ಚಿತ್ರದುರ್ಗ ನ್ಯೂಸ್.ಕಾಂ: ಜಿಲ್ಲಾ ಆಸ್ಪತ್ರೆಗೆ ಹೊಸ ಜಿಲ್ಲಾ ಶಸ್ತ್ರಚಿಕಿತ್ಸಕರು ನೇಮಕವಾದ ಬೆನ್ನಲ್ಲೆ ಹೊಸ ಸಮಸ್ಯೆ ಉದ್ಬವಿಸಿದೆ. ಕಳೆದ 1 ವರ್ಷಕ್ಕಿಂತ ಹೆಚ್ಚು ಕಾಲ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶುಶ್ರೂಷಕರನ್ನು ಸೇವೆಯಿಂದ ತೆಗೆದು ಹಾಕಿದ್ದು, ಅವರಿಗೆ ಒಂದು ವರ್ಷದಿಂದ ವೇತನವನ್ನೂ ನೀಡಿಲ್ಲ ಎಂದು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ 11 ಮಂದಿ ಶುಶ್ರೂಷಕರು, ಡಿ ಗ್ರೂಫ್ ಹಾಗೂ ಅಂಬ್ಯುಲೆನ್ಸ್ ಚಾಲಕರು ವೇತನ ಬಿಡುಗಡೆಗೆ ಮನವಿ ಮಾಡಿದ್ದಾರೆ.
ಆರಂಭದ ನಾಲ್ಕು ತಿಂಗಳ ಕಾಲ ವೇತನ ನೀಡಲಾಗಿತ್ತು. ಆನಂತರ ಕೊಟ್ಟಿಲ್ಲ. ಜಿಲ್ಲಾ ಆರೋಗ್ಯ ಸುರಕ್ಷಾ ಸಮಿತಿ ನಿಧಿಯಿಂದ ಕೊಡಲು ಅವಕಾಶವಿದ್ದರೂ ಸಂಬಳ ಕೊಟ್ಟಿಲ್ಲ. ಇದರಿಂದ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದ್ದು, ಸಂಕಷ್ಟಕ್ಕೆ ಸಿಲುಕಿದ್ದೇವೆ ಎಂದು ಅವಲತ್ತುಕೊಂಡಿದ್ದಾರೆ.
11 ಜನ ಶುಶ್ರೂಷಕರ ನೇಮಕಾತಿಯೇ ಆಗಿಲ್ಲ ಎಂದು ಡಿಎಸ್
ಇನ್ನೂ 11 ಮಂದಿ ಶುಶ್ರೂಷಕರು ವೇತನಕ್ಕೆ ಒತ್ತಾಯಿಸಿ ಮನವಿ ಸಲ್ಲಿಸುತ್ತಿದ್ದರೆ ಇತ್ತ ಜಿಲ್ಲಾ ಆಸ್ಪತ್ರೆಗೆ ಹೊಸದಾಗಿ ನೇಮಕವಾಗಿರುವ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರವೀಂದ್ರ ಅಷ್ಟೂ ಜನ ಶುಶ್ರೂಷಕರು ಅಕ್ರಮವಾಗಿ ಕೆಲಸ ಮಾಡುತ್ತಿದ್ದರು ಎಂದಿದ್ದಾರೆ.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಶೋಭಾಯಾತ್ರೆ ಯಶಸ್ವಿ | ಎಸ್ಪಿ ಧಮೇಂದ್ರಕುಮಾರ್ ಮೀನಾ ಅಭಿನಂದಿಸಿದ ಮಾದಾರ ಶ್ರೀ
ಆಗಿರುವ ತಪ್ಪನ್ನು ಮುಂದುವರೆಸಿಕೊಂಡು ಹೋಗುವುದು ಬೇಡ ಎನ್ನುವ ಕಾರಣಕ್ಕೆ ಮುಂದುವರೆಸುವುದು ಬೇಡ ಎಂಬ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಆಸ್ಪತ್ರೆಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳುವಾಗ ಎಆರ್ಎಸ್ ಅಥವಾ ಎನ್ಎಚ್ಎಂ ಮೂಲಕ ತೆಗೆದುಕೊಳ್ಳಬೇಕು. ಆದರೆ, 11 ಜನರನ್ನು ಯಾವ ಏಜೆನ್ಸಿ ಅಡಿ ತೆಗೆದುಕೊಂಡಿದ್ದಾರೆ ಎನ್ನುವ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನೂ ಆರಂಭದ ನಾಲ್ಕು ತಿಂಗಳು ನೀಡಿರುವ ವೇತನ ಯಾವ ನಿಧಿಯಿಂದ ಕೊಡಲಾಗಿದೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅದರ ಬಗ್ಗೆಯೂ ಮಾಹಿತಿ ಇಲ್ಲ. ನೇರವಾಗಿ ಅವರಿಗೆ ಕ್ಯಾಶ್ ಕೊಡಲಾಗಿದೆ.
ಅವರ ಇಷ್ಟೂ ದಿನದ ವೇತನದ ಬಗ್ಗೆ ಸದ್ಯಕ್ಕೆ ಗ್ಯಾರೆಂಟಿ ಇಲ್ಲ. ಆದರೆ, ಕೆಲಸ ಮಾಡಿದವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು. ಈ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಡಾ.ರವೀಂದ್ರ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________


Namma hospital hagarana gala Sagara.higher authoritys ge gottu iduyella.adaru yake ee mouna .