CHITRADURGA NEWS | 06 JUNE 2026
ಚಿತ್ರದುರ್ಗ: ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ಜಿಲ್ಲಾಡಳಿತ ಎರಡು ಎಕರೆ ಜಮೀನು ನೀಡಿದೆ. ಮುಂದಿನ ದಿನಗಳಲ್ಲಿ ದೊಡ್ಡ ನೌಕರರ ಭವನ ನಿರ್ಮಾಣ ಮಾಡಲಾಗುವುದು. ನಿವೃತ್ತ ನೌಕರರಿಗೂ ಇದು ಪ್ರಯೋಜನವಾಗಲಿ. ನಮ್ಮ ಸಂಘ ಸದಾ ನಿಮ್ಮ ಜೊತೆಯಲ್ಲಿರುತ್ತದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ ಭರವಸೆ ನೀಡಿದರು.
ಇದನ್ನೂ ಓದಿ: ರಾಮಲಿಂಗಾರೆಡ್ಡಿ ಅವರ ರಾಜೀನಾಮೆಯಿಂದ ನೋವುಂಟಾಗಿದೆ | ರೆಡ್ಡಿ ಸಮುದಾಯ
ತಾಲ್ಲೂಕು ಸರ್ಕಾರಿ ನಿವೃತ್ತ ನೌಕರರ ಸಂಘ, ಮನೋರಂಜನಾ ಹಾಗೂ ಸಾಂಸ್ಕøತಿಕ ಸಂಘದಿಂದ ಕ್ರೀಡಾ ಭವನದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ 2025-26 ನೆ ಸಾಲಿನ ವಾರ್ಷಿಕ ಮಹಾಸಭೆ ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ನಿವೃತ್ತ ಸರ್ಕಾರಿ ನೌಕರರ ಹೆಗಲ ಮೇಲೆ ಸಮಾಜವನ್ನು ತಿದ್ದುವ ಬಹುದೊಡ್ಡ ಜವಾಬ್ದಾರಿಯಿದೆ. ಸರ್ಕಾರಿ ನೌಕರಿಯಲ್ಲಿ ನೀವುಗಳು ಸಲ್ಲಿಸಿದ ಸೇವೆಯಿಂದ ಅಭಿವೃದ್ದಿ ಕಾಣುತ್ತಿದ್ದೇವೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಇತರೆಯವರಿಗೆ ಉತ್ತೇಜನ ನೀಡಿದಂತಾಗುತ್ತದೆ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಿ.ಬಿ.ಮಹಾಂತೇಶ್ ಮಾತನಾಡಿ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವುದರಿಂದ ಅವರ ಬೆನ್ನು ತಟ್ಟಿದಂತಾಗುತ್ತದೆ. ನಿವೃತ್ತ ನೌಕರರ ಮಾರ್ಗದರ್ಶನದಿಂದ ನಾನು ಈ ಮಟ್ಟಕ್ಕೆ ಬೆಳೆದಿದ್ದು, ಪ್ರಾಮಾಣಿಕವಾಗಿ ಶಿಕ್ಷಕರ ಸೇವೆ ಮಾಡಿದ್ದರಿಂದ ಎರಡನೆ ಬಾರಿಗೆ ಅಧ್ಯಕ್ಷನಾಗಿದ್ದೇನೆಂದು ಸ್ಮರಿಸಿದರು.
ಇದನ್ನೂ ಓದಿ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿದ್ಯಾರ್ಥಿ ಕಾಂಗ್ರೆಸ್ ಆಗ್ರಹ
ತಾಲ್ಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ.ಕೆ.ಹನುಮಂತಪ್ಪ ಮಾತನಾಡುತ್ತ ಸಂಘದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ನಿವೃತ್ತ ನೌಕರರ ಸಂಘದ ಮಕ್ಕಳು ಮೊಮ್ಮಕ್ಕಳು ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿದರೆ ಪ್ರತಿ ವರ್ಷವೂ ಪುರಸ್ಕರಿಸುತ್ತೇವೆ.
ಇದಕ್ಕೆ ದಾನಿಗಳು ಮುಂದೆ ಬರಬೇಕು. ನಿವೃತ್ತ ನೌಕರರು ತಮ್ಮ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು. ವಾರ್ಷಿಕ ಮಹಾಸಭೆಯಲ್ಲಿ ಇಂತಹ ಕಾರ್ಯಕ್ರಮಗಳನ್ನು ಮಾಡುವುದು ಎಲ್ಲರಿಗೂ ಹೆಮ್ಮೆ ಎನಿಸುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
ಈ ಸಂದರ್ಭದಲ್ಲಿ ತಾಲ್ಲೂಕು ನಿವೃತ್ತ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪರಮೇಶ್, ಖಜಾಂಚಿ ಹಾಲನಾಯ್ಕ, ನಿರ್ದೇಶಕ ಲಕ್ಷ್ಮಿನಾರಾಯಣ, ನಿವೃತ್ತ ಸಬ್‍ಇನ್ಸ್‍ಪೆಕ್ಟರ್ ನಾಗರಾಜ್ ವೇದಿಕೆಯಲ್ಲಿದ್ದರು. ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

