CHITRADURGA NEWS | 27 MAY 2026
ಚಿತ್ರದುರ್ಗ: ಮಂಗಳವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 11.5 ಮಿ.ಮೀ ಮಳೆಯಾಗಿದೆ.
ಇದನ್ನೂ ಓದಿ: ಕನ್ನಡದಲ್ಲಿ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ
ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 21.4 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 15.1 ಮಿ.ಮೀ, ಹಿರಿಯೂರು ತಾಲ್ಲೂಕು 9.9 ಮಿ.ಮೀ, ಹೊಳಲ್ಕೆರೆ ತಾಲ್ಲೂಕು 2.2 ಮಿ.ಮೀ, ಹೊಸದುರ್ಗ ತಾಲ್ಲೂಕಿನಲ್ಲಿ 3 ಮಿ.ಮೀ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 11.4 ಮಿ.ಮೀ ಮಳೆಯಾಗಿದೆ.
ಹೋಬಳಿವಾರು ಮಳೆ ವಿವರ:
ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 15.2 ಮಿ.ಮೀ, ನಾಯಕನಹಟ್ಟಿ 27.7 ಮಿ.ಮೀ, ಪರಶುರಾಂಪುರ 19.7 ಮಿ.ಮೀ, ತಳಕು 19.3 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 7.7 ಮಿ.ಮೀ, ಭರಮಸಾಗರ 20.5 ಮಿ.ಮೀ, ಹಿರೇಗುಂಟನೂರು 11.8 ಮಿ.ಮೀ, ತುರುವನೂರು 27.6 ಮಿ.ಮೀ ಮಳೆಯಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 8.3 ಮಿ.ಮೀ, ಐಮಂಗಲದಲ್ಲಿ 4.5 ಮಿ.ಮೀ, ಧರ್ಮಪುರದಲ್ಲಿ 17.7 ಮಿ.ಮೀ, ಜವನಗೊಂಡನಹಳ್ಳಿ 14.1 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 1.5 ಮಿ.ಮೀ, ಬಿ.ದುರ್ಗ 5.8 ಮಿ.ಮೀ, ರಾಮಗಿರಿ 1.5 ಮಿ.ಮೀ, ತಾಳ್ಯ 1.3 ಮಿ.ಮೀ ಮಳೆಯಾಗಿದೆ.
ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 2.1 ಮಿ.ಮೀ, ಮಾಡದಕೆರೆ 3.3 ಮಿ.ಮೀ, ಮತ್ತೋಡು 5 ಮಿ.ಮೀ, ಶ್ರೀರಾಂಪುರ 2.4 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 15.7 ಮಿ.ಮೀ ಹಾಗೂ ದೇವಸಮುದ್ರದಲ್ಲಿ 9.9 ಮಿ.ಮೀ ಮಳೆಯಾಗಿದೆ.
10 ಮನೆಗಳಿಗೆ ಭಾಗಶಃ ಹಾನಿ:
ಮಳೆಯಿಂದಾಗಿ ಜಿಲ್ಲೆಯಾದ್ಯಂತ 10 ಮನೆಗಳು ಭಾಗಶಃ ಹಾಗೂ 8 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ.
ಇದನ್ನೂ ಓದಿ: ಕರ್ನಾಟಕ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆಯ ಪ್ರತಿಯನ್ನು ಜಿಲ್ಲಾಧಿಕಾರಿ ವೆಂಕಟೇಶ್ ಬಿಡುಗಡೆ
ಚಿತ್ರದುರ್ಗ ತಾಲ್ಲೂಕಿನಲ್ಲಿ 4 ಮನೆಗಳು ಭಾಗಶಃ ಹಾನಿಯಾಗಿವೆ. ಚಳ್ಳಕೆರೆ ತಾಲ್ಲೂಕಿನಲ್ಲಿ 2 ಮನೆ ಭಾಗಶಃ ಹಾನಿ ಹಾಗೂ 2 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಹಿರಿಯೂರು ತಾಲ್ಲೂಕಿನಲ್ಲಿ 1 ಹೆಕ್ಟೇರ್ ತೋಟಗಾರಿಕೆ ಬೆಳೆಹಾನಿಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನಲ್ಲಿ 4 ಮನೆಗಳು ಭಾಗಶಃ ಹಾನಿ ಹಾಗೂ 5 ಹೆಕ್ಟೇರ್ ತೋಟಗಾರಿಕೆ ಬೆಳೆಹಾನಿಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
