CHITRADURGA NEWS | 31 August 2026
ಹೊಳಲ್ಕೆರೆ: ರಾಷ್ಟ್ರೀಯ ಹೆದ್ದಾರಿ-13ರಿಂದ ತಾಳಿಕಟ್ಟೆ ಗ್ರಾಮದವರೆಗೆ ರಸ್ತೆ ಅಗಲೀಕರಣ ಮಾಡಿ, ಅಜ್ಜಂಪುರ ಭಾಗದಿಂದ ದಾವಣಗೆರೆಗೆ ತೆರಳುವ ಜನರಿಗೆ ಅನುಕೂಲವಾಗುವಂತೆ ಸಿ.ಸಿ. ರಸ್ತೆ ಹಾಗೂ ಡಾಂಬರ್ ರಸ್ತೆ ನಿರ್ಮಿಸಲಾಗಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 31 | ಮೆಕ್ಕೆಜೋಳ, ಸೂರ್ಯಕಾಂತಿ, ರಾಗಿ ರೇಟ್
ತಾಳಿಕಟ್ಟೆಯಿಂದ ದೊಗ್ಗನಾಳ್‌ವರೆಗೆ ₹12 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಹನುಮಲಿಯಲ್ಲಿ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.
ಸಿಂಗೇನಹಳ್ಳಿಯಿಂದ ಕಸ್ತೂರಿನಗರದವರೆಗೆ 13 ಗ್ರಾಮಗಳಿಗೆ ಈ ರಸ್ತೆ ಸಂಪರ್ಕ ಕಲ್ಪಿಸಲಿದೆ. ಕಳೆದ 32 ವರ್ಷಗಳಿಂದ ಕ್ಷೇತ್ರದ ಜನರ ಸೇವೆ ಮಾಡುತ್ತಿದ್ದು, ನೀರು, ರಸ್ತೆ, ಶಾಲಾ-ಕಾಲೇಜು, ಕೆರೆಗಳಿಗೆ ನೀರು ತುಂಬಿಸುವುದು ಹಾಗೂ ಆಸ್ಪತ್ರೆ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ಈ ಕಾರ್ಯಗಳನ್ನು ಪರಿಗಣಿಸಿ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ನೀಡಿದೆ ಎಂದು ತಿಳಿಸಿದರು.
ತಾಳಿಕಟ್ಟೆಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಿದ್ದು, ಎಲ್‌ಕೆಜಿಯಿಂದ ಪಿಯುಸಿವರೆಗೆ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತಿದೆ. ಮಕ್ಕಳಿಗೆ ಬಾಳೆಹಣ್ಣು, ಹಾಲು, ಮಧ್ಯಾಹ್ನದ ಬಿಸಿಯೂಟ ಹಾಗೂ ಸಂಜೆ ಪೌಷ್ಟಿಕಾಂಶಯುಕ್ತ ಆಹಾರ ನೀಡಲಾಗುತ್ತಿದೆ. ಸರ್ಕಾರಿ ಶಾಲಾ ಮಕ್ಕಳ ಅನುಕೂಲಕ್ಕಾಗಿ ಉಚಿತ ಬಸ್ ವ್ಯವಸ್ಥೆ ಮಾಡಿದ್ದು, ಚಾಲಕ ಮತ್ತು ನಿರ್ವಾಹಕರ ವೇತನವನ್ನೂ ತಾವೇ ಭರಿಸುತ್ತಿರುವುದಾಗಿ ಹೇಳಿದರು.
ಇದನ್ನೂ ಓದಿ: ಪರಿಶ್ರಮ, ತಾಳ್ಮೆಯಿದ್ದರೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು | ಸಚಿವ ಟಿ.ರಘುಮೂರ್ತಿ
ತಾಲ್ಲೂಕಿನ 493 ಗ್ರಾಮಗಳಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದೇನೆ. ಮತ ಚಲಾಯಿಸುವುದು ಒಂದು ನಿಮಿಷದ ಕೆಲಸ. ಸರ್ಕಾರದಿಂದ ಅನುದಾನ ತಂದು ಜನರ ಕಷ್ಟ-ಸುಖಗಳಿಗೆ ಸ್ಪಂದಿಸುವ ಸಾಮರ್ಥ್ಯ ಯಾರಿಗಿದೆ ಎಂಬುದನ್ನು ಆಲೋಚಿಸಿ ಚುನಾವಣೆಯಲ್ಲಿ ಮತ ಚಲಾಯಿಸುವಂತೆ ಶಾಸಕ ಡಾ.ಎಂ.ಚಂದ್ರಪ್ಪ ಮನವಿ ಮಾಡಿದರು.
ತಾಲ್ಲೂಕಿನಲ್ಲಿ 15 ಕಡೆ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗಿದ್ದು, ಇಂಗ್ಲಿಷ್ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಸೆ.1ರಿಂದ ಪಾಠ ಬೋಧನೆ ಆರಂಭವಾಗಲಿದೆ. ಇದರೊಂದಿಗೆ ಕಂಪ್ಯೂಟರ್ ಶಿಕ್ಷಣಕ್ಕೂ ಆದ್ಯತೆ ನೀಡಲಾಗುವುದು ಎಂದರು.
ಇನ್ನೂ ಒಂದೂವರೆ ತಿಂಗಳಲ್ಲಿ ಭದ್ರಾ ಮೇಲ್ದಂಡೆ ಯೋಜನೆಯಿಂದ ತಾಲ್ಲೂಕಿನ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಲಾಗುವುದು. ರೈತರಿಗೆ ವಿದ್ಯುತ್ ಮತ್ತು ನೀರು ಅತ್ಯಂತ ಮುಖ್ಯವಾಗಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ: 9 ತಿಂಗಳಲ್ಲಿ ಜಿಲ್ಲೆಯ 33 ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ಕಾಮಗಾರಿ ಪೂರ್ಣ | ಸಚಿವ ವಿ.ಸೋಮಣ್ಣ
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಕುಮಾರಣ್ಣ, ಡಿ.ಸಿ.ಮೋಹನ್, ಶೇಖರ್ ತಾಳಿಕಟ್ಟೆ, ಗಂಗಣ್ಣ, ಶೇಖರಣ್ಣ, ಷಣ್ಮುಖಪ್ಪ, ಶಿವಣ್ಣ, ಸುನೀಲ್, ಗುತ್ತಿಗೆದಾರ ರಾಜಣ್ಣ ಸೇರಿದಂತೆ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

