
CHITRADURGA NEWS | 24 JANUARY 2024
ಚಿತ್ರದುರ್ಗ: ಚಿತ್ರದುರ್ಗ ನಗರದ ಬರಗೇರಿ ಬೀದಿಯ ಯುವತಿಯನ್ನು ತಾಲೂಕಿನ ಕುರುಬರಹಳ್ಳಿಯ ಯುವಕ ಕಿರಣ್‍ಕುಮಾರ್ ಎಂಬುವವನು ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ 6 ತಿಂಗಳು ಸಜೆ ಹಾಗೂ 20 ಸಾವಿರ ದಂಡ ವಿಧಿಸಿ ಆದೇಶಿಸಿದೆ.
2020 ಜುಲೈ 18 ರಂದು ಯುವತಿಯನ್ನು ಮನೆಯಿಂದ ಆಟೋದಲ್ಲಿ ನಗರದ ಖಾಸಗಿ ಲಾಡ್ಜ್‍ಗೆ ಕರೆದೊಯ್ದು, ನಾನು ನಿನ್ನನ್ನು ಬಿಟ್ಟು ಬೇರೆ ಯಾರನ್ನೂ ಮದುವೆ ಆಗುವುದಿಲ್ಲ ಎಂದು ನಂಬಿಸಿ, ಆಕೆಯ ಇಚ್ಚೆಗೆ ವಿರುದ್ಧವಾಗಿ ಅತ್ಯಾಚಾರವೆಸಗಿದ್ದಾನೆ. ಆನಂತರ ಮದುವೆಯಾಗಲು ನಿರಾಕರಿಸಿದ್ದ.
ಇದನ್ನೂ ಓದಿ: ನೂತನ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರ ಸ್ವೀಕಾರ
ಈ ಸಂಬಂಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ದೂರು ದಾಖಲಿಸಲಾಗಿತ್ತು.
ಸದರಿ ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಕೆ.ಗೀತಾ ಅಪರಾಧಿ ಕಿರಣ್‍ಕುಮಾರ್‍ಗೆ 6 ತಿಂಗಳು ಸಜೆ ಹಾಗೂ 20 ಸಾವಿರ ದಂಡ ವಿಧಿಸಿ ಜನವರಿ 22 ರಂದು ತೀರ್ಪು ನೀಡಿದ್ದಾರೆ.
ಪ್ರಕರಣದಲ್ಲಿ ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕ ಬಿ.ಗಣೇಶ್ ನಾಯ್ಕ್ ವಾದ ಮಂಡಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
