ಮುಖ್ಯ ಸುದ್ದಿ
ಸರ್ಕಾರಿ ನೌಕರರ ಸಮ್ಮೇಳನಕ್ಕೆ ಚಿತ್ರದುರ್ಗದಿಂದ 5 ಸಾವಿರ ನೌಕರರು ಭಾಗೀ | ಜಿಲ್ಲಾಧ್ಯಕ್ಷ ಕೆ.ಟಿ. ತಿಮ್ಮಾರೆಡ್ಡಿ

CHITRADURGA NEWS | 25 FEBRUARY 2024
ಚಿತ್ರದುರ್ಗ : ಫೆಬ್ರವರಿ 27 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸುಮಾರು 2 ರಿಂದ 3 ಲಕ್ಷ ನೌಕರರು ಭಾಗವಹಿಸುತ್ತಿದ್ದು, ಚಿತ್ರದುರ್ಗ ಜಿಲ್ಲೆಯಿಂದ ಸುಮಾರು 5000 ಸಾವಿರ ನೌಕರರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಟಿ. ತಿಮ್ಮಾರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಇದನ್ನೂ ಓದಿ: ಮಾದಾರ ಚನ್ನಯ್ಯ ಮಠವನ್ನು ರಾಜಕೀಯವಾಗಿ ಬಳಕೆ ಮಾಡಿಕೊಳ್ಳಲ್ಲ | ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸ್ ಮೂಲಕ ತೆರಳುವ ನೌಕರರಿಗೆ ಜಿಲ್ಲಾ ಕೇಂದ್ರ ಸ್ಥಾನ ಹಾಗೂ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಬಸ್ ಗಳ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಹಾಗೂ ಆಯಾ ತಾಲ್ಲೂಕುಗಳ ಶಾಖೆಗಳ ವತಿಯಿಂದ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದರು.
ಜಿಲ್ಲಾ ಕೇಂದ್ರ ಚಿತ್ರದುರ್ಗದಿಂದ 20 ಬಸ್ ಹಾಗೂ ಆಯಾ ತಾಲ್ಲೂಕು ಕೇಂದ್ರಗಳಿಂದ ತಲಾ 10 ಬಸ್‍ಗಳು ಒಟ್ಟು 70 ಬಸ್ಸುಗಳ ವ್ಯವಸ್ಥೆ ಮಾಡಲಾಗಿದ್ದು, ಆಯಾ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುವ ನೌಕರರು ತಮ್ಮ ತಮ್ಮ ತಾಲ್ಲೂಕು ಕೇಂದ್ರಗಳ ಮೂಲಕ ಹೊರಡುವ ಬಸ್ ಗಳಲ್ಲಿ ಸಮ್ಮೇಳನ ಸ್ಥಳಕ್ಕೆ ಹೋಗಬಹುದಾಗಿರುತ್ತದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ | ಜೆಡಿಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಗೆಲ್ಲಿಸೋಣ
ಚಿತ್ರದುರ್ಗ ಕೇಂದ್ರ ಸ್ಥಾನದಲ್ಲಿ 20 ಬಸ್‍ಗಳ ವ್ಯವಸ್ಥೆ ಕಲ್ಪಿಸಿದ್ದು, ಐ.ಬಿ ಮುಂಭಾಗದ ಹಳೆ ಮಾಧ್ಯಮಿಕ ಶಾಲಾವಣದಲ್ಲಿ ಬಸ್‍ಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದ್ದು, ಅಂದು ಬೆಳಗ್ಗೆ 6 ಗಂಟೆಗೆ ಬಸ್ ಹೊರಡುವುದರಿಂದ ನೌಕರರು ಸ್ಥಳದಲ್ಲಿ ಹಾಜರಿದ್ದು ಸಮ್ಮೇಳನಕ್ಕೆ ತಲುಪಬಹುದಾಗಿರುತ್ತದೆ ಎಂದರು.
ಸಮ್ಮೇಳನದಲ್ಲಿ ಭಾಗವಹಿಸುವ ನೌಕರರಿಗೆ ಫೆಬ್ರವರಿ 27 ಮತ್ತು 28ರ ಎರಡು ದಿನ ವಿಶೇಷ ಸಾಂದರ್ಭಿಕ ರಜೆಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಸಮ್ಮೇಳನದಲ್ಲಿ ಭಾಗವಹಿಸುವ ನೌಕರರು ತಮ್ಮ ಇಲಾಖೆಯ ಮುಖ್ಯಸ್ಥರಿಗೆ ಈ ಬಗ್ಗೆ ಮನವಿ ಸಲ್ಲಿಸಿ ಸೌಲಭ್ಯ ಪಡೆದುಕೋಳ್ಳಬಹುದಾಗಿರುತ್ತದೆ ಎಂದು ತಿಳಿಸಿದರು.
ಈ ಇದನ್ನೂ ಓದಿ: 16 ಹೊಸ ಮಳಿಗೆ ನಿರ್ಮಾಣಕ್ಕೆ ಚಾಲನೆ ನೀಡಿದ ಶಾಸಕ ಎಂ. ಚಂದ್ರಪ್ಪ
ಸಮ್ಮೇಳನದಲ್ಲಿ ಹಳೆ ಪಿಂಚಣಿ ಯೋಜನೆ ಮರು ಜಾರಿ, ಏಳನೇ ವೇತನ ಆಯೋಗದ ವರದಿ ಅನುಷ್ಠಾನ, ಆರೋಗ್ಯ ಸಂಜೀವಿನಿ ಯೋಜನೆ ಲೋಕಾರ್ಪಣೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ಎಸ್. ಕೆ.ಮಂಜುನಾಥ್, ಜಿಲ್ಲಾ ಖಜಾಂಚಿ ವೀರೇಶ್, ರಾಜ್ಯ ಪರಿಷತ್ತು ಸದಸ್ಯ ಭಾಗೇಶ್ ಆರ್ ಉಗ್ರಾಣ, ಜಿಲ್ಲಾ ಗೌರವಾಧ್ಯಕ್ಷ ಲೋಕೇಶ್ ಸುಧಾ, ಸಿದ್ದೇಶ್, ಬಾಲಪ್ಪ ಚಂದ್ರನಾಯ್ಕ್ ಸೇರಿದಂತೆ ಇತರರು ಭಾಗವಹಿಸಿದ್ದರು.
