By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಹಿರಿಯ ನಾಗರಿಕರಿಗೆ ಶಾಸಕರ ಅನುದಾನದಲ್ಲಿ ರೂ.20 ಲಕ್ಷ | ಕೆ.ಸಿ. ವೀರೇಂದ್ರ ಪಪ್ಪಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಹಿರಿಯ ನಾಗರಿಕರಿಗೆ ಶಾಸಕರ ಅನುದಾನದಲ್ಲಿ ರೂ.20 ಲಕ್ಷ | ಕೆ.ಸಿ. ವೀರೇಂದ್ರ ಪಪ್ಪಿ

ಮುಖ್ಯ ಸುದ್ದಿ

ಹಿರಿಯ ನಾಗರಿಕರಿಗೆ ಶಾಸಕರ ಅನುದಾನದಲ್ಲಿ ರೂ.20 ಲಕ್ಷ | ಕೆ.ಸಿ. ವೀರೇಂದ್ರ ಪಪ್ಪಿ

News Desk Chitradurga News
Last updated: 3 January 2025 19:02
News Desk Chitradurga News
6 months ago
Share
K.C. Virendra Pappi
ಕೆ.ಸಿ. ವೀರೇಂದ್ರ ಪಪ್ಪಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 03 JANUARY 2025

ಚಿತ್ರದುರ್ಗ: ಶಾಸಕರ ಅನುದಾನದಲ್ಲಿ ರೂ.20 ಲಕ್ಷ ಹಿರಿಯ ನಾಗರಿಕರಿಗಾಗಿಯೇ ಮೀಸಲು ಇರಿಸಿರುವುದಾಗಿ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಹೇಳಿದರು.

ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಪತ್ರಕರ್ತರಿಗೆ ಪ್ರಶಸ್ತಿಗಳ ಮಳೆ | ರಾಜ್ಯಮಟ್ಟದ ಪುರಸ್ಕಾರಕ್ಕೆ ಐದು ಜನ ಆಯ್ಕೆ

ನಗರದ ಜಿಲ್ಲಾ ಬಾಲಭವನಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣಾ ಕಾರ್ಯಕ್ರಮದ ವತಿಯಿಂದ ಹಮ್ಮಿಕೊಂಡಿದ್ದ “ಹಿರಿಯ ನಾಗರಿಕರಿಗೆ “ಉಚಿತ ನೇತ್ರ ತಪಾಸಣಾ ಶಿಬಿರ” ಉದ್ಘಾಟಿಸಿ ಅವರು ಮಾತನಾಡಿದರು.

ಹಿರಿಯ ನಾಗರಿಕರ ಆರೋಗ್ಯ ಮತ್ತು ಆರ್ಥಿಕ ಸ್ಥಿತಿ ಉತ್ತಮವಾಗಿರಬೇಕು. ಈ ದೃಷ್ಟಿಯಿಂದ ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಪ್ರತಿ ಜಿಲ್ಲೆಯಲ್ಲಿ 3 ವೃದ್ಧಾಶ್ರಮಗಳನ್ನು ಸ್ಥಾಪಿಸಲಾಗಿದೆ. ಹಿರಿಯರಿಗಾಗಿ 1090 ಸಹಾಯವಾಣಿ ತೆರಯಲಾಗಿದೆ. ಆರೋಗ್ಯ ಸಮಸ್ಯೆ ಹಾಗೂ ಕಾನೂನು ನೆರವು, ಆಪ್ತ ಸಮಾಲೋಚನೆ ಪಡೆಯಲು ಹಿರಿಯ ನಾಗರಿಕರು ಸಹಾಯವಾಣಿಗೆ ಕರೆ ಮಾಡಬಹುದಾಗಿದೆ.

ಕೆ.ಎಸ್.ಆರ್.ಟಿ. ಬಸ್ ಪ್ರಯಾಣ ದರದಲ್ಲೂ ಹಿರಿಯ ನಾಗರಿಕರಿಗೆ ರಿಯಾಯಿತಿ ನೀಡಲಾಗಿದೆ. ಸಂಧ್ಯಾ ಸುರಕ್ಷಾ ಯೋಜನೆಯಡಿ 60 ರಿಂದ 65 ವರ್ಷದವರಿಗೆ ರೂ.800 ಹಾಗೂ 65 ವರ್ಷ ಮೇಲ್ಪಟ್ಟವರಿಗೆ ರೂ.1200 ನೀಡಲಾಗುತ್ತಿದೆ. ಇದರೊಂದಿಗೆ 2007ರಲ್ಲಿ ಹಿರಿಯ ನಾಗರಿಕರ ರಕ್ಷಣಾ ಕಾಯ್ದೆಯನ್ನು ಸಹ ಜಾರಿ ಮಾಡಲಾಗಿದೆ. ಪ್ರತಿ ಜಿಲ್ಲೆಯಲ್ಲೂ ಹಿರಿಯ ನಾಗರಿಕರ ಅವಹಾಲುಗಳನ್ನು ಆಲಿಸಲು ನ್ಯಾಯ ಮಂಡಳಿ ಸ್ಥಾಪಿಸಲಾಗಿದೆ ಎಂದರು.

ಕ್ಲಿಕ್ ಮಾಡಿ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?

ವಿಜ್ಞಾನ ಎಷ್ಟೇ ಮುಂದುವರೆದರೂ, ಇಂದಿಗೂ ಕೃತಕವಾಗಿ ಕಣ್ಣು ತಯಾರಿಸುವುದು ಸಾಧ್ಯವಾಗಿಲ್ಲ. ನಮ್ಮ ಕಣ್ಣುಗಳ ರಕ್ಷಣೆ ನಮ್ಮದೇ ಜವಾಬ್ದಾರಿಯಾಗಿದೆ. ಕೆ.ಸಿ.ವಿರೇಂದ್ರ ಪಪ್ಪಿ ಅಭಿಮಾನಿ ಬಳಗ ಹಾಗೂ ಶಂಕರ್ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಕ್ಷೇತ್ರದ 10 ಪಂಚಾಯಿತಿಗಳಲ್ಲಿ ಹಿರಿಯ ನಾಗರಿಕರು ಸೇರಿದಂತೆ ಎಲ್ಲಾ ವರ್ಗದವರಿಗೆ ಉಚಿತ ಕಣ್ಣಿನ ತಪಾಸಣೆ ಶಿಬಿರ ನಡೆಸಲಾಗಿದೆ.

4830 ಜನರಿಗೆ ಉಚಿತ ಕಣ್ಣಿನ ತಪಾಸಣೆ ನಡೆಸಲಾಗಿದೆ. 213 ಜನರನ್ನು ಬೆಂಗಳೂರಿನ ಶಂಕರ್ ಕಣ್ಣಿನ ಆಸ್ಪತ್ರೆಗೆ ಕರೆದೊಯ್ಯುದು ಉಚಿತವಾಗಿ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ ಮಾಡಿಸಿ, ಸುರಕ್ಷಿತವಾಗಿ ಮರಳಿ ಅವರ ಮನೆಗಳಿಗೆ ತಲುಪಿಸಲಾಗಿದೆ. 861 ಜನರಿಗೆ ಉಚಿತ ಕನ್ನಡಕ ವಿತರಿಸಲಾಗಿದೆ.

ಮುಂದಿನ ದಿನಗಳಲ್ಲಿ ಉಳಿದ ಪಂಚಾಯಿತಿಗಳಲ್ಲಿಯೂ ಉಚಿತ ಕಣ್ಣಿನ ಶಿಬಿರ ಆಯೋಜಿಸಲಾಗುವುದು. ಇದರೊಂದಿಗೆ ಸರ್ಕಾರದ ವತಿಯಿಂದ ಆಯೋಜಿಸಲಾದ ಶಿಬಿರದಲ್ಲೂ ಕಣ್ಣಿನ ತಪಾಸಣೆ ಹಾಗೂ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯನ್ನು ಹಿರಿಯ ನಾಗರಿಕರು ಮಾಡಿಸಿಕೊಳ್ಳುವಂತೆ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಸಲಹೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಮುಪ್ಪು ಎನ್ನುವುದು ಪ್ರತಿಯೊಬ್ಬರ ಜೀವನದಲ್ಲಿ ಬರಲಿದೆ. ವಯಸ್ಸಾದಂತೆ ನಮ್ಮ ದೇಹವು ಅನೇಕ ಸಮಸ್ಯೆಗಳಿಗೆ ಒಳಗಾಗುತ್ತದೆ. ಅದರಲ್ಲಿ ಪ್ರಮುಖವಾಗಿ ಕಣ್ಣುಗಳು ಅತೀ ಅವಶ್ಯಕ. ಇಲಾಖೆ ವತಿಯಿಂದ ಇದೇ ಪ್ರಥಮ ಬಾರಿಗೆ ನೇತ್ರ ತಪಾಸಣೆ ಶಿಬಿರ ಏರ್ಪಡಿಸಿ, ಶಸ್ತ್ರಚಿಕಿತ್ಸೆಗೆ ಅವಕಾಶ ಕಲ್ಪಿಸಿದ್ದು, ಹಿರಿಯ ನಾಗರಿಕರ ಅನುಕೂಲಕ್ಕಾಗಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿಯೂ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದರು.

ಕ್ಲಿಕ್ ಮಾಡಿ ಓದಿ: ವಿವಿ ಸಾಗರ ಜಲಾಶಯದ ಇಂದಿನ ಮಟ್ಟ

ಜಿಲ್ಲಾಸ್ಪತ್ರೆಯ ನೇತ್ರ ತಜ್ಞ ಡಾ.ಪ್ರದೀಪ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಾಪಯ್ಯ, ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ.ನಾಗರಾಜ್, ತಾಲ್ಲೂಕು ಪಂಚಾಯಿತಿ ಇಒ ವೈ.ರವಿಕುಮಾರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀನಿವಾಸಮೂರ್ತಿ ಸೇರಿದಂತೆ ಹಿರಿಯ ನಾಗರಿಕರು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesFree eye check up campK.C. Virendra PappiKannada Latest NewsKannada NewsMLA GrantSenior citizensShankar Eye Hospitalಉಚಿತ ನೇತ್ರ ತಪಾಸಣಾ ಶಿಬಿರಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೆ.ಸಿ.ವೀರೇಂದ್ರ ಪಪ್ಪಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಶಂಕರ್ ಕಣ್ಣಿನ ಆಸ್ಪತ್ರೆಶಾಸಕರ ಅನುದಾನಹಿರಿಯ ನಾಗರಿಕರು
Share This Article
Facebook Email Print
Previous Article ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
Next Article ಗ್ರಾಮೀಣ, ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆ | ಅರ್ಜಿ ಆಹ್ವಾನ
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up