CHITRADURGA NEWS | 16 JULY 2025
ಚಿತ್ರದುರ್ಗ: ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ 16ನೇ ಪಟ್ಟಾಭಿಷೇಕ ಮಹೋತ್ಸವ ಹಾಗೂ 27ನೇ ಲಾಂಛನ ದೀಕ್ಷಾ ಮಹೋತ್ಸವ, 40ನೇ ವಸಂತೋತ್ಸವದ ನಿಮಿತ್ತ ಪ್ರತಿಭಾ ಪುರಸ್ಕಾರ, ವಧೂ-ವರರ ಸಮಾವೇಶ, ರಕ್ತದಾನ ಶಿಬಿರವನ್ನು ಜು-18 ರಂದು ಭೋವಿ ಗುರುಪೀಠದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ಚಿಕ್ಕಂದವಾಡಿ ತಿಪ್ಪೇಸ್ವಾಮಿ ಹೇಳಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?
ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ಅವಿರತ ಶ್ರಮದಿಂದ ಭೋವಿ ಗುರುಪೀಠ ಪ್ರಗತಿ ಪಥದಲ್ಲಿ ಮುನ್ನಡೆಯುತ್ತಿದೆ ಎಂದರು.
ದೀಕ್ಷಾ ಮಹೋತ್ಸವ ಹಾಗೂ ಪಟ್ಟಾಭಿಷೇಕ ಕಾರ್ಯಕ್ರಮಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ತಂಗಡಗಿ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಕಾರ್ಮಿಕ ಸಚಿವ ಸಂತೋಷ್ ಲಾಡ್, ಮಾಜಿ ಸಚಿವ ಅರವಿಂದ ಲಿಂಬಾವಳಿ, ವಿಧಾನ ಪರಿಷತ್ ವಿರೋಧ ಪಕ್ಷದ ಉಪನಾಯಕ ಸುನೀಲ್ ವಲ್ಯಾಪುರ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ಬೆಂಗಳೂರಿನ ಸಿ.ವಿ.ರಾಮನ್ ನಗರದ ಶಾಸಕ ಎಸ್.ರಘು, ಲಿಂಗಸೂರು ಶಾಸಕ ಮಾನಪ್ಪ ವಜ್ಜಲ್, ಬೆಂಗಳೂರು ಪುಲಿಕೇಶಿ ನಗರ ಶಾಸಕ ಎ.ಸಿ.ಶ್ರೀನಿವಾಸ್.
ಪಾವಗಡ ಶಾಸಕ ವೆಂಕಟೇಶ್ ವಿ.ಮಹದೇವಪುರ ಕ್ಷೇತ್ರದ ಶಾಸಕಿ ಮಂಜುಳಾ ಲಿಂಬಾವಳಿ, ಕೊಲಾರ ಸಂಸದ ಮಲ್ಲೇಶ್‌ಬಾಬು, ಎಂ.ಎಲ್.ಸಿ.ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯುವ ಜನ ಪ್ರಾಧಿಕಾರದ ಅಧ್ಯಕ್ಷ ವಿ.ಶಾಂತಕುಮಾರ್, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್, ಓ.ಸಿ.ಸಿ.ಐ. ರಾಷ್ಟ್ರೀಯ ಅಧ್ಯಕ್ಷ ಹೆಚ್.ರವಿ ಮಾಕಳಿ, ರಾಜ್ಯಾಧ್ಯಕ್ಷ ಹೆಚ್.ಆನಂದಪ್ಪ, ಮಾಜಿ ಸಚಿವರಾದ ವೆಂಕಟರಮಣಪ್ಪ, ಗೂಳಿಹಟ್ಟಿ ಡಿ.ಶೇಖರ್.
ಮಾಜಿ ಸಂಸದ ಜನಾರ್ಧನಸ್ವಾಮಿ, ಮಾಜಿ ಶಾಸಕರಾದ ಬಂಗಾರಪೇಟೆಯ ನಾರಾಯಣಸ್ವಾಮಿ, ನೆಲಮಂಗಲ ಎಂ.ವಿ.ನಾಗರಾಜು, ಲಿಂಗಸೂರಿನ ಡಿ.ಎಸ್.ಹಲಗೇರಿ, ಅಖಂಡ ಶ್ರೀನಿವಾಸಮೂರ್ತಿ, ಬೆಳಗಾವಿ ಬಾಳಾಸಾಹೇಬ ವಡ್ಡರ, ಭೋವಿ ನಿಗಮದ ಮಾಜಿ ಅಧ್ಯಕ್ಷ ಜಿ.ವಿ.ಸೀತಾರಾಮ್, ಜಿಲ್ಲೆಯ ಶಾಸಕರಾದ ಕೆ.ಸಿ.ವೀರೇಂದ್ರ ಪಪ್ಪಿ, ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ, ಎನ್.ವೈ.ಗೋಪಾಲಕೃಷ್ಣ, ನಿವೃತ್ತ ಐ.ಎ.ಎಸ್. ಅಧಿಕಾರಿಗಳಾದ ಮಂಜುನಾಥ ಪ್ರಸಾದ್, ಎಸ್.ಎಲ್.ಗಂಗಾಧರಪ್ಪ, ಭೀಮಯ್ಯ ಇತರರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಇದನ್ನೂ ಓದಿ: ಭದ್ರಾ ಜಲಾಶಯದಿಂದ ವಿವಿ ಸಾಗರಕ್ಕೆ ನೀರು ಹರಿಸಲು ಅನುಮತಿ | 4.21 TMC ನೀರೆತ್ತಲು ಅವಕಾಶ
ಇದೆ ಸಂದರ್ಭದಲ್ಲಿ ಐನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ 25 ಲಕ್ಷಕ್ಕೂ ಹೆಚ್ಚು ಪ್ರೋತ್ಸಾಹಧನ ವಿತರಿಸಲಾಗುತ್ತದೆ ಎಂದು ಚಿಕ್ಕಂದವಾಡಿ ತಿಪ್ಪೇಸ್ವಾಮಿ ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಪ್ರಧಾನ ಕಾರ್ಯದರ್ಶಿ ಹೆಚ್.ಲಕ್ಷ್ಮಣ, ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷ ಡಿ.ಸಿ.ಮೋಹನ್, ಚಳ್ಳಕೆರೆ ತಾಲ್ಲೂಕು ಅಧ್ಯಕ್ಷ ಹೆಚ್.ಆಂಜನೇಯ, ಭೋವಿ ಗುರುಪೀಠದ ಸಿಇಓ ಗೌನಹಳ್ಳಿ ಗೋವಿಂದಪ್ಪ, ನಿರ್ದೇಶಕರಾದ ಟಿ.ದೇವರಾಜ್, ಡಾ.ತಿಮ್ಮಣ್ಣ, ಪ್ರಕಾಶ್ ವೆಂಕಟಪತಿ ಇತರರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
