Connect with us

KC VIRENDRA PAPPI; ಕಾಲೇಜು ಕಟ್ಟಡ ನಿರ್ಮಾಣ, ಮೂಲಭೂತ ಸೌಕರ್ಯ ಅಭಿವೃದ್ದಿಗೆ 2.24 ಎಕರೆ ಮಂಜೂರು | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ 

ಮಹಿಳಾ ಸಿರಿ ವಾರ್ಷಿಕ ಸಂಚಿಕೆ ಬಿಡುಗಡೆಗೊಳಿಸಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

ಮುಖ್ಯ ಸುದ್ದಿ

KC VIRENDRA PAPPI; ಕಾಲೇಜು ಕಟ್ಟಡ ನಿರ್ಮಾಣ, ಮೂಲಭೂತ ಸೌಕರ್ಯ ಅಭಿವೃದ್ದಿಗೆ 2.24 ಎಕರೆ ಮಂಜೂರು | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ 

CHITRADURGA NEWS | 12 JULY 2024

ಚಿತ್ರದುರ್ಗ: ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕಟ್ಟಡ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ದಿಗೆ ಈಗಾಗಲೇ 2.24 ಗುಂಟೆ ಜಮೀನು ಮಂಜೂರಾಗಿದೆ. ಕಟ್ಟಡ ನಿರ್ಮಾಣಕ್ಕಾಗಿ ರೂ.25 ಕೋಟಿ ಅನುದಾನ ಮೀಸಲಾಗಿದೆ. ಈ ಎಲ್ಲಾ ಸೌಕರ್ಯಗಳನ್ನು ಮುಂಬರುವ ವಿದ್ಯಾರ್ಥಿಗಳು ಬಳಸಿಕೊಂಡು, ಸಮಾಜದಲ್ಲಿ ಉತ್ತಮ ನಾಗರಿಕರಾಗಿ, ಒಳ್ಳೆಯ ಗುಣಗಳನ್ನು ಮೈಗೂಡಿಕೊಳ್ಳಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ತಿಳಿಸಿದರು.

ಇದನ್ನೂ ಓದಿ: CENTRAL GOVERNMENT; ಕೇಂದ್ರದಿಂದ 5300 ಕೋಟಿ ತಂದು ಸಮಗ್ರ ನೀರಾವರಿ ಯೋಜನೆ ರೂಪಿಸಲು ರೈತರ ಒತ್ತಾಯ

ನಗರದ ತ.ರಾ.ಸು ರಂಗಮಂದಿರದಲ್ಲಿ ಶುಕ್ರವಾರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ದಾವಣಗೆರೆ ವಿಶ್ವವಿದ್ಯಾಲಯ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಆಯೋಜಿಲಾಗಿದ್ದ “ಮಹಿಳಾ ಸಿರಿ” ವಾರ್ಷಿಕ ಸಂಚಿಕೆ ಬಿಡುಗಡೆ ಹಾಗೂ ಪ್ರತಿಭೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಪಾಠದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ತಮ್ಮ ವೈಯಕ್ತಿಕ ಹಿತಾಸಕ್ತಿ ಅರಿತು ಉನ್ನತಮಟ್ಟಕ್ಕೆ ಬೆಳೆಯಬೇಕು.

ಇದನ್ನೂ ಓದಿ: PROTEST; ವಿವಿಧ ಬೇಡಿಕೆಗಳ ಈಡೇರಿಕೆಗೆ ಎಬಿವಿಪಿಯಿಂದ ಪ್ರತಿಭಟನೆ 

ಪೋಷಕರು ಮಕ್ಕಳ ಭವಿಷ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಡುತ್ತಾರೆ. ಪೋಷಕರು ನಿಮ್ಮ ಮೇಲೆ ಅಗಾಧವಾದ ನಂಬಿಕೆಯನ್ನಿಟ್ಟು ಶಾಲಾ, ಕಾಲೇಜುಗಳಿಗೆ ಕಳುಹಿಸುತ್ತಾರೆ. ಅವರ ನಂಬಿಕೆಗೆ ದ್ರೋಹ ಮಾಡದೆ, ವಿದ್ಯಾರ್ಥಿಗಳು ತಮ್ಮ ಪೋಷಕರ, ಆರ್ಥಿಕ ಪರಿಸ್ಥಿತಿ ಅರಿತು, ಪಾಠ ಪ್ರವಚನಗಳಲ್ಲಿ ತೊಡಗಿಸಿಕೊಂಡು ಉದಯೋನ್ಮುಖರಾಗಿ ಬೆಳೆಯಬೇಕು. ಮುಂದಿನ ಜೀವನದ ಪಯಣಕ್ಕೆ ಜಾಗೃತವಾಗಿ ಹೆಜ್ಜೆ ಇಡಬೇಕು. ನಿಮ್ಮ ಸಾಧನೆ, ಸನ್ನಡತೆ ಕಂಡು ಪೋಷಕರು ನಿಮ್ಮ ಬಗ್ಗೆ ಹೆಮ್ಮೆಪಡುವಂತಾಗಬೇಕು. ಆಗ ಮಾತ್ರ ನಿಮ್ಮ ಬದುಕು ಸಾರ್ಥಕ ಎಂದರು.

2022-23ನೇ ಸಾಲಿನಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಬಿ.ಕಾಂ. ವಿಭಾಗದ ರುಖಾಯಾ ತಾಜೀಮ್ ಹಾಗೂ ಬಿ.ಎ ವಿಭಾಗದ ಎನ್.ರಕ್ಷಿತಾ ಅವರಿಗೆ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು. 2022-23ನೇ ಸಾಲಿನಲ್ಲಿ ಪ್ರಥಮ ಮತ್ತು ದ್ವಿತೀಯ ಬಿ.ಎ, ಬಿ.ಕಾಂ ಪದವಿಯಲ್ಲಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೂ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.

ಇದನ್ನೂ ಓದಿ: Chitradurga; ಚಿತ್ರದುರ್ಗದ ಜನಸಂಖ್ಯೆ ಎಷ್ಟು, ಕುಡಿಯಲು ಎಷ್ಟು ನೀರು ಕೊಡುತ್ತಿದ್ದೀರಿ | ಗೋವಿಂದ ಕಾರಜೋಳ ಪ್ರಶ್ನೆಗೆ ಇಂಜಿನಿಯರ್ ತಬ್ಬಿಬ್ಬು

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಹೆಚ್.ಗುಡ್ಡದೇಶ್ವರಪ್ಪ, ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸಿ.ಚನ್ನಕೇಶವ, ಸಾಂಸ್ಕøತಿಕ ಸಮಿತಿ ಸಂಚಾಲಕ ಡಾ. ಡಿ. ಓ.ಸಿದ್ದಪ್ಪ, ಅಧ್ಯಾಪಕ ಸಂಘದ ಅಧ್ಯಕ್ಷ ಡಾ. ಪಿ. ಎನ್.ಮಧುಸೂದನ್, ಐ. ಕ್ಯೂ. ಎ.ಸಿ. ಸಂಚಾಲಕ ಬಿ.ಹೆಚ್.ಕುಮಾರಸ್ವಾಮಿ ಸೇರಿದಂತೆ ಕಾಲೇಜಿನ ಸಿಬ್ಬಂದಿಗಳು ವಿದ್ಯಾರ್ಥಿಗಳು ಇದ್ದರು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version