
CHITRADURGA NEWS | 22 APRIL 2026
ಚಿತ್ರದುರ್ಗ: ಇಂದಿನ ಆಧುನಿಕ ಯುಗದಲ್ಲಿ ಮಕ್ಕಳು ಸಾಮಾಜಿಕ ಜಾಲತಾಣ, ಟಿವಿ ಮತ್ತು ಮೊಬೈಲ್ ಫೋನ್‍ಗಳಿಗೆ ದಾಸರಾಗಿ ತಮ್ಮ ಅಮೂಲ್ಯ ಸಮಯ ಹಾಗೂ ಆರೋಗ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮಕ್ಕಳ ಮನಸ್ಸಿನ ಉಲ್ಲಾಸಕ್ಕೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಬೇಸಿಗೆ ಶಿಬಿರಗಳು ಅತ್ಯಂತ ಪೂರಕವಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಹೆಚ್.ವಿಜಯಕುಮಾರ್ ಹೇಳಿದರು.
ಇದನ್ನೂ ಓದಿ: ಎರಡು ದಿನ ಹೊನಲು ಬೆಳಕಿನ ಪುರುಷರ ಕಬ್ಬಡಿ ಪಂದ್ಯಾವಳಿ

ನಗರದ ಜಿಲ್ಲಾ ಬಾಲಭವನದಲ್ಲಿ ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿರುವ 15 ದಿನಗಳ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲಭವನದಲ್ಲಿ ಶಾಲಾ ಪಠ್ಯದ ಒತ್ತಡವಿರುವುದಿಲ್ಲ. ಇಲ್ಲಿ ವಿವಿಧ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳಿಂದ ಪಠ್ಯೇತರ ಚಟುವಟಿಕೆಗಳ ಮೂಲಕ ಕಲಿಕೆಗೆ ಅವಕಾಶ ನೀಡಲಾಗುತ್ತದೆ. ಮಕ್ಕಳು ತಮ್ಮ ಮನಸ್ಸಿನ ಒತ್ತಡ ಕಡಿಮೆ ಮಾಡಿಕೊಂಡು, ಸೃಜನಶೀಲರಾಗಿ ಬೆಳೆಯಲು ಈ ಶಿಬಿರವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ರಾಷ್ಟ್ರೀಯ ಸಾಹಸ ಕ್ರೀಡಾಪಟು ಜ್ಯೋತಿರಾಜ್ ಮಾತನಾಡಿ, ನಮ್ಮ ಬಾಲ್ಯದಲ್ಲಿ ಇಂತಹ ಸೌಲಭ್ಯಗಳು ಇರಲಿಲ್ಲ. ಈಗ ಸರ್ಕಾರ ಮತ್ತು ಇಲಾಖೆಗಳು ಇಂತಹ ಉತ್ತಮ ವೇದಿಕೆಗಳನ್ನು ಕಲ್ಪಿಸಿಕೊಡುತ್ತಿವೆ. ಮಕ್ಕಳು ಕೇವಲ ಪಠ್ಯಕ್ಕೆ ಸೀಮಿತವಾಗದೆ, ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ವಹಿಸಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಆಶಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಮಾತನಾಡಿ, ಆತ್ಮವಿಶ್ವಾಸ ವೃದ್ಧಿ, ನಾಯಕತ್ವ ಗುಣ ಬೆಳೆಸಿಕೊಳ್ಳುವುದು ಹಾಗೂ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದೇ ಈ ಶಿಬಿರದ ಮುಖ್ಯ ಉದ್ದೇಶ ಎಂದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವೀಣಾ ಮಾತನಾಡಿ, ಮಕ್ಕಳ ಮನಸ್ಸಿಗೆ ಸ್ಫೂರ್ತಿ ನೀಡುವಂತಹ ವೈವಿಧ್ಯಮಯ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.
ಜನಪದ ರಂಗ ಕಲಾವಿದ ಹಾಗೂ ಜೂನಿಯರ್ ಅಂಬರೀಶ್ ಖ್ಯಾತಿಯ ಸುರೇಶ್ ಅವರು ಸಾಂಸ್ಕøತಿಕ ಕಾರ್ಯಕ್ರಮದ ಮೂಲಕ ಮಕ್ಕಳನ್ನು ರಂಜಿಸಿದರು.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಮೇ.09 ರಂದು ಯಡಿಯೂರಪ್ಪ ಅಭಿಮಾನೋತ್ಸವ
ಕಾರ್ಯಕ್ರಮದ ವೇದಿಕೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ರಾಜ ನಾಯ್ಕ್, ನವೀನ್ ಕುಮಾರ್, ನಿರ್ಮಲ, ಜಿಲ್ಲಾ ಬಾಲಭವನ ವ್ಯವಸ್ಥಾಪಕ ಸುರೇಶ್, ಜಿಲ್ಲಾ ಬಾಲಭವನ ಕಾರ್ಯಕ್ರಮ ಸಂಯೋಜಕ ಡಿ.ಶ್ರೀಕುಮಾರ್ ಹಾಗೂ ಸಂಪನ್ಮೂಲ ಶಿಕ್ಷಕರಾದ ಕುಮಾರಸ್ವಾಮಿ, ತಿಪ್ಪೇರುದ್ರಪ್ಪ, ಮಂಜುಳಾ ಮತ್ತು ಚಂದನ ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
