Connect with us

    Valmiki Corporation; ವಾಲ್ಮೀಕಿ ನಿಗಮದ ಅಧಿಕಾರಿ ದಿ.ಚಂದ್ರಶೇಖರನ್ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ 

    ವಾಲ್ಮೀಕಿ ನಿಗಮದ ಅಧಿಕಾರಿ ದಿ.ಚಂದ್ರಶೇಖರನ್ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ 

    ಮುಖ್ಯ ಸುದ್ದಿ

    Valmiki Corporation; ವಾಲ್ಮೀಕಿ ನಿಗಮದ ಅಧಿಕಾರಿ ದಿ.ಚಂದ್ರಶೇಖರನ್ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ 

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 25 SEPTEMBER 2024

    ಚಿತ್ರದುರ್ಗ: ಆತ್ಮಹತ್ಯೆಗೆ ಶರಣಾಗಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ(Valmiki Corporation) ಅಧಿಕಾರಿ ಚಂದ್ರಶೇಖರನ್ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ ನೀಡಲಾಯಿತು.

    ಕ್ಲಿಕ್ ಮಾಡಿ ಓದಿ: Arecanut: ಅಡಿಕೆ ಧಾರಣೆ | ಭೀಮಸಮುದ್ರ, ಚನ್ನಗಿರಿ, ಶಿವಮೊಗ್ಗದಲ್ಲಿ ಇಂದಿನ ಅಡಿಕೆ ರೇಟ್

    ಮುಖ್ಯಮಂತ್ರಿ ಸಿದ್ದರಾಮಯ್ಯ, ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಶಿಕ್ಷಣ ಸಚಿವ ಮಧುಬಂಗಾರಪ್ಪ, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ ಹಿರಿಯ ಅಧಿಕಾರಿಗಳ ಸಮಕ್ಷದಲ್ಲಿ ವಿತರಿಸಲಾಯಿತು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿನಾಂಕ: 19-07-2024 ರಂದು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಇವರ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಕುಟುಂಬಕ್ಕೆ ರೂ.25 ಲಕ್ಷ ಸಹಾಯಧನ ನೀಡುವುದಾಗಿ ಘೋಷಣೆ ಮಾಡಿದ್ದರು. ಮೃತರ ಪತ್ನಿ ಕವಿತಾ ಅವರ ಬ್ಯಾಂಕ್ ಖಾತೆಗೆ ಹಣ ಜಮೆಯಾಗಲಿದೆ.

    ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ದೌರ್ಜನ್ಯ ನಿಷೇಧ ಕಾಯ್ದೆ-1989ರಡಿ ಸಿಐಡಿಯ ವಿಶೇಷ ತನಿಖಾ ತಂಡವು ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿರುವ ಹಿನ್ನಲೆಯಲ್ಲಿ ದೌರ್ಜನ್ಯ ನಿಷೇಧ ಕಾಯ್ದೆಯ ನಿಯಮಗಳಂತೆ ರೂ.8.25 ಲಕ್ಷಗಳನ್ನು ದಿ.ಚಂದ್ರಶೇಖರನ್ ಇವರ ಪತ್ನಿ ಕವಿತಾ ರವರಿಗೆ ಮಂಜೂರು ಮಾಡಲಾಗಿದೆ.

    ಚಂದ್ರಶೇಖರನ್ ಇವರಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮದಿಂದ ಪಾವತಿಸಬೇಕಾದ ಸಂಬಳ ಮತ್ತು ರಜೆ ನಗದೀಕರಣಗಳಿಗೆ ಸಂಬಂಧಿಸಿದ ರೂ.1,41,361ಗಳನ್ನು ಈಗಾಗಲೇ ಕವಿತಾ ಅವರ ಬ್ಯಾಂಕ್ ಖಾತೆಗೆ ಪಾವತಿಸಲಾಗಿದೆ.

    ಕ್ಲಿಕ್ ಮಾಡಿ ಓದಿ: selected for state level; ವಿದ್ಯಾವಿಕಾಸ ಶಾಲೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

    ಮೃತರ ಮಗನಿಗೆ ಉದ್ಯೋಗ ನೀಡುವ ಕುರಿತು ಕ್ರಮ ವಹಿಸಲಾಗುತ್ತಿದೆ ಎಂದು ಸಿಎಂ ಕಚೇರಿ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top