
CHITRADURGA NEWS | 06 MAY 2026
ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷದ ರಾಜಕೀಯ ಜೀವನ ಸ್ಮರಣೆಗಾಗಿ ಚಿತ್ರದುರ್ಗದಲ್ಲಿ ಆಯೋಜಿಸುತ್ತಿರುವ ಬಿಎಸ್ವೈ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಅಭಿಮಾನಿಗಳು ಆಗಮಿಸಲು 10 ಸಾವಿರ ಬಸ್‍ಗಳನ್ನು ಬುಕಿಂಗ್ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಇದನ್ನೂ ಓದಿ: ಬಿಎಸ್ವೈ ಅಭಿಮಾನೋತ್ಸವ | ಪಶ್ಚಿಮ ಬಂಗಾಳದಿಂದ ಚಿತ್ರದುರ್ಗಕ್ಕೆ ಅಮಿತ್ ಶಾ ಯಾತ್ರೆ
ಕಾರ್ಯಕ್ರಮಕ್ಕೆ 45 ರಿಂದ 50 ಸಾವಿರ ಕಾರು ಮತ್ತಿತರ ಚತುಶ್ಚಕ್ರ ವಾಹನಗಳು ಬರಲಿವೆ. ನಮ್ಮ ನಿರೀಕ್ಷೆಗೂ ಮೀರಿ ಸ್ಪಂದನೆ ಲಭಿಸುತ್ತಿದೆ ಎಂದರು. ಸ್ವಾಮೀಜಿಗಳು, ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಬರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
2 ಗ್ರಂಥಗಳ ಬಿಡುಗಡೆ : ಗೋವಿಂದ ಕಾರಜೋಳ
ಮಾಜಿ ಡಿಸಿಎಂ ಮತ್ತು ಸಂಸದ ಗೋವಿಂದ ಕಾರಜೋಳ ಅವರು ಮಾತನಾಡಿ, ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷಗಳ ಸಮಾಜಸೇವೆ, ಜೀವನಚರಿತ್ರೆಯನ್ನು ನಾವು ಐತಿಹಾಸಿಕ ನಗರ ಚಿತ್ರದುರ್ಗದಲ್ಲಿ ಒಂದು ಸಾಂಸ್ಕøತಿಕ ಹಬ್ಬದ ರೀತಿಯಲ್ಲಿ ಆಚರಿಸಲು ನಿರ್ಧರಿಸಿದ್ದೇವೆ. ಅವರ ಜೀವನಚರಿತ್ರೆ ಮತ್ತು ಸದನದಲ್ಲಿ ಯಡಿಯೂರಪ್ಪನವರು ಎಂಬ ಸಂಬಂಧ ‘ಕೆಂದಾವರೆ- ಕಮಲದಲ್ಲಿ ಅರಳಿದ ಹೂ’ ‘ಸದನದಲ್ಲಿ ಶಿಕಾರಿ’ ಎಂಬ 2 ಗ್ರಂಥಗಳನ್ನು ಅವತ್ತು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: ಕುಡಿಯುವ ನೀರಿನ ಸಮಸ್ಯೆ ಇರುವ ಹಳ್ಳಿಗಳಲ್ಲಿ 24 ಗಂಟೆಯೊಳಗೆ ಸಮಸ್ಯೆ ನಿವಾರಿಸಿ
8ರಂದು ಸಂಜೆ ಯಡಿಯೂರಪ್ಪನವರ ಪುರಪ್ರವೇಶ
8ರಂದು ಸಂಜೆ ಯಡಿಯೂರಪ್ಪನವರ ಪುರಪ್ರವೇಶ ನಡೆಯಲಿದೆ. ಇದನ್ನು ನಾಡಿನ ಸಾಂಸ್ಕøತಿಕ ಹಬ್ಬದ ರೀತಿಯಲ್ಲಿ ಮಾಡಲು ತಯಾರಿ ಮಾಡಿದ್ದೇವೆ. 24 ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಎಲ್ಲರೂ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ ಮಾಡಿದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
