
CHITRADURGA NEWS | 28 AUGUST 2026
ಚಿತ್ರದುರ್ಗ: ಬೆಂಗಳೂರಿನ ವಿಜ್ಞಾನ ನಾವೀನ್ಯತೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಸಕ್ತ ಯುವಜನರಿಗೆ ‘ಒಣಭೂಮಿ ಆಹಾರ ಉದ್ಯಮಗಳ ಅನ್ವೇಷಣೆ’ ವಿಷಯದ ಕುರಿತು ಉದ್ಯಮಶೀಲತೆ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
ಚಳ್ಳಕೆರೆ ತಾಲ್ಲೂಕಿನ ಕುದಾಪುರದಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಸೆಪ್ಟೆಂಬರ್ 16ರಿಂದ 18ರವರೆಗೆ ಮೂರು ದಿನಗಳ ಕಾಲ ತರಬೇತಿ ನಡೆಯಲಿದೆ.
ಹೊಸದಾಗಿ ಉದ್ಯಮ ಆರಂಭಿಸಲು ಆಸಕ್ತಿ ಹೊಂದಿರುವ ಎಸ್‌ಸಿ, ಎಸ್‌ಟಿ ಸಮುದಾಯದ ಯುವಜನರಿಗೆ ಒಣಭೂಮಿ ಆಧಾರಿತ ಆಹಾರ ಉದ್ಯಮಗಳ ಕುರಿತು ಅಗತ್ಯ ಜ್ಞಾನ, ಕೌಶಲ್ಯ ಹಾಗೂ ಸೂಕ್ತ ಮಾರ್ಗದರ್ಶನ ನೀಡುವುದು ಕಾರ್ಯಾಗಾರದ ಉದ್ದೇಶವಾಗಿದೆ ಎಂದು ಪ್ರತಿಷ್ಠಾನದ ಹಿರಿಯ ಯೋಜನಾ ಸಹಾಯಕ ಗಣೇಶ್ ತೋಳಾರ್ ತಿಳಿಸಿದ್ದಾರೆ.
ಇದನ್ನೂ ಓದಿ: ನೇಪಾಳ ಪ್ರಕೃತಿ ವಿಕೋಪ | ಸಂಪರ್ಕಕ್ಕೆ ಸಿಗದ ಪ್ರವಾಸಿಗರ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ
ಹೆಚ್ಚಿನ ಮಾಹಿತಿಗಾಗಿ 8970582703, 9880266829 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

