CHITRADURGA NEWS | 15 February 2026
ಚಿತ್ರದುರ್ಗ: ಮೆಕ್ಕೆಜೋಳದ ರಾಶಿಗೆ ರಾತ್ರೋ ರಾತ್ರಿ ಬೆಂಕಿ ಹಾಕಿದ ಕಿಡಿಗೇಡಿಗಳು, ಲಕ್ಷಾಂತರ ರೂ ಮೌಲ್ಯದ 22 ಲೋಡ್ ಮೆಕ್ಕೆಜೋಳ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಇದನ್ನೂ ಓದಿ: ಕೆರೆಯಲ್ಲಿ ತೇಲಿ ಹೋದ ಸೀರೆ ಹಿಡಿಯಲು ಹೋದ ಮಕ್ಕಳ ದುರ್ಮರಣ
ಚಿತ್ರದುರ್ಗ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಲಕ್ಷ್ಮೀಸಾಗರ ಗ್ರಾಮದ ಧನಂಜಯಪ್ಪ ಎಂಬವರಿಗೆ ಸೇರಿದ ಮೆಕ್ಕೆಜೋಳ ರಾಶಿ ಸುಟ್ಟು ಭಸ್ಮವಾಗಿದೆ.
ವೈಷಮ್ಯದ ಹಿನ್ನಲೆ ಮೆಕ್ಕೆಜೋಳದ ರಾಶಿಗೆ ಬೆಂಕಿ ಹಚ್ಚಿರುವ ಶಂಕೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ರಾತ್ರಿ ಮೊಬೈಲ್, ಟಿವಿ ಆಫ್ ಮಾಡಿ | ಶಾಲಾ ಮಕ್ಕಳ ಜಾಥಾ
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಯವರು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
