ಚಿತ್ರದುರ್ಗ: ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‍ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಸರ್ಕಾರವು 2025ನೇ ಆಗಸ್ಟ್ 21 ರಂದು ಆದೇಶ ಹೊರಡಿಸಿದೆ.
ಇದನ್ನೂ ಓದಿ: ಸಚಿವ ಡಿ.ಸುಧಾಕರ್ ಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ | ಸಹಕಾರ ಕ್ಷೇತ್ರದ ಗಣನೀಯ ಸೇವೆಗೆ ಸಂದ ಗೌರವ
ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ.
ಸರ್ಕಾರದ ಆದೇಶದ ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (one time measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.
ಸರ್ಕಾರದ ದಿನಾಂಕ: 03-03-2023ರ ಆದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‍ನಲ್ಲಿ ದಿನಾಂಕ:11.02.2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ. ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.
ಇದನ್ನೂ ಓದಿ: ಹಿರಿಯೂರು ಮಾಜಿ ಶಾಸಕ ಆರ್.ರಾಮಯ್ಯ ನಿಧನ
ಸರ್ಕಾರದ ದಿನಾಂಕ 05-07-2023 ರ ಆದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‍ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಹಾಗೂ ಈ ರಿಯಾಯಿತಿಯು ದಿನಾಂಕ:09.09.2023 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ದಿನಾಂಕ 26-06-2025 ಮತ್ತು ದಿನಾಂಕ 12-08-2025 ಪತ್ರಗಳಲ್ಲಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50%ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ದಿನಾಂಕ:05.07.2025 ರಿಂದ 11.07.2025ರವರೆಗೆ ಕಾಲಾವಕಾಶವನ್ನು ಕಲ್ಪಿಸಿ ಆದೇಶ ಹೊರಡಿಸುವಂತೆ ಕೋರಲಾಗಿತ್ತು.
ಮುಂದುವರೆದು ಸದರಿ ಅವಧಿಯು ಮುಕ್ತಾಯವಾಗಿರುವುದರಿಂದ ಸದರಿ ಕಾಲಾವಕಾಶವನ್ನು ದಿನಾಂಕ:23.08.2025 ರಿಂದ 12.09.2025ರವರೆಗೆ ಕಲ್ಪಿಸುವಂತೆ ಕೋರಿರುತ್ತಾರೆ.
ಇದನ್ನೂ ಓದಿ: ಮಳೆಯಿಂದ ಈರುಳ್ಳಿ ಬೆಳೆ ಹಾನಿ | ಪರಿಹಾರಕ್ಕೆ ಅರ್ಜಿ
ಬೆಂಗಳೂರು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ದಿನಾಂಕ 04-03-2025 ರ ಪ್ರಸ್ತಾವನೆಯಲ್ಲಿ ಪೆÇಲೀಸ್ ಇಲಾಖೆಯ ಸಂಚಾರಿ e-Challan ಗಳಲ್ಲಿ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ 2018-19ನೇ ಸಾಲಿನ ಪೂರ್ವದಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ವಾಹನ ಮಾಲೀಕರುಗಳಿಂದ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸುವಂತೆ ಕೋರಿರುತ್ತಾರೆ.
ಈ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಆದೇಶಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
