸ್ಥೆ ಕೂಡ ಕಲ್ಪಿಸಲಾಗಿತ್ತು ಎಂದು ಹೇಳಿದರು.
ಚೌಡೇಶ್ವರಿ ದೇವಸ್ಥಾನ ಗೋಪುರಕ್ಕೆ ಹತ್ತು ಲಕ್ಷ ರೂ.ಗಳನ್ನು ಕೊಟ್ಟಿದ್ದೇನೆ. ಎಲ್ಲಾ ಕಡೆ ಗುಣಮಟ್ಟದ ಸಿ.ಸಿ.ರಸ್ತೆಗಳಾಗಿವೆ. ಚಿಕ್ಕಜಾಜೂರಿನ ಕೋಟೆಹಾಳ್ ಬಳಿ ಹದಿಮೂರು ಎಕರೆ ಜಾಗದಲ್ಲಿ ಐದುನೂರು ಕೋಟಿ ರೂ.ಗಳ ವೆಚ್ಚದಲ್ಲಿ ವಿದ್ಯುತ್ ಪವರ್ ಸ್ಟೇಷನ್ ನಿರ್ಮಾಣವಾಗುತ್ತಿದ್ದು, ಜೋಗ್‍ಫಾಲ್ಸ್‍ನಿಂದ ನೇರವಾಗಿ ಇಲ್ಲಿಗೆ ವಿದ್ಯುತ್ ಸರಬರಾಜಾಗಲಿದೆ. ಇದರಿಂದ ರೈತರಿಗೆ ವಿದ್ಯುತ್ ಸಮಸ್ಯೆ ಕಾಡುವುದಿಲ್ಲ ಎಂದರು.
ಇದನ್ನೂ ಓದಿ: RTO ಕಚೇರಿ ಪ್ರಕರಣಗಳಲ್ಲಿ ಶೇ.50 ರಿಯಾಯಿತಿ | ಡಿಸೆಂಬರ್ 12 ಕೊನೆಯ ದಿನ
ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಕಾಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತಿಪ್ಪೇಸ್ವಾಮಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಬಸಣ್ಣ, ಡಿ.ಸಿ.ಮೋಹನ್, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಮಲ್ಲಿಕಾರ್ಜುನ, ಬಸಣ್ಣ, ಈಶ್ವರಪ್ಪ, ನಾಗರಾಜ್ ಹಾಗೂ ಗ್ರಾಮದ ಮುಖಂಡರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
