CHITRADURGA NEWS | 14 SEPTEMBER 2026
ಚಿತ್ರದುರ್ಗ: ನಗರದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಮುದಾಯ ಭವನದಲ್ಲಿ ಚಿತ್ರದುರ್ಗ ಮತ್ತು ಹಿರಿಯೂರು ವಿಭಾಗೀಯ ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ನೌಕರರ ಪತ್ತಿನ ಸಹಕಾರ ಸಂಘ ನಿಯಮಿತದ 66ನೇ ವಾರ್ಷಿಕ ಮಹಾಸಭೆ ನಡೆಯಿತು.
ಇದನ್ನೂ ಓದಿ: ಅರ್ಜಿಗಳನ್ನು ರಿಜಿಸ್ಟ್ರೇಷನ್‌ಗೆ ಸೀಮಿತಗೊಳಿಸದೆ, ಸಮಸ್ಯೆಗಳಿಗೆ ಪರಿಹಾರ ನೀಡಿ | ಸಚಿವ ಟಿ.ರಘುಮೂರ್ತಿ
ವಾರ್ಷಿಕ ವರದಿ ಮಂಡಿಸಿದ ಸಂಘದ ಕಾರ್ಯದರ್ಶಿ ಕೆ.ವೀರೇಶ್, ಸಹಕಾರ ಸಂಘವು 1,236 ಸದಸ್ಯರನ್ನು ಹೊಂದಿದ್ದು, ರೂ. 8.58 ಕೋಟಿ ಷೇರು ಬಂಡವಾಳ ಹೊಂದಿದೆ ಎಂದು ತಿಳಿಸಿದರು.
ಪ್ರಸಕ್ತ ಸಾಲಿನಲ್ಲಿ ಸಂಘವು ರೂ. 1.55 ಕೋಟಿ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇಕಡ 13 ರಷ್ಟು ಡಿವಿಡೆಂಡ್ ವಿತರಿಸಲು ಸಭೆಯಲ್ಲಿ ಸರ್ವಾನುಮತದ ಒಪ್ಪಿಗೆ ಪಡೆಯಲಾಯಿತು.
ಬೆಸ್ಕಾಂ ಚಿತ್ರದುರ್ಗ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಲಿಂಗರಾಜು ಮಾತನಾಡಿ, ಸಂಘವು ತನ್ನ ಸದಸ್ಯರಿಗೆ ವಿವಿಧ ರೀತಿಯಲ್ಲಿ ರೂ. 11 ಲಕ್ಷದವರೆಗೆ ಸಾಲ ಸೌಲಭ್ಯ ಒದಗಿಸುತ್ತಾ ಉತ್ತಮ ಆರ್ಥಿಕ ನೆರವು ನೀಡುತ್ತಿದ್ದು, ಸಂಸ್ಥೆಯು ಇನ್ನಷ್ಟು ಉನ್ನತ ಮಟ್ಟಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು.
ಇದನ್ನೂ ಓದಿ: ಭದ್ರ ಹರಿವ ಸಂತಸ | ಲಕ್ಷ ಸಿಹಿ ಹಂಚಿ ಸಂಭ್ರಮ | ಭೋವಿ ಗುರುಪೀಠದಿಂದ ವಿಶೇಷ ಪೂಜೆ
ಅಧ್ಯಕ್ಷತೆ ವಹಿಸಿದ್ದ ಕೆ.ಪಿ.ಬಸವರಾಜ್ ಮಾತನಾಡಿ, ಸಂಘ ನೀಡುತ್ತಿರುವ ಸಾಲದ ಮೊತ್ತ ಸಾಲದೆ ಸದಸ್ಯರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ದುಬಾರಿ ಬಡ್ಡಿದರಕ್ಕೆ ಸಾಲ ಪಡೆಯುವಂತಾಗಿದೆ. ಇದನ್ನು ತಪ್ಪಿಸಲು ಸಂಘದ ವತಿಯಿಂದಲೇ ಹೆಚ್ಚಿನ ಮೊತ್ತದ ಸಾಲ ಸೌಲಭ್ಯ ಒದಗಿಸಲು ಯೋಜನೆ ರೂಪಿಸಲಾಗುತ್ತಿದ್ದು, ಸಂಸ್ಥೆಯ ಬೆಳವಣಿಗೆಗೆ ಎಲ್ಲ ಸದಸ್ಯರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಸದಸ್ಯರ ಮರಣ ಪರಿಹಾರ ನಿಧಿಯನ್ನು ರೂ. 25,000 ದಿಂದ ರೂ. 30,000 ಕ್ಕೆ ಹೆಚ್ಚಿಸಲು ಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳಲಾಯಿತು.
ಸಮಾರಂಭದಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಇದನ್ನೂ ಓದಿ: ಶಾಂತಿಯುತ ಗೌರಿ ಗಣೇಶ ಹಬ್ಬ ಆಚರಿಸಲು ಪೊಲೀಸ್ ಇಲಾಖೆ ಮನವಿ
ಉಪಾಧ್ಯಕ್ಷ ದೇವರಾಜ್, ನಿರ್ದೇಶಕರಾದ ಗೋವರ್ಧನ್, ಪರಮೇಶ್, , ಮಮತಾ, ಕೋಮಲ, ರವಿಕುಮಾರ್, ಅಭಿಷೇಕ್, ತಿಪ್ಪೇಸ್ವಾಮಿ, ಮಂಜುನಾಥ್, ಶಾಂತಕುಮಾರ್, ರಾಜಗೋಪಾಲ್, ಮುನಾವರ್ ಮನ್ಸೂರ್ ಖಾನ್, ನರಸಿಂಹಮೂರ್ತಿ ಇತರರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

