CHITRADURGA NEWS | 26 DECEMBER 2025
ಚಿತ್ರದುರ್ಗ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಚಿತ್ರದುರ್ಗ ನ್ಯಾಯಾಲಯ 20 ವರ್ಷಗಳ ಕಠಿಣ ಸಜೆ ಹಾಗೂ 25 ಸಾವಿರ ದಂಡ ವಿಧಿಸಿ ಆದೇಶಿಸಿದೆ.
ಹೊಸದುರ್ಗ ಪಟ್ಟಣದ ಇಸ್ಮಾಯಿಲ್ ಜಬೀವುಲ್ಲಾ ಶಿಕ್ಷೆಗೆ ಒಳಗಾದ ಆರೋಪಿ.
ಇದನ್ನೂ ಓದಿ: ಜವನಗೊಂಡನಹಳ್ಳಿ ಬಸ್ ದುರಂತ ಸಾವಿನ ಸಂಖ್ಯೆ ಏರಿಕೆ | ಸೀಬರ್ಡ್ ಬಸ್ ಚಾಲಕ ಚಿಕಿತ್ಸೆ ಫಲಿಸದೆ ಸಾವು
2023 ಆಗಸ್ಟ್ 6 ರಂದು ಆರೋಪಿ ಇಸ್ಮಾಯಿಲ್ ಪ್ರಕರಣದ ನೊಂದ ಬಾಲಕಿಯನ್ನು ಅಬಕಸ್ ತರಬೇತಿ ಕೇಂದ್ರದಿಂದ ಪುಸಲಾಯಿಸಿ ಕರೆದೊಯ್ದು ಹೊಸದುರ್ಗದ ಶಿಥಿಲಾವಸ್ಥೆಯಲ್ಲಿರುವ ಹಳೇ ಆಸ್ಪತ್ರೆ ಕಟ್ಟಡದಲ್ಲಿ ಅತ್ಯಾಚಾರ ಎಸಗಿದ್ದ.
ಈ ಸಂಬಂಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸಿಪಿಐ ಎನ್.ತಿಮ್ಮಣ್ಣ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಇದನ್ನೂ ಓದಿ: ಜವನಗೊಂಡನಹಳ್ಳಿ ಬಸ್ ದುರಂತ ಸಾವಿನ ಸಂಖ್ಯೆ ಏರಿಕೆ | ಸೀಬರ್ಡ್ ಬಸ್ ಚಾಲಕ ಚಿಕಿತ್ಸೆ ಫಲಿಸದೆ ಸಾವು
ಆರೋಪಿ ವಿರುದ್ಧ ಕಲಂ 363, 506, 376(ಎಬಿ) ಮತ್ತು 6 ಪೋಕ್ಸೋ ಕಾಯ್ದೆ ಅಡಿ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು.
ವಿಚಾರಣೆ ನಡೆಸಿದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಗಂಗಾಧರ ಚನ್ನಬಸಪ್ಪ ಹಡಪದ್ ಅವರು ಆರೋಪಿ ಇಸ್ಮಾಯಿಲ್ ಜಬೀವುಲ್ಲಾಗೆ 20 ವರ್ಷಗಳ ಕಠಿಣ ಸಜೆ ಮತ್ತು 25 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 25 | ಮೆಕ್ಕೆಜೋಳ ರೇಟ್ ಎಷ್ಟಿದೆ?
ಪ್ರಕರಣದ ನೊಂದ ಬಾಲಕಿಗೆ 5 ಲಕ್ಷ ರೂ. ಪರಿಹಾರ ನೀಡಲು ಆದೇಶಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕರಾದ(ಪೋಕ್ಸೋ) ಎಚ್.ಆರ್.ಜಗದೀಶ್ ವಾದ ಮಂಡಿಸಿದ್ದರು.



________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
