CHITRADURGA NEWS | 21 OCTOBER 2024
ಚಿತ್ರದುರ್ಗ: ಭಾನುವಾರ ರಾತ್ರಿ ಸುರಿದ ಮಳೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ 48 ಮನೆ ಹಾನಿ(House Damage)ಯಾಗಿದ್ದು, ಜಿಲ್ಲೆಯಲ್ಲಿ ಸರಾಸರಿ 14.3 ಮಿ.ಮೀ ಮಳೆ(rain)ಯಾಗಿದೆ.
ಕ್ಲಿಕ್ ಮಾಡಿ ಓದಿ: APMC; ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ಧಾರಣೆ ಎಷ್ಟಿದೆ?
ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 2 ಮಿ.ಮೀ, ನಾಯಕನಹಟ್ಟಿ 22.3 ಮಿ.ಮೀ, ಪರಶುರಾಂಪುರ 1.3 ಮಿ.ಮೀ, ತಳಕು 7.4 ಮಿ.ಮೀ ಮಳೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 11.5 ಮಿ.ಮೀ, ಭರಮಸಾಗರ 33.9 ಮಿ.ಮೀ, ಹಿರೇಗುಂಟನೂರು 15.5 ಮಿ.ಮೀ, ತುರುವನೂರು 16.4 ಮಿ.ಮೀ ಮಳೆಯಾಗಿದೆ.
ಹಿರಿಯೂರು ತಾಲ್ಲೂಕಿನ ಹಿರಿಯೂರು 22.5 ಮಿ.ಮೀ, ಐಮಂಗಲ 8.3 ಮಿ.ಮೀ, ಧರ್ಮಪುರ 3.3 ಮಿ.ಮೀ, ಜವನಗೊಂಡನಹಳ್ಳಿ 3.6 ಮಿ.ಮೀ ಮಳೆಯಾಗಿದೆ.
ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 31.1 ಮಿ.ಮೀ, ಬಿ.ದುರ್ಗ 32.6 ಮಿ.ಮೀ, ರಾಮಗಿರಿ 31.3 ಮಿ.ಮೀ, ತಾಳ್ಯ 10.8 ಮಿ.ಮೀ ಮಳೆಯಾಗಿದೆ.
ಕ್ಲಿಕ್ ಮಾಡಿ ಓದಿ: VaniVilasaSagara: ವಿವಿ ಸಾಗರ ಭರ್ತಿಗೆ ಇನ್ನು 6 ಅಡಿ ಬಾಕಿ | ಚಿತ್ತಾ ಮಳೆ ಆರ್ಭಟಕ್ಕೆ ಹೆಚ್ಚಾದ ಒಳಹರಿವು
ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 13.5 ಮಿ.ಮೀ, ಮಾಡದಕೆರೆ 15.9 ಮಿ.ಮೀ, ಮತ್ತೋಡು 16.2 ಮಿ.ಮೀ, ಶ್ರೀರಾಂಪುರ 10.2 ಮಿ.ಮೀ ಮಳೆಯಾಗಿದೆ.
ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 29.9 ಮಿ.ಮೀ ಹಾಗೂ ದೇವಸಮುದ್ರದಲ್ಲಿ 19.8 ಮಿ.ಮೀ ಮಳೆಯಾಗಿದೆ.
48 ಮನೆಗಳು ಭಾಗಶಃ ಹಾನಿ:
ಭಾನುವಾರ ರಾತ್ರಿ ಸುರಿದ ಮಳೆಗೆ ಜಿಲ್ಲೆಯಾದ್ಯಂತ 48 ಮನೆಗಳು ಭಾಗಶಃ ಹಾನಿಯಾಗಿದ್ದು, 18 ಮನೆಗಳಿಗೆ ನೀರು ನುಗ್ಗಿರುವ ಪ್ರಕರಣ, ಒಂದು ದೊಡ್ಡ ಜಾನುವಾರು ಹಾನಿ ಹಾಗೂ 2 ಹೆಕ್ಟೇರ್ ಕೃಷಿ ಬೆಳೆ ಹಾಗೂ 1 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ.
ಕ್ಲಿಕ್ ಮಾಡಿ ಓದಿ: RSS RouteMarch | ಹಿಂದೂ ಸಂಘಟನೆ, ವ್ಯಕ್ತಿ ನಿರ್ಮಾಣ ಆರೆಸ್ಸೆಸ್ಸ್ ಆದ್ಯತೆ | ಯಾದವಕೃಷ್ಣ
ಚಿತ್ರದುರ್ಗ ತಾಲ್ಲೂಕಿನಲ್ಲಿ 6 ಮನೆಗಳು ಭಾಗಶಃ ಹಾನಿ, ಚಳ್ಳಕೆರೆ 10 ಮನೆಗಳು ಹಾಗೂ 1 ದೊಡ್ಡ ಜಾನುವಾರು ಹಾನಿ, 12 ಮನೆಗಳಿಗೆ ನೀರು ನುಗ್ಗಿರುವ ಪ್ರಕರಣ, 1 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾಗೂ 2 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ.
ಹೊಳಲ್ಕೆರೆ 18 ಮನೆಗಳು, ಹೊಸದುರ್ಗ 2 ಮನೆಗಳು ಭಾಗಶಃ ಹಾನಿ ಹಾಗೂ 1 ಮನೆಗೆ ನೀರು ನುಗ್ಗಿದೆ. ಹಿರಿಯೂರು ತಾಲ್ಲೂಕಿನಲ್ಲಿ 4 ಮನೆಗಳು ಭಾಗಶಃ ಹಾನಿ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 8 ಮನೆಗಳು ಭಾಗಶಃ ಹಾನಿ ಹಾಗೂ 5 ಮನೆಗಳಿಗೆ ನೀರು ನುಗ್ಗಿರುವ ಪ್ರಕರಣ ವರದಿಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number