Connect with us

Muruga Math; ಮುರುಘಾ ಮಠದಿಂದ ಈವರೆಗೆ 18 ಸಾವಿರ ಜೋಡಿ ದಾಂಪತ್ಯಕ್ಕೆ

ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ

ಮುಖ್ಯ ಸುದ್ದಿ

Muruga Math; ಮುರುಘಾ ಮಠದಿಂದ ಈವರೆಗೆ 18 ಸಾವಿರ ಜೋಡಿ ದಾಂಪತ್ಯಕ್ಕೆ

CHITRADURGA NEWS | 05 SEPTEMBER 2024

ಚಿತ್ರದುರ್ಗ: ಶ್ರೀಮಠದಲ್ಲಿ ಇಲ್ಲಿವರೆಗೆ 18 ಸಾವಿರ (18 thousand) ಜೋಡಿಗಳು ದಾಂಪತ್ಯಕ್ಕೆ ಜೀವನಕ್ಕೆ ಕಾಲಿಟ್ಟಿರುವುದು ಒಂದು ಇತಿಹಾಸವಾಗಿದೆ ಎಂದು ಮುರುಘಾಮಠ(Muruga Math)ದ ಡಾ.ಬಸವಕುಮಾರ ಸ್ವಾಮೀಜಿ ಎಂದು ತಿಳಿಸಿದರು.

ಕ್ಲಿಕ್ ಮಾಡಿ ಓದಿ: Job Fair: ಉದ್ಯೋಗ ಮೇಳ 12ಕ್ಕೆ | ಬಹುರಾಷ್ಟ್ರೀಯ ಕಂಪನಿಗಳು ಭಾಗಿ

ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಗುರುವಾರ ನಡೆದ 34ನೇ ವರ್ಷದ 9ನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀಗಳು,

ಮದುವೆಗಳು ಸ್ವರ್ಗದಲ್ಲಿ ನಿರ್ಧಾರವಾಗುವಂತಹುದಲ್ಲ. ಜೀವನದಲ್ಲಿ ಗಂಡು ಮತ್ತು ಹಣ್ಣಿನ ಮನಸ್ಸುಗಳನ್ನು ಒಂದು ಮಾಡಿ ಸ್ವರ್ಗವನ್ನು ನಿರ್ಮಾಣ ಮಾಡುವಂಥದ್ದಾಗಿದೆ ಎಂದು ಹೇಳಿದರು.

ನದಿಯೊಳಗೆ ನದಿ ಬೆರೆತಂತೆ, ಹಾಲಿನೊಳಗೆ ಹಾಲು ಬೆರೆತಂತೆ ಸತಿ ಪತಿಗಳು ಒಂದಾಗಿ ಪರಸ್ಪರ ಒಬ್ಬರನ್ನೊಬ್ಬರು ಗೌರವಿಸುತ್ತ ಸಂಸಾರವನ್ನು ಸಾಗಿಸಬೇಕೆಂದರು.

ಉಳವಿಯ ಶ್ರೀ ಬಸವಲಿಂಗಮೂರ್ತಿ ಸ್ವಾಮಿಗಳು ಮಾತನಾಡಿ, ಯಾವುದಕ್ಕೆ ಸಾವು ಇಲ್ಲವೋ, ಯಾವುದು ನಿರಂತರವಾಗಿರುತ್ತದೆಯೋ ಅದನ್ನು ಕಲಿಸುವಂತದ್ದೆ ಶಿಕ್ಷಣ. ಇಂತಹ ಶಿಕ್ಷಣವನ್ನು ನೀಡುವ ಗುರುವನ್ನು ನಾವೆಲ್ಲ ಗೌರವಿಸಬೇಕು. ಈ ದಿನ ಹೊಸ ಜೀವನಕ್ಕೆ ಕಾಲಿಡುತ್ತಿರುವ ನವ ವಧುವರರು ದೇವರ ದಾಸಿಮಯ್ಯ ಹಾಗೂ ದುಗ್ಗಳೆಯರಂತೆ ಪರಸ್ಪರ ಹೊಂದಿಕೊಂಡು ಬದುಕುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಹಿತವಚನ ನುಡಿದರು.

ಕ್ಲಿಕ್ ಮಾಡಿ ಓದಿ: CRIME: ತಹಶೀಲ್ದಾರ್ ಜೀಪ್‌ಗೆ ಬೆಂಕಿ ಹಚ್ಚಿದ ಪೃಥ್ವಿರಾಜ್‌ | ಅನಾಹುತ ತಪ್ಪಿಸಿದ ಸಿಬ್ಬಂದಿ

ಶ್ರೀ ತಿಪ್ಪೇರುದ್ರ ಸ್ವಾಮಿಗಳು ಮಾತನಾಡಿ, ಆಧುನಿಕ ಕಾಲಘಟ್ಟದಲ್ಲಿ ಅನಾಥಾಶ್ರಮಗಳು, ವೃದ್ಧಾಶ್ರಮಗಳು ಹೆಚ್ಚಾಗುತ್ತಿವೆ. ಮದುವೆಯಾಗಿ ಗಂಡನ ಮನೆಗೆ ಹೋಗುವ ಹೆಣ್ಣುಮಕ್ಕಳು, ಆ ಮನೆಯನ್ನು ಒಡೆಯದೆ, ಅತ್ತೆ ಮಾವರನ್ನು ತಂದೆತಾಯಿಯಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ 2 ಜೋಡಿಗಳ ವಿವಾಹ ನೆರವೇರಿತು.

ಜಮುರಾ ಕಲಾವಿದರು ಪ್ರಾರ್ಥಿಸಿದರು. ವಚನಕಮ್ಮಟದ ನಿರ್ದೇಶಕ ವೀರಭದ್ರಪ್ಪ ಸ್ವಾಗತಿಸಿದರು. ನಿವೃತ್ತ ಪ್ರಾಚಾರ್ಯರಾದ ಟಿ.ಪಿ. ಜ್ಞಾನಮೂರ್ತಿ ನಿರೂಪಿಸಿದರು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version