
CHITRADURGA NEWS | 25 DECEMBER 2025
ಚಿತ್ರದುರ್ಗ: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ವತಿಯಿಂದ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಉಳ್ಳೂರು ಗ್ರಾಮದಲ್ಲಿನ ಕೊರಗರ ಕಾಲೋನಿಯಲ್ಲಿ 2.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ 14 ಮನೆಗಳ ಗೃಹಪೂಜೆ ಹಾಗೂ ಲೋಕಾರ್ಪಣೆ ಕಾರ್ಯ ನೆರವೇರಿತು.
ಇದನ್ನೂ ಓದಿ: ಬಸ್ ಬೆಂಕಿ ದುರಂತದಲ್ಲಿ ಮೃತಪಟ್ಟವರ ಗುರುತು ಪತ್ತೆ | ತಾಯಿ ಮಗು ಸೇರಿ 6 ಮಂದಿ ದಹನ
ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಶ್ರೀ ಡಾ. ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರ ಸಾನಿಧ್ಯದಲ್ಲಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್. ಸಂತೋಷ್ ಅವರ ಉಪಸ್ಥಿತಿಯಲ್ಲಿ ಜನಸೇವಾ ಸಂಕಲ್ಪದೊಂದಿಗೆ ನೆರವೇರಿತು.
ಈ ಸಂದರ್ಭದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ವೈ ರಾಘವೇಂದ್ರ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ, ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಸಂಸ್ಥಾಪಕರು, ಪದಾಧಿಕಾರಿಗಳು, ದಾನಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
