CHITRADURGA NEWS | 24 MAY 2025
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಮೇ.26 ಮತ್ತು 27ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ರೈತರಿಗೆ ಜೇನು ಕೃಷಿಯ ಕುರಿತು ಎರಡು ದಿನದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
Also Read: ಚಾಲಕನ ನಿಯಂತ್ರಣ ತಪ್ಪಿ ಬುಲೇರೋ ವಾಹನ ಸೇತುವೆಗೆ ಡಿಕ್ಕಿ | ಇಬ್ಬರು ಸಾವು

ತರಬೇತಿ ಕಾರ್ಯಕ್ರಮದಲ್ಲಿ ಜೇನು ಕೃಷಿ ತಜ್ಞರು ಹಾಗೂ ನಿವೃತ್ತ ಸಹಾಯಕ ನಿರ್ದೇಶಕ ಮೇಟಿಕುರ್ಕಿಯ ಡಾ.ಶಾಂತವೀರಯ್ಯ ಅವರು ಜೇನು ಸಾಕಾಣಿಕೆಯ ಸಮಗ್ರ ಮಾಹಿತಿ ಬಗ್ಗೆ ವಿಷಯ ಮಂಡನೆ ಹಾಗೂ ಪ್ರಾತ್ಯಕ್ಷಿಕೆ ನೀಡುವರು.
ಆಸಕ್ತ 40 ಜನ ರೈತಭಾಂದವರು ತರಬೇತಿಯಲ್ಲಿ ಭಾಗವಹಿಸಲು 8277931058 ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು.
Also Read: ಜಿಲ್ಲೆಯಲ್ಲಿ 28 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ-2 | ಡಿಸಿ ಟಿ.ವೆಂಕಟೇಶ್
ಮೊದಲು ನೋಂದಾವಣೆ ಮಾಡಿಕೊಂಡ 40 ರೈತಭಾಂದವರು ಫ್ರೂಟ್ಸ್ ಐಡಿ (ಎಫ್‍ಐಡಿ) ಅಥವಾ ಆಧಾರ್ ಕಾರ್ಡ್‍ನೊಂದಿಗೆ ತರಬೇತಿಗೆ ಹಾಜರಾಗಬೇಕು ಎಂದು ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ಕೋರಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
