ಕ್ರೈಂ ಸುದ್ದಿ
ಪ್ರವಾಸಿ ಮಂದಿರದಲ್ಲಿ ಇಸ್ಪೀಟ್ ಆಡುತ್ತಿದ್ದ 14 ಮಂದಿ ಬಂಧನ | 4.37 ಲಕ್ಷ ಹಣ ಜಪ್ತಿ

ಚಿತ್ರದುರ್ಗ ನ್ಯೂಸ್.ಕಾಂ: ಹಿರಿಯೂರು ಗ್ರಾಮಾಂತರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದು, ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ 14 ಜನರನ್ನು ಬಂಧಿಸಿದ್ದಾರೆ.
ಬಂಧಿತರಲ್ಲಿ ಹಿರಿಯೂರು ನಗರಸಭೆ ಸದಸ್ಯ ಜಗದೀಶ್ ಸೇರಿದಂತೆ 14 ಜನರಿದ್ದಾರೆ. ಅರೆಸ್ಟ್ ವೇಳೆ 4.37 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ. ಇನ್ನೂ ಇಬ್ಬರು ನಗರಸಭೆ ಸದಸ್ಯರು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಹಿರಿಯೂರು ತಾಲೂಕಿನ ವಾಣಿವಿಲಾಸ ಪುರದ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಇಸ್ಪೀಟ್ ಆಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ಕಂದಾಯ ಇಲಾಖೆ ನೌಕರ ಆತ್ಮಹತ್ಯೆ
ಪ್ರವಾಸಿ ಮಂದಿರದ ಮೇಟಿಯ ಕುಮ್ಮಕ್ಕಿನಿಂದಲೇ ಈ ದಂಧೆ ನಡೆಯುತ್ತಿರುವ ಅನುಮಾನದ ಮೇಲೆ, ಪ್ರವಾಸಿ ಮಂದಿರದ ಮೇಟಿ ನಾಸೀರ್ ವಿರುದ್ಧವೂ ದೂರು ದಾಖಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಧರ್ಮೇಂದರ್ ಕುಮಾರ್ ಮೀನಾ ಮಾರ್ಗದರ್ಶನದಲ್ಲಿ ಹಿರಿಯೂರು ಗ್ರಾಮಾಂತರ ಠಾಣೆ ಸಿಪಿಐ ಕಾಳಿಕೃಷ್ಣ, ಪಿಎಸ್‍ಐ ಮಹೇಶ್‍ಗೌಡ ಹಾಗೂ ಅವರ ಸಿಬ್ಬಂದಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ.
