CHITRADURGA NEWS | 26 AUGUST 2026
ಚಿತ್ರದುರ್ಗ: ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಪರೀಕ್ಷಾರ್ಥ ನೀರು ಹರಿಸಲು ಭದ್ರಾ ಜಲಾಶಯದಿಂದ ಮೂರು ಟಿಎಂಸಿ ನೀರು ಹರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದನ್ನು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸ್ವಾಗತಿಸಿದೆ.
ಇದನ್ನೂ ಓದಿ: ಆನ್ಲೈನ್ ವಂಚನೆ | ಮಾಜಿ ಸೈನಿಕರೇ ಎಚ್ಚರ
ಈ ಕುರಿತು ಹೇಳಿಕೆ ನೀಡಿರುವ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಜನವರಿಯಲ್ಲಿಯೇ ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ನೀರು ಹರಿಸಿ ಗೋನೂರು ಕೆರೆಯವರೆಗೆ ತಲುಪಿಸಲಾಗುವುದು ಎಂದು ಹೇಳಲಾಗಿತ್ತು. ಇದೀಗ ತಡವಾಗಿಯಾದರೂ ನೀರು ಹರಿಯುತ್ತಿರುವುದು ಜಿಲ್ಲೆಯ ರೈತಾಪಿ ಸಮುದಾಯದಲ್ಲಿ ಹೊಸ ಭರವಸೆ ಮೂಡಿಸಿದೆ. ಪರೀಕ್ಷಾರ್ಥ ಹರಿಯುವಿಕೆಯಿಂದ ಹೊಳಲ್ಕೆರೆ ತಾಲೂಕಿನ ಬಹುತೇಕ ಕೆರೆಗಳಿಗೆ ನೀರಿನ ಸ್ಪರ್ಶವಾಗಲಿದೆ ಎಂದು ತಿಳಿಸಿದ್ದಾರೆ.
ಚಿತ್ರದುರ್ಗ ಶಾಖಾ ಕಾಲುವೆಯ ಕಾಮಗಾರಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಪರೀಕ್ಷಾರ್ಥವಾಗಿ ನೀರು ಹರಿಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಆದರೆ ಗೋನೂರು ಕೆರೆಯವರೆಗೆ ನೀರು ತಲುಪಿದ ಮಾತ್ರಕ್ಕೆ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿ ಸಂಪೂರ್ಣಗೊಂಡಂತಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ತುಮಕೂರು ಶಾಖಾ ಕಾಲುವೆಯ ಕಾಮಗಾರಿ ಇನ್ನೂ ಬಾಕಿ ಇದೆ. ಚಳ್ಳಕೆರೆ, ಮೊಳಕಾಲ್ಮೂರು, ಜಗಳೂರು ಹಾಗೂ ಪಾವಗಡ ಭಾಗಗಳಿಗೂ ನೀರು ತಲುಪಬೇಕಿರುವುದರಿಂದ ಉಳಿದ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ತುಂಗಾ ನದಿಯಿಂದ ಭದ್ರಾ ಜಲಾಶಯದವರೆಗೆ ಕೈಗೊಳ್ಳಬೇಕಿರುವ ಕಾಮಗಾರಿಗೂ ಚುರುಕು ನೀಡಬೇಕು. ಮುಂದಿನ ಮಳೆಗಾಲದೊಳಗೆ ನೀರನ್ನು ಲಿಫ್ಟ್ ಮಾಡುವಂತಹ ವಾತಾವರಣವನ್ನು ಸರ್ಕಾರ ಸೃಷ್ಟಿಸಬೇಕು ಎಂದು ಲಿಂಗಾರೆಡ್ಡಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯಲ್ಲಿ 12.97 ಲಕ್ಷ ಮತದಾರರ ಕರಡು ಪಟ್ಟಿ ಪ್ರಕಟ | ಜಿಲ್ಲಾಧಿಕಾರಿ ವೆಂಕಟೇಶ್
ಚಿತ್ರದುರ್ಗ ಶಾಖಾ ಕಾಲುವೆಗೆ ಪರೀಕ್ಷಾರ್ಥವಾಗಿ ನೀರು ಹರಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಿ ಆದೇಶ ಹೊರಡಿಸಿದ ಸಚಿವ ಟಿ.ರಘುಮೂರ್ತಿ ಅವರ ಕಾರ್ಯವನ್ನು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಅಭಿನಂದಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

