
CHITRADURGA NEWS | 04 MARCH 2025
ಚಿತ್ರದುರ್ಗ: ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಡೆಸಿದ ದಂತವೈದ್ಯ ಸ್ನಾತಕ ಮತ್ತು ಸ್ನಾತಕೋತ್ತರ ಪರೀಕ್ಷೆಗಳಲ್ಲಿ ನಗರದ ಎಸ್.ಜೆ.ಎಂ. ದಂತ ಮಹಾವಿದ್ಯಾಲಯದ ವಿದ್ಯಾರ್ಥಿಗಳು 30 ರ‍್ಯಾಂಕ್ ಪಡೆದಿದ್ದಾರೆ ಎಂದು ಪ್ರಾಚಾರ್ಯ ಡಾ.ರಘುನಾಥರೆಡ್ಡಿ ತಿಳಿಸಿದ್ದಾರೆ.
Also Read: ನನ್ನ ವಿರುದ್ಧ ಅಪಪ್ರಚಾರ ಮಾಡೋರಿಗೆ ಸಾಮಾನ್ಯ ಸಭೆಯಲ್ಲಿ ಉತ್ತರ ಕೊಡ್ತಿನಿ | ಮೀಸೆ ಮಹಾಲಿಂಗಪ್ಪ

ಅಂತಿಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿ ಡಾ.ಐಶ್ವರ್ಯ ಕೊಟ್ಟೂರು 6ನೇ ರ‍್ಯಾಂಕ್ ಪಡೆದಿದ್ದಾರೆ. ಸ್ನಾತಕ ವಿಭಾಗದಲ್ಲಿ ಡಾ.ವೈಷ್ಣವಿ ಕುಪ್ಪಲ – 3ನೇ ರ‍್ಯಾಂಕ್, ಡಾ.ರಚನಾ ಎಂ. – 5ನೇ ರ‍್ಯಾಂಕ್ ಸೇರಿದಂತೆ ಡಾ.ತನು ಬಾಲಕೃಷ್ಣ, ಡಾ.ಶ್ವೇತಾ ಟಿ., ಡಾ.ಹರ್ಷಿತಾ ಎಸ್.ಡಿ, ಡಾ. ಶ್ರೀಶಾ ಡಿ.ಎಂ., ಡಾ.ಚಿನ್ಮಯಿ ಚಿದಂಬರ್ ಕಂಬಾರ್, ಡಾ.ಶಿವಮೋಹನ್ ಎಸ್.ಎಂ., ಡಾ.ಸೈಯದಾ ಮಿಜ್ಬಾ ಮತ್ತು ಡಾ.ರೀತು ವೆಂಕಟೇಶ್ ಮುರುಡೇಶ್ವರ ಬಿ.ಡಿ.ಎಸ್. ಪರೀಕ್ಷೆಗಳ 2 ಮತ್ತು 4ನೇ ಸೆಮ್‌ಗಳ ವಿವಿಧ ವಿಷಯಗಳಲ್ಲಿ ಒಟ್ಟು 30 ರ‍್ಯಾಂಕ್‌ಗಳನ್ನು ಪಡೆದಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
