ಮುಖ್ಯ ಸುದ್ದಿ
ವಿದ್ಯುತ್ ಶಾರ್ಟ್ ಸರ್ಕ್ಯೂಟ್ 35 ಕುರಿ ಮೃತ | ತೆಂಗಿನ ಮರಗಳಿಗೂ ಬೆಂಕಿ

CHITRADURGA NEWS | 31 MARCH 2024
ಚಿತ್ರದುರ್ಗ: ಅಗ್ನಿ ಆಕಸ್ಮಿಕಕ್ಕೆ 35 ಕುರಿ ಮೃತಪಟ್ಟಿದ್ದು, 10 ತೆಂಗಿನ ಮರ ಹಾಗೂ ಎರಡು ಕುರಿ ಶೆಡ್‌ಗಳು ಸುಟ್ಟು ಕರಕಲಾದ ಘಟನೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಓಣಿಹಟ್ಟಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ತೆಂಗಿನ ಮರಕ್ಕೆ ಬೆಂಕಿ ತಗುಲಿ ಬೆಂಕಿ ಹತ್ತಿಕೊಂಡು ಕುರಿಗಳು ಹಾಗೂ ಕುರಿಶೆಡ್‌ಗಳು ಸುಟ್ಟಿವೆ. ಓಣಿಹಟ್ಟಿ ಗ್ರಾಮದ ಚಿತ್ತಪ್ಪ, ಶಿವಣ್ಣ, ಚಿತ್ತಯ್ಯ ಅವರಿಗೆ ಕುರಿ ಹಾಗೂ ಎರಡು ಕುರಿಶೆಡ್‌ಗಳು ಸೇರಿವೆ. ಸಂಜೆ ಶೆಡ್‌ಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ವ್ಯಾಪಕವಾಗಿ ಹರಡಿದೆ. ಅದರಲ್ಲಿದ್ದ 15 ಕುರಿಗಳು, ಮೇಕೆ ಹಾಗೂ 20 ಕುರಿಮರಿಗಳು ಸುಟ್ಟು ಕರಕಲಾಗಿದ್ದು, ಸಮೀಪದ 10 ತೆಂಗಿನ ಮರಗಳೂ ಬೆಂಕಿಯಲ್ಲಿ ಸುಟ್ಟಿವೆ.
ಕ್ಲಿಕ್ ಮಾಡಿ ಓದಿ: ನಾಲ್ವರು ಶಿಕ್ಷಕರು ಅಮಾನತು | ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಕರ್ತವ್ಯ ಲೋಪ

ವಿಷಯ ತಿಳಿದ ತಕ್ಷಣವೇ ಪಶುವೈದ್ಯ ಹುಸೇನ್, ಡೆಪ್ಯುಟಿ ತಹಶೀಲ್ದಾರ್ ಜಗನ್ನಾಥ್, ವಿಎ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸಲಾಗುತ್ತದೆ ಎಂದು ಈ ತಹಶೀಲ್ದಾರ್ ಸಿ.ರಾಜೇಶ್ ಕುಮಾರ್ ತಿಳಿಸಿದ್ದಾರೆ.
