ಮುಖ್ಯ ಸುದ್ದಿ
ಮಹಿಳಾ ಆಯೋಗಕ್ಕೆ 2 ಸಾವಿರ ಅರ್ಜಿ | ಬಾಕಿ ಎಷ್ಟಿವೆ ಗೊತ್ತಾ ?

Published on
CHITRADURGA NEWS | 07 FEBRUARY 2025
ಚಿತ್ರದುರ್ಗ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕಳೆದ ಒಂದು ವರ್ಷದ ಅವಧಿಯಲ್ಲಿ ಸುಮಾರು 2 ಸಾವಿರ ಅರ್ಜಿಗಳು ಆಯೋಗಕ್ಕೆ ಬಂದಿವೆ ಎಂದು ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ತಿಳಿಸಿದರು.
ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಈಗಾಗಲೇ 1,700 ಕ್ಕೂ ಹೆಚ್ಚು ಅರ್ಜಿಗಳನ್ನು ಇತ್ಯರ್ಥ ಮಾಡಲಾಗಿದ್ದು, ಇನ್ನು 200 ಅರ್ಜಿಗಳು ಮಾತ್ರ ಬಾಕಿ ಇವೆ ಎಂದು ಹೇಳಿದರು.

ಇದನ್ನೂ ಓದಿ: ಜಿಲ್ಲಾ ಆಸ್ಪತ್ರೆ ಅವ್ಯವಸ್ಥೆ ಮಹಿಳಾ ಆಯೋಗದ ಅಧ್ಯಕ್ಷೆ ತೀವ್ರ ಅಸಮಧಾನ
ಮಕ್ಕಳ ರಕ್ಷಣೆ, ಭದ್ರತೆ, ಸ್ಥಿತಿಗತಿಗಳ ಪರಿಶೀಲನೆ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳು ಪ್ರತಿ ತಿಂಗಳಿಗೊಮ್ಮೆ ವರದಿ ನೀಡಬೇಕು ಎಂದು ತಿಳಿಸಿದ ಅವರು, ಬಾಲ್ಯವಿವಾಹ ಹಾಗೂ ದೌರ್ಜನ್ಯ ತಡೆಗೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಹಾಗೂ ಪೊಲೀಸ್ ತುರ್ತು ಸಹಾಯವಾಣಿ ಸಂಖ್ಯೆ 112 ಗೆ ಕರೆ ಮಾಡುವಂತೆ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಇದೇ ಸಂದರ್ಭದಲ್ಲಿ ಮನವಿ ಮಾಡಿದರು.
Continue Reading
Related Topics:Application submission, Chairperson of Women's Commission, Chitradurga Latest, Chitradurga news, Dr. Nagalakshmee Choudhary, Kannada News, ಅರ್ಜಿ ಸಲ್ಲಿಕೆ, ಕನ್ನಡ ಸುದ್ದಿ, ಚಿತ್ರದುರ್ಗ ನ್ಯೂಸ್, ಚಿತ್ರದುರ್ಗ ಲೇಟೆಸ್ಟ್, ಡಾ.ನಾಗಲಕ್ಷ್ಮೀಚೌಧರಿ, ಮಹಿಳಾ ಆಯೋಗದ ಅಧ್ಯಕ್ಷೆ

Click to comment