ಮುಖ್ಯ ಸುದ್ದಿ
ತಂಬಾಕು ಮಾರುವವರ ಮೇಲೆ 11 ಪ್ರಕರಣ | ದಂಡ ವಸೂಲಿ
CHITRADURGA NEWS | 13 JUNE 2024
ಚಿತ್ರದುರ್ಗ: ನಗರದ ತುರುವನೂರು ರಸ್ತೆ ಹಾಗೂ ಸೇಂಟ್ ಜೋಸೆಫ್ ಶಾಲೆಯ ಸುತ್ತ-ಮುತ್ತ ಪ್ರದೇಶಗಳಲ್ಲಿ ಜಿಲ್ಲಾ, ತಾಲ್ಲೂಕು ಮಟ್ಟದ ತಂಬಾಕು ತನಿಖಾ ತಂಡವು ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ಗುರುವಾರ ಭೇಟಿ ನೀಡಿ, ದಾಳಿ ನಡೆಸಿ ದಂಡ ವಿಧಿಸಿದೆ.
ಇದನ್ನೂ ಓದಿ: ಜೂನ್ 16 ರಂದು ಡಾ.ದೊಡ್ಡಮಲ್ಲಯ್ಯ ಅವರ ಕಂಡುಂಡ ಕಥೆ ಹಾಗೂ ಮೂಕ ಲಹರಿ ಕೃತಿ ಬಿಡುಗಡೆ
ಸಾರ್ವಜನಿಕರಲ್ಲಿ ಮತ್ತು ಅಂಗಡಿ ಮಾಲೀಕರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ಎಚ್ಚರಿಸಿ ಜಾಗೃತಿ ಮೂಡಿಸಲಾಯಿತು. ಸಂಬಂಧಪಟ್ಟ ಸೆಕ್ಷನ್-4, 6ಎ ಮತ್ತು 6ಬಿ ಬೋರ್ಡ್‍ಗಳನ್ನು ಹಾಕಲು ಸೂಚಿಸಲಾಯಿತು.
ಸೆಕ್ಷನ್-4 ಅಡಿಯಲ್ಲಿ 02 ಪ್ರಕರಣ ದಾಖಲಿಸಿ ರೂ. 200 ದಂಡವನ್ನು, ಸೆಕ್ಷನ್-6ಎ ಅಡಿಯಲ್ಲಿ 02 ಪ್ರಕರಣ ದಾಖಲಿಸಿ ರೂ.200 ದಂಡವನ್ನು ಮತ್ತು ಸೆಕ್ಷನ್-6ಬಿ ಅಡಿಯಲ್ಲಿ 07 ಪ್ರಕರಣದ ದಾಖಲಿಸಿ ರೂ. 1200 ದಂಡವನ್ನು ವಸೂಲಿ ಮಾಡಲಾಯಿತು.
ಇದನ್ನೂ ಓದಿ: ಅನಗತ್ಯವಾಗಿ ಎಂಎಲ್‍ಸಿ ಮಾಡಬೇಡಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ
ತಂಬಾಕು ದಾಳಿಯಲ್ಲಿ ಜಿಲ್ಲಾ, ತಾಲ್ಲೂಕು ಮಟ್ಟದ ತನಿಖಾ ತಂಡದ ಅಧಿಕಾರಿಗಳಾದ ತಾಲ್ಲೂಕು ಅರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ, ಪೊಲೀಸ್ ಇಲಾಖೆಯ ಶೃಂಗಾರ ಸಾಗರ್, ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಕೆ.ಪ್ರವೀಣ್ ಇದ್ದರು.