
ಚಿತ್ರದುರ್ಗ ನ್ಯೂಸ್.ಕಾಂ: ಹೊಸ ವರ್ಷ 2024ರಲ್ಲಿ ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಚಿತ್ರದುರ್ಗ ತಾಲೂಕು ಸೀಬಾರದ ವಿಶ್ವ ಮಾನವ ವಸತಿ ಶಾಲೆಯ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರ ಜೊತೆ ಮಾತನಾಡಿದರು.

ಈ ವೇಳೆ ಮುಂದಿನ ಮೂರು ವರ್ಷದಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ ತೆರೆಯಲು ಯೋಜನೆ ರೂಪಿಸಲಾಗಿದೆ. ರಾಜ್ಯದಲ್ಲಿ ಸುಮಾರು 6 ಸಾವಿರ ಗ್ರಾಮ ಪಂಚಾಯಿತಿಗಳಿದ್ದು, 2 ಗ್ರಾಮ ಪಂಚಾಯಿತಿಗಳಿಗೆ ಒಂದರಂತೆ ಒಟ್ಟು 3 ಸಾವಿರ ಕೆಪಿಎಸ್ ಶಾಲೆಗಳನ್ನು ತೆರೆಯುವ ಗುರಿ ಹಾಕಿಕೊಂಡಿದ್ದೇವೆ ಎಂದರು.
ಕನ್ನಡ ಮಾಧ್ಯಮ ಕಡ್ಡಾಯ, ಇದರ ಜತೆಯಲ್ಲಿ ಆಂಗ್ಲ ಮಾಧ್ಯಮ, ಸಂಗೀತ, ಚಿತ್ರಕಲೆ, ದೈಹಿಕ ಶಿಕ್ಷಣ ಸೇರಿದಂತೆ ಮತ್ತಿತರ ಅಗತ್ಯ ಮೂಲ ಸೌಲಭ್ಯ ಒದಗಿಸಿ ಒಂದೇ ಆವರಣದಲ್ಲಿ ಎಲ್‍ಕೆಜಿ, ಯುಕೆಜಿ ಯಿಂದ ಹಿಡಿದು 12ನೇ ತರಗತಿವರೆಗೆ ಉತ್ತಮ ಶಿಕ್ಷಣ ಒದಗಿಸುವ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ: ರಾಯಲ್ ಎನ್ ಫೀಲ್ಡ್-ಆಟೋ ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರ ದುರ್ಮರಣ
ಶಾಲೆಗಳಲ್ಲಿ ಶೌಚಾಲಯ ಸ್ವಚ್ಚತೆಯ ನಿರ್ವಹಣೆ ಕುರಿತಂತೆ ಈಗಾಗಲೇ ಒಂದು ಯೋಜನೆ, ವಿಧಾನ ರೂಪಿಸಿ ಆದೇಶ ಹೊರಡಿಸಲಾಗಿದೆ. ಸ್ವಚ್ಛತೆ ನಿರ್ವಹಣೆಗೆ ಶಾಲೆಗಳಿಗೆ ಸಿಬ್ಬಂಧಿ ನೀಡಲು ಸಾಧ್ಯವಾಗದಿದ್ದರೆ ಈಗ ಮೀಸಲಿರುವ ಅನುದಾನವನ್ನು ದ್ವಿಗುಣಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಆದೇಶಿಸಿದ್ದಾರೆ.
ಮಕ್ಕಳಿಂದ ಶೌಚಾಲಯ ಸ್ವಚ್ಚತೆ ಮಾಡಿಸುವುದು ತಪ್ಪು, ಪೆನ್ನು ಹಿಡಿಯುವ ಮಕ್ಕಳ ಕೈಗೆ ಕಸಪೊರಕೆ ಕೊಡುವುದು ಸರಿಯಲ್ಲ, ಇದು ಅಪರಾಧ ಆಗುತ್ತದೆ. ಸವಲತ್ತುಗಳನ್ನು ಕೊಡುವಲ್ಲಿ ನಾವು ಕೂಡ ಹಿಂದೆ ಇದ್ದೇವೆ. ಮಕ್ಕಳ ಸಂಖ್ಯೆ ಹಾಗೂ ಶೌಚಾಲಯಗಳ ಸಂಖ್ಯೆಗೆ ಅನುಗುಣವಾಗಿ ಅನುದಾನ ಮೀಸಲಿಡಲು ವ್ಯವಸ್ಥಿತ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
