CHITRADURGA NEWS | 3 FEBRUARY 2026
ಚಿತ್ರದುರ್ಗ: ಪ್ರಧಾನಮಂತ್ರಿ ಫಲಸ್ ಬಿಮಾ ಯೋಜನೆ ರೈತರಿಗೆ ಆಸರೆಯಾಗಿದ್ದು, ಕಳೆದ ಮುಂಗಾರಿನಲ್ಲಿ ಜಿಲ್ಲೆಯಲ್ಲಿ ಬೆಳೆ ಹಾನಿಗೊಳಗಾದ ಬೆಳೆಗೆ ವಿಮೆ ಪಾವತಿಸಿದ್ದ ರೈತರಿಗೆ ದೊಡ್ಡ ಮೊತ್ತದ ಪರಿಹಾರ ಜಮೆಯಾಗಿದೆ.
ಲೋಕಸಭಾ ಸದಸ್ಯರಾದ ಗೋವಿಂದ ಎಂ.ಕಾರಜೋಳ ಅವರು ಲೋಕಸಭೆ ಅಧಿವೇಶನದಲ್ಲಿ ಕೇಳಿದ್ದ ಪ್ರಶ್ನೆಗೆ ಕೃಷಿ ಮತ್ತು ರೈತ ಕಲ್ಯಾಣ ಸಚಿವರು ಈ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಫೆಬ್ರವರಿ 03 | ಹತ್ತಿ ರೇಟ್ ಎಷ್ಟಿದೆ?
2025 ಮುಂಗಾರು ಹಂಗಾಮಿನಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ಹಾನಿಗೊಳಗಾದ ಸುಮಾರು 7,880 ರೈತರಿಗೆ 12.40 ಕೋಟಿ ರೂ. ಬೆಳೆ ವಿಮಾ ಪರಿಹಾರವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ರಾಮನಾಥ್ ಠಾಕೂರ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಯೋಜನೆಗಳ ಅಡಿಯಲ್ಲಿ ಸಾಧಿಸಿದ ಪ್ರಗತಿ ಕುರಿತು ಸಂಸದ ಗೋವಿಂದ ಎಂ ಕಾರಜೋಳ ಅವರು ಲೋಕಸಭೆ ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ ಈ ಉತ್ತರ ನೀಡಿದ್ದಾರೆ.
ಇದನ್ನೂ ಓದಿ: ಸುಕೋ ಬ್ಯಾಂಕ್ ನಿರ್ದೇಶಕರಾಗಿ ಬಾಳೆಕಾಯಿ ರಾಮದಾಸ್ | ಮೋಹಿತ್ ಮಸ್ಕಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ
ಪ್ರಧಾನಮಂತ್ರಿ ಫಸಲ್ ಬಿಮಾಯೋಜನೆ 2016 ರಿಂದ ಕರ್ನಾಟಕ ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಯಲ್ಲಿದ್ದು, ಇದುವರೆಗೆ ರಾಜ್ಯದ 1.34 ಕೋಟಿ ರೈತರಿಗೆ 18.783 ಕೋಟಿ ಮೊತ್ತದ ಬೆಳೆ ವಿಮಾ ಪರಿಹಾರವನ್ನು ರೈತರಿಗೆ ಪಾವತಿಸಲಾಗಿದೆ ಎಂದು ತಿಳಿಸಿದ್ದಾರೆ.
ವಿಶೇಷವಾಗಿ ಚಿತ್ರದುರ್ಗ ಜಿಲ್ಲೆಯ ಸುಮಾರು 7,880 ರೈತರಿಗೆ 12.40 ಕೋಟಿ ರೂ. ಬೆಳೆ ವಿಮಾ ಪರಿಹಾರವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ವಿವರ ನೀಡಿದ್ದು, ಇದು ಸಂಕಷ್ಟದಲ್ಲಿದ್ದ ರೈತ ಕುಟುಂಬಗಳಿಗೆ ಮಹತ್ವದ ಆರ್ಥಿಕ ನೆರವಾಗಿದ್ದು, ಅವರ ಜೀವನೋಪಾಯಕ್ಕೆ ಭರವಸೆಯನ್ನು ನೀಡಿದೆ ಎಂದಿದ್ದಾರೆ.
ಇದನ್ನೂ ಓದಿ: ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ App ಜಾರಿ | ಗೃಹಿಣಿಯರು ಉದ್ಯಮಿಗಳಾಗಲು ಅವಕಾಶ ! ನೋಂದಣಿ ಹೇಗೆ?
ಜಿಲ್ಲೆಯ ರೈತರಿಗೆ 12.40 ಕೋಟಿ ಮೊತ್ತದ ಬೆಳೆ ವಿಮಾ ಪರಿಹಾರ ನೀಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಕೃಷಿ ಸಚಿವರಿಗೆ ಸಂಸದ ಗೋವಿಂದ ಕಾರಜೋಳ ಧನ್ಯವಾದ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

