CHITRADURGA NEWS | 22 NOVEMBER 2026
ಚಿತ್ರದುರ್ಗ: ರಾಜಕಾರಣ ಮಾಡುವಾಗ ಜಾತಿ, ಧರ್ಮದ ಲೆಕ್ಕಾಚಾರ ಮಾಡದೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದೇ ನನ್ನ ಉದ್ದೇಶ ಎಂದು ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ತಿಳಿಸಿದರು.
ಇದನ್ನೂ ಓದಿ: ಎಲೆಮರೆಯ ಸಾಧಕರಿಗೆ ಗೌರವ ಸಲ್ಲಿಸುವುದು ಶ್ರೇಷ್ಠ ಕಾರ್ಯ | ಟಿ.ರಘುಮೂರ್ತಿ
ತಾಲೂಕಿನ ಹಿರೇಗುಂಟನೂರು ಗ್ರಾಮದಲ್ಲಿ ಭಾನುವಾರ ಲೋಕೋಪಯೋಗಿ ಇಲಾಖೆಯಿಂದ ಸುಮಾರು 4 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ಕುಮಟ–ಕಡಮಡಗಿ ರಸ್ತೆಯ ಆಯ್ದ ಭಾಗಗಳಲ ಡಾಂಬರೀಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಲ್ಲಿ ರಸ್ತೆ ಸಂಪರ್ಕ ಪ್ರಮುಖ ಪಾತ್ರ ವಹಿಸುತ್ತದೆ. ಉತ್ತಮ ರಸ್ತೆಗಳಿಂದ ಗ್ರಾಮಗಳ ನಡುವಿನ ಸಂಪರ್ಕ ಸುಗಮವಾಗುವುದಲ್ಲದೆ, ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ರೈತರಿಗೆ ಅನುಕೂಲವಾಗುತ್ತದೆ. ಗ್ರಾಮೀಣ ಭಾಗದ ಜನರು ಆರೋಗ್ಯ ಸೇವೆ, ಶಿಕ್ಷಣ ಹಾಗೂ ಇತರೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ರಸ್ತೆ ಸಂಪರ್ಕ ಅತ್ಯಗತ್ಯವಾಗಿದೆ ಎಂದು ಹೇಳಿದರು.
ವರ್ಷಗಳಿಂದ ರಸ್ತೆ ದುರಸ್ತಿಗಾಗಿ ಕಾಯುತ್ತಿರುವ ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಆದ್ಯತೆಯ ಮೇರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ರಸ್ತೆ ಕಾಮಗಾರಿಗಳು ಕೇವಲ ದಾಖಲೆಗಳಿಗೆ ಸೀಮಿತವಾಗದೆ, ಸಾರ್ವಜನಿಕರಿಗೆ ದೀರ್ಘಕಾಲದವರೆಗೆ ಉಪಯೋಗವಾಗುವ ರೀತಿಯಲ್ಲಿ ನಿರ್ಮಾಣವಾಗಬೇಕು.
ಕಾಮಗಾರಿಯ ಗುಣಮಟ್ಟ, ಪ್ರಗತಿ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ವಿಶೇಷ ಗಮನಹರಿಸಬೇಕು. ಸಾರ್ವಜನಿಕರ ತೆರಿಗೆ ಹಣ ಸದ್ಬಳಕೆಯಾಗುವಂತೆ ಗುಣಮಟ್ಟದ ಕಾಮಗಾರಿಗಳನ್ನು ನಿರ್ವಹಿಸಬೇಕು ಎಂದು ಸೂಚಿಸಿದರು.
ಇದನ್ನೂ ಓದಿ: ಅಡಿಕೆ ತೋಟದಲ್ಲಿದ್ದ ರೈತನ ಮೇಲೆ ಮೂರು ಕರಡಿಗಳ ದಾಳಿ | ರೈತನ ಸ್ಥಿತಿ ಚಿಂತಾಜನಕ
ತಹಶಿಲ್ದಾರ್ ಬಿಬಿ ಫಾತಿಮಾ, ಇಂಜಿನಿಯರ್ಗಳಾದ ಲಾಲ್ ಸಾಬ್, ಪವನ್ ಮಂಜುನಾಥ್, ಕೆಡಿಪಿ ಸದಸ್ಯ ಸಂತೋಷ್, ಮುಖಂಡರಾದ ಹಳಿಯೂರು ನಾಗಣ್ಣ, ಕುಮಾರ್, ಮಂಜಣ್ಣ, ಮುನಾವರ್, ಜಾಕಿರ್ ಹುಸೇನ್, ತಿಪ್ಪೇಸ್ವಾಮಿ, ಜಯಮ್ಮ, ಲಾವಣ್ಯ, ಬೆನ್ನೂರು ಅಜ್ಜಣ್ಣ ಇತರರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

