
ಚಿತ್ರದುರ್ಗ ನ್ಯೂಸ್.ಕಾಂ
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೊಧನಾ ಪರಿಷತ್‌ನಿಂದ ಡಿ.29 ಮತ್ತು 30 ರಂದು ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ರಾಜ್ಯ ಮಟ್ಟದ 3ನೇ ವೈಜ್ಞಾನಿಕ ಸಮ್ಮೇಳನ ಆಯೋಜಿಸಲಾಗಿದೆ. ರಾಜ್ಯಮಟ್ಟದ ಎಚ್‌ಎನ್ ಪ್ರಶಸ್ತಿಗೆ ಚಿತ್ರದುರ್ಗದ ಸ್ಲಂ ಹೋರಾಟಗಾರರ ಗಣೇಶ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪರಿಷತ್‌ನ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ್ ಸಂಗಮ್ ತಿಳಿಸಿದರು.
‘ವೈಚಾರಿಕ ಚಿಂತಕ, ಸಚಿವ ಸತೀಶ್ ಜಾರಕಿಹೊಳಿ ಸಮ್ಮೇಳನಾಧ್ಯಕ್ಷರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನ ಉದ್ಘಾಟಿಸಲಿದ್ದಾರೆ. ವಿಜ್ಞಾನ, ಖಗೋಳ, ತಂತ್ರಜ್ಞಾನ ಮತ್ತು ವಿಜ್ಞಾನ ವಸ್ತು ಪ್ರದರ್ಶನ, ಸಂಸ್ಥೆಯ ವಾರ್ಷಿಕ-2023 ರ ಪ್ರಶಸ್ತಿ, ಜೀವಮಾನ ಸಾಧನ ಹಾಗೂ ವಿಶಿಷ್ಟ ಸೇವಾ ಪ್ರಶಸ್ತಿ ಹಾಗೂ ಎಚ್.ಎನ್.ಪ್ರಶಸ್ತಿ ನೀಡಲಾಗುತ್ತದೆ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಇದನ್ನೂ ಓದಿ: ವೈಕುಂಠ ಏಕಾದಶಿಗೆ ಕೋಟೆನಾಡು ಸಜ್ಜು; ವೈಕುಂಠ ದ್ವಾರ ನಿರ್ಮಾಣ; ಭೂವರಾಹ ಸ್ವಾಮಿ ಅವತಾರ ದರ್ಶನ
‘ಸಮ್ಮೇಳನಾಧ್ಯಕ್ಷರಾದ ಜಸ್ಟೀಸ್ ನಾಗಮೋಹನ್ ದಾಸ್ ಸಮ್ಮೇಳನಾಧ್ಯಕ್ಷರ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಹುಲಿಕಲ್ ನಟರಾಜ್,ಸಚಿವರಾದ ಡಾ.ಶರಣ ಪ್ರಕಾಶ್ ಪಾಟೀಲ್, ಎನ್.ಎಸ್.ಬೋಸರಾಜು, ಪ್ರಿಯಾಂಕ ಖರ್ಗೆ, ಶಿವರಾಜ್ ಎಸ್.ತಂಗಡಗಿ, ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕ ಮಾನಪ್ಪ ಡಿ.ವಜ್ಜಲ್, ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ್ ಬಯ್ಯಾಪುರ, ವಿಜ್ಞಾನಿ ಡಾ.ಎ.ಎಸ್.ಕಿರಣ್ ಕುಮಾರ್, ಮಾಜಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಭಾಗವಹಿಸಲಿದ್ದಾರೆ’ ಎಂದರು.
ಇದನ್ನೂ ಓದಿ: 96 ಸಾಧಕರಿಗೆ ಸನ್ಮಾನ; 24ರಂದು ವಾಲ್ಮೀಕಿ ನಾಯಕ ನೌಕರರ ಸಮಾವೇಶ
‘ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್, ಸಾಹಿತಿ ಬಿ.ಟಿ.ಲಲಿತಾ ನಾಯಕ್, ಅಂತರರಾಷ್ಟ್ರೀಯ ಕೌಶಲ್ಯ ತರಬೇತುದಾರ ಚೇತನ್‌ರಾಮ್, ರಾಜ್ಯ ಪ್ರಶಸ್ತಿ ಪುರಸ್ಕೃತೆ ಅಕಾಯಿ ಪದ್ಮಸಾಲಿ, ಪ್ರಗತಿಪರ ಚಿಂತಕ ಮಾನಸಯ್ಯ ಅವರಿಗೆ ರಾಜ್ಯ ಮಟ್ಟದ ಜೀವಮಾನ ಸಾಧನ ಪ್ರಶಸ್ತಿ, ಜಗದೀಶ್, ರಕ್ಷಿತಾ, ಸುಧಾ, ಜಿ.ಸಿ.ಕಿರಣ್ ಕುಮಾರ್, ಬಸಮ್ಮ ತೆಗ್ಗಿನಮನಿ, ಮಂಜುನಾಥ, ನವೀನ್, ಎನ್.ಲಕ್ಷ್ಮೀದೇವಿ, ಜಯಪ್ರಸಾದ್, ಗೋಪಾಲ, ಆರ್.ರವಿ ಬಿಳಿಶಿವಾಲೆ ಇವರಿಗೆ ವಿಶಿಷ್ಟ ಸೇವಾ ಪ್ರಶಸ್ತಿ ನೀಡಿ ಗೌರವಹಿಸಲಾಗುತ್ತಿದೆ’ ಎಂದು ವಿವರಿಸಿದರು.
ಪರಿಷತ್ ಪ್ರಧಾನ ಕಾರ್ಯದರ್ಶಿ ಪಿ.ಲೋಕೇಶ್, ಪದಾಧಿಕಾರಿಗಳಾದ ಡಾ.ಗುರುನಾಥ್, ಜ್ಞಾನಮೂರ್ತಿ, ಖಜಾಂಚಿ ಪಿ.ಎ.ಬಸವರಾಜ್, ಎಂ.ರಂಗಪ್ಪ, ದಯಾನಂದ್ ಪಾಟೀಲ್ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
