ಚಿತ್ರದುರ್ಗ ನ್ಯೂಸ್.ಕಾಂ: ಅಪ್ರಾಪ್ತ ಬಾಲಕಿ (8 ತಿಂಗಳ ಹಸುಗೂಸು) ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ 20 ವರ್ಷ ಕಠಿಣ ಸಜೆ ಹಾಗೂ 25 ಸಾವಿರ ದಂಡ ವಿಧಿಸಿ ಆದೇಶ ಮಾಡಿದೆ.
ಚಿತ್ರದುರ್ಗ ತಾಲೂಕು ತುರುವನೂರು ಹೋಬಳಿ ವ್ಯಾಪ್ತಿಯ ಗ್ರಾಮವೊಂದರಲ್ಲಿ 2022 ಡಿಸೆಂಬರ್ 19 ರಂದು ಅಪ್ರಾಪ್ತ ಬಾಲೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ತುರುವನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸ್ ಇನ್ಸ್‍ಪೆಕ್ಟರ್ ಸಿ.ವೆಂಕಟೇಶ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು.
ಇದನ್ನೂ ಓದಿ: ಪೋಕ್ಸೋ ಪ್ರಕರಣಗಳು ಹೆಚ್ಚಳ | ಮಕ್ಕಳ ಮೇಲೆ ಪೋಷಕರ ನಿಗಾ ಇರಲಿ
ಪ್ರಕರಣದ ವಿಚಾರಣೆ ನಡೆಸಿದ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಕೆ.ಕೋಮಲ ಅ.11 ರಂದು ಅಪರಾಧಿಗೆ 20 ವರ್ಷ ಕಠಿಣ ಸಜೆ ಮತ್ತು 25 ಸಾವಿರ ದಂಡ ವಿಧಿಸಿ ಆದೇಶ ಮಾಡಿದ್ದಾರೆ. ಇದೇ ವೇಳೆ. ನೊಂದ ಅಪ್ರಾಪ್ತ ಬಾಲಕಿಗೆ 4.25 ಲಕ್ಷ ರೂ. ಪರಿಹಾರ ನೀಡುವಂತೆ ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಚ್.ಆರ್.ಜಗದೀಶ್(ಪೋಕ್ಸೋ) ವಾದ ಮಂಡಿಸಿದ್ದರು.
(ಓದುಗರ ಗಮನಕ್ಕೆ: ಪೋಕ್ಸೋ ಕಾಯ್ದೆ ಅಡಿಯಲ್ಲಿ ಅತ್ಯಾಚಾರ ಸಂತ್ರಸ್ಥರ ಗುರುತು ಬಹಿರಂಗಪಡಿಸುವಂತಿಲ್ಲ. ಈ ಕಾರಣಕ್ಕೆ ಸುದ್ದಿಯಲ್ಲಿ ಅಪರಾಧಿಯ ಹೆಸರನ್ನೂ ಪ್ರಕಟಿಸಿಲ್ಲ.)

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

Such people’s should be hanged till death .why are they keeping him alive .