
CHITRADURGA NEWS | 29 JUNE 2024
ಚಿತ್ರದುರ್ಗ: ರಾಜವೀರ ಮದಕರಿನಾಯಕನ 270ನೇ ಪಟ್ಟಾಭಿಷೇಕವನ್ನು ಜುಲೈ 1 ರಂದು ಬೆಳಿಗ್ಗೆ 12 ಗಂಟೆಗೆ ನಗರದ ತ.ರಾ.ಸು.ರಂಗಮಂದಿರದಲ್ಲಿ ಆಚರಿಸಲಾಗುವುದು ಎಂದು ತಾಲ್ಲೂಕು ನಾಯಕ ಸಮಾಜದ ಅಧ್ಯಕ್ಷ ಬಿ.ಕಾಂತರಾಜ್ ಹೇಳಿದರು.
ಇದನ್ನೂ ಓದಿ: ಭದ್ರಾ ಮೇಲ್ದಂಡೆಗೆ ಶೀಘ್ರ ₹ 5,300 ಕೋಟಿ ಅನುದಾನ | ಸಂಸದ ಗೋವಿಂದ ಎಂ.ಕಾರಜೋಳ

ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11 ಕ್ಕೆ ಮದಕರಿನಾಯಕನ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು. ಶಾಸಕರು, ಸಚಿವರು, ನಾಯಕ ಸಮಾಜದ ಮುಖಂಡರುಗಳು ಆಗಮಿಸಲಿದ್ದಾರೆ. ಎಲ್ಲಾ ಜಾತಿ ಧರ್ಮದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಥೀಂ ಪಾರ್ಕ್, ಕೋಟೆ ಅಭಿವೃದ್ದಿ ಬಗ್ಗೆ ಸಚಿವರು, ಶಾಸಕರುಗಳಿಗೆ ಮನವಿ ಸಲ್ಲಿಸಲಾಗುವುದು. ಚಿತ್ರದುರ್ಗಕ್ಕೆ ಮದಕರಿನಾಯಕ ತನ್ನದೆ ಆದ ಕೊಡುಗೆ ಕೊಟ್ಟಿದ್ದಾರೆ. ಅದಕ್ಕೆ ಸೂಕ್ತ ಗೌರವ, ಸ್ಥಾನಮಾನ ಸಿಗುತ್ತಿಲ್ಲ.
ಇದನ್ನೂ ಓದಿ: ಭದ್ರೆಗೆ ಹೆಚ್ಚಿದ ಒಳ ಹರಿವು | ಒಂದೇ ದಿನಕ್ಕೆ 1.5 ಅಡಿ ನೀರು ಸಂಗ್ರಹ

ಮದಕರಿನಾಯಕನ ಹೆಸರು ಬೆಳೆದರೆ ಊರು ಬೆಳೆದಂತೆ. ಇಲ್ಲಿವರೆಗೂ ಅಧಿಕಾರ ನಡೆಸಿದ ಯಾವ ರಾಜಕಾರಣಿಗಳಿಗೂ ಊರು ಅಭಿವೃದ್ದಿಯಾಗುವುದು ಬೇಕಾಗಿಲ್ಲ. ಹನ್ನೆರಡನೇ ವರ್ಷಕ್ಕೆ ಪಟ್ಟಕ್ಕೇರಿದ ಮದಕರಿನಾಯಕನ ಅನೇಕ ವಿಚಾರಗಳು ಬೆಳಕಿಗೆ ಬರಬೇಕಿದೆ. ನಾಯಕ ಜನಾಂಗದಿಂದ ಪಟ್ಟಾಭಿಷೇಕ, ಜಯಂತಿ, ಸ್ಮರಣೋತ್ಸವವನ್ನು ಆಚರಿಸುವುದು ನಮ್ಮ ಧರ್ಮ ಎಂದು ಹೇಳಿದರು.
ನಾಯಕ ಸಮಾಜದ ಜಿಲ್ಲಾಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ ಮಾತನಾಡಿ, ಎಲ್ಲಾ ಮಹಾನ್ ನಾಯಕರುಗಳನ್ನು ಒಂದೊಂದು ಜಾತಿಗೆ ಸೀಮಿತಗೊಳಿಸಲಾಗಿದೆ. ಹಾಗಾಗಿ ಸರ್ವಧರ್ಮದವರು ಮದಕರಿನಾಯಕನ ಪಟ್ಟಾಭಿಷೇಕದಲ್ಲಿ ಭಾಗವಹಿಸಿದರೆ ಒಳ್ಳೆಯದು. ಮದಕರಿನಾಯಕ ಕೇವಲ ನಾಯಕ ಜನಾಂಗಕ್ಕೆ ಸೀಮಿತವಲ್ಲ. ಊರಿನ ದೊರೆಗೆ ಗೌರವ ಸಲ್ಲಿಸುವುದು ಎಲ್ಲರ ಜವಾಬ್ದಾರಿ ಎಂದರು.
ಇದನ್ನೂ ಓದಿ: ಭರಮಸಾಗರ ದೊಡ್ಡಕೆರೆಗೆ ಹರಿದ ನೀರು | ಸಂಭ್ರಮಿಸಿದ ರೈತರು
ನಾಯಕ ಸಮಾಜದ ಮುಖಂಡ ಡಿ.ಗೋಪಾಲಸ್ವಾಮಿ ನಾಯಕ ಮಾತನಾಡಿ ಪಟ್ಟಾಭಿಷೇಕದ ಮೂಲಕ ಮದಕರಿನಾಯಕನ ಇತಿಹಾಸ ಪರಂಪರೆಯನ್ನು ಎಲ್ಲರಿಗೂ ತಿಳಿಸಬೇಕಿದೆ. ಚಿತ್ರದುರ್ಗದ ಕೋಟೆಯನ್ನು ವಿಶ್ವಪರಂಪರೆಯ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವಂತೆ ವೇದಿಕೆ ಕಾರ್ಯಕ್ರಮದಲ್ಲಿ ಸಚಿವರಿಗೆ, ಶಾಸಕರುಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಹೆಚ್.ಅಂಜಿನಪ್ಪ, ಕಾಟಿಹಳ್ಳಿ ಕರಿಯಪ್ಪ, ನಗರಸಭೆ ಮಾಜಿ ಸದಸ್ಯ ತಿಪ್ಪೇಸ್ವಾಮಿ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
