CHITRADURGA NEWS | 11 SEPTEMBER 2026
ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ದಂಡಿನಕುರುಬನಹಟ್ಟಿ ಗ್ರಾಮದ ಗೇಟ್ ಬಳಿ ಅಕ್ರಮವಾಗಿ ಮಾರಾಟ ಮಾಡಲು ಇಟ್ಟುಕೊಂಡಿದ್ದ 4 ಕೆ.ಜಿ 170 ಗ್ರಾಂ ಒಣ ಗಾಂಜಾವನ್ನು ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ನಗರಸಭೆ ಮಾಜಿ ಸದಸ್ಯ ಸೈಯದ್ ಅಶ್ವಕ್ ಅಹಮದ್ ನಿಧನ
ಆಂಧ್ರಪ್ರದೇಶ ರಾಜ್ಯದ ಚಿನ್ನದೊಡ್ಡಿಗಲ್ಲು ಗ್ರಾಮದ ಕರಿ ಶ್ರೀನಿವಾಸ ಅಲಿಯಾಸ್ ಶ್ರೀನು ಬಂಧಿತ ಆರೋಪಿ.
ಚಿತ್ರದುರ್ಗದಿಂದ ಚಳ್ಳಕೆರೆಗೆ ಹೋಗುವ ರಾಜ್ಯ ಹೆದ್ದಾರಿ-48 ರ ದಂಡಿನಕುರುಬನಹಟ್ಟಿ ಗೇಟ್ ಬಳಿಯ ಬಸ್ ನಿಲ್ದಾಣದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತಿತ್ತು.
ಈ ಆಧಾರದ ಮೇಲೆ ಅಬಕಾರಿ ಉಪ ಅಧೀಕ್ಷಕರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಸೆಪ್ಟೆಂಬರ್ 07 ರಂದು ಸ್ಥಳದ ಮೇಲೆ ದಾಳಿ ನಡೆಸಿತು. ಈ ವೇಳೆ ಆರೋಪಿಯ ಬ್ಯಾಗ್ ಪರಿಶೀಲಿಸಿದಾಗ ಸುಮಾರು ರೂ.50,000 ಮೌಲ್ಯದ 4.170 ಕೆ.ಜಿ ಒಣ ಗಾಂಜಾ ಪತ್ತೆಯಾಗಿದೆ. ಅಧಿಕಾರಿಗಳು ಗಾಂಜಾವನ್ನು ಜಪ್ತಿ ಮಾಡಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಅಬಕಾರಿ ನಿರೀಕ್ಷಕರು, ಚಿತ್ರದುರ್ಗ ವಲಯ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಮೇಲಿನ ಇಡಿ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಅಪರ ಅಬಕಾರಿ ಆಯುಕ್ತರು, ಜಂಟಿ ಆಯುಕ್ತರು ಹಾಗೂ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ದಾಳಿಯಲ್ಲಿ ಅಬಕಾರಿ ಉಪ ಅಧೀಕ್ಷಕ ಸುರೇಂದ್ರ ಆಚಾರ್, ಅಬಕಾರಿ ನಿರೀಕ್ಷಕರಾದ ಕೆ.ಆರ್.ರಶ್ಮಿ, ಶಿವಶಂಕರ್ ಆರಾಧ್ಯ, ಉಪ ನಿರೀಕ್ಷಕರಾದ ಹಸನಸಾಬ ನದಾಫ, ಬಿ.ಮೂರ್ತಿ, ಮಂಜುಳಮ್ಮ, ಸಿಬ್ಬಂದಿಗಳಾದ ಎಂ.ಮಾರುತಿ, ಜಿ.ರಂಗಪ್ಪ ಹಾಗೂ ಗೃಹ ರಕ್ಷಕ ಸಿಬ್ಬಂದಿ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

