ಮುಖ್ಯ ಸುದ್ದಿ
Farmer women: 20 ಕೋಳಿಮರಿ ವಿತರಣೆ | ರೈತ ಮಹಿಳೆಯರಿಂದ ಅರ್ಜಿ ಆಹ್ವಾನ
CHITRADURGA NEWS | 29 NOVEMBER 2024
ಚಿತ್ರದುರ್ಗ: 5 ವಾರದ ಕೋಳಿ(Chicken) ಮರಿಗಳನ್ನು ಉತ್ಪಾದಿಸಿ ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತ ಮಹಿಳೆ(farmer women)ಯರಿಗೆ ತಲಾ 20ರಂತೆ ಕೋಳಿ ಮರಿಗಳನ್ನು ವಿತರಿಸಿ ಆದಾಯ ಹೆಚ್ಚಿಸುವ ಕಾರ್ಯಕ್ರಮ ಅನುಷ್ಟಾನಗೊಳಿಸುತ್ತಿದ್ದು, ಈ ಸಂಬಂಧ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕ್ಲಿಕ್ ಮಾಡಿ ಓದಿ: ಡ್ರೋನ್ ಮೂಲಕ ಫೋಟೋ, ವಿಡಿಯೋಗ್ರಫಿ ಕಲಿಯುವ ಆಸಕ್ತಿ ಇದೆಯೇ? ಆಗಿದ್ದರೆ ಇಂದೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನ. ರೈತ ಮಹಿಳೆಯರು, ಸ್ವ-ಸಹಾಯ ಗುಂಪಿನ ಸದಸ್ಯರು, ಪ್ರಾಥಮಿಕ ಕೋಳಿ ಸಹಕಾರ ಸಂಘಗಳಲ್ಲಿರುವ ಮಹಿಳಾ ಸದಸ್ಯರು ಮತ್ತು ರೈತ ಉತ್ಪಾದಕ ಸಂಸ್ಥೆಯ ಅರ್ಹ ಫಲಾನುಭವಿಗಳು ಅರ್ಜಿಗಳನ್ನು ಅಗತ್ಯ ಸೂಕ್ತ ದಾಖಲೆಗಳೊಂದಿಗೆ ಆಯಾ ತಾಲ್ಲೂಕಿನ ಪಶು ವೈದ್ಯಾಧಿಕಾರಿ(ಆಡಳಿತ) ಅಥವಾ ಸಹಾಯಕ ನಿರ್ದೇಶಕರಿಗೆ ಸಲ್ಲಿಸಲು ಸೂಚಿಸಿದೆ.
ಕ್ಲಿಕ್ ಮಾಡಿ ಓದಿ: 4 ದಿನ ವಿದ್ಯುತ್ ವ್ಯತ್ಯಯ | ಯಾವ ದಿನಗಳಂದು ಕರೆಂಟ್ ಇರಲ್ಲ ಗೊತ್ತಾ….
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಪಶುವೈದ್ಯಾಧಿಕಾರಿ 9482943111, ಚಳ್ಳಕೆರೆ 9448816499, ಹೊಳಲ್ಕೆರೆ 9972965479, ಹೊದುರ್ಗ 9945298407, ಹಿರಿಯೂರು 9483451044, ಮೊಳಕಾಲ್ಮೂರು 9900964820 ಗೆ ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.