By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ
    ಚಿತ್ರದುರ್ಗದಲ್ಲಿ ಯಕ್ಷಗಾನ ತಾಳಮದ್ದಳೆ | ಆಲಾಪಕ್ಕೆ ತಲೆದೂಗಿದ ಯಕ್ಷಗಾನ ಪ್ರಿಯರು
    50 minutes ago
    ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ ಪ್ರಗತಿ ಪರಿಶೀಲನಾ ಸಭೆಯ ಸಿದ್ಧತೆ ಪರಿಶೀಲನೆ
    ಬರದ ನಾಡಲ್ಲಿ ಮುಖ್ಯಮಂತ್ರಿ ಪ್ರಗತಿ ಪರಿಶೀಲನಾ ಸಭೆ | ಅನುಭವ ಮಂಟಪದಲ್ಲಿ ಭರದ ತಯಾರಿ
    55 minutes ago
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    13 hours ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    13 hours ago
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 day ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    15 hours ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    3 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    5 hours ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    5 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    5 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    13 hours ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    14 hours ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    2 days ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    2 days ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    3 days ago
Reading: ರೈತರ ಕೃಷಿ ಪಂಪ್ ಸೆಟ್ ಗಳಿಗೆ ಪ್ರತಿದಿನ 7 ತಾಸು ವಿದ್ಯುತ್ | ಸಚಿವ ಕೆ.ಜೆ.ಜಾರ್ಜ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ರೈತರ ಕೃಷಿ ಪಂಪ್ ಸೆಟ್ ಗಳಿಗೆ ಪ್ರತಿದಿನ 7 ತಾಸು ವಿದ್ಯುತ್ | ಸಚಿವ ಕೆ.ಜೆ.ಜಾರ್ಜ್

News Desk Chitradurga News
Last updated: 31 December 2024 10:19
News Desk Chitradurga News
2 years ago
Share
Minister KJ George
ಸೋಲಾರ್ ಪಾರ್ಕ್”ಗೆ ಸಚಿವ ಕೆ.ಜೆ.ಜಾರ್ಜ್ ಭೇಟಿ
SHARE

CHITRADURGA NEWS | 31 DECEMBER 2024

ಚಿತ್ರದುರ್ಗ: ರೈತರ ಕೃಷಿ ಮತ್ತು ನೀರಾವರಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಕುಸುಮ್ ಯೋಜನೆ ರೈತರಿಗೆ ವರದಾನವಾಗಲಿದೆ ಎಂದು ಇಂದನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ಕ್ಲಿಕ್ ಮಾಡಿ ಓದಿ: ದಿನ ಭವಿಷ್ಯ | ಡಿಸೆಂಬರ್ 31 | ಹಣಕಾಸಿನ ವ್ಯವಹಾರಗಳಲ್ಲಿ ಅನುಕೂಲ, ದೀರ್ಘಕಾಲದ ಸಮಸ್ಯೆಗಳು ನಿವಾರಣೆ

ಹೊಸದುರ್ಗ ತಾಲ್ಲೂಕಿನ ನೀರಗುಂದ ಗೇಟ್ ಹತ್ತಿರ ಕುಸುಮ್-ಸಿ ಯೋಜನೆಯಡಿ ಸ್ಥಾಪಿತವಾಗಿರುವ “ಸೋಲಾರ್ ಪಾರ್ಕ್”ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕುಸುಮ್ ಬಿ ಮತ್ತು ಸಿ ಯೋಜನೆಗೆ ರಾಜ್ಯದಲ್ಲಿ ಈಗಾಗಲೇ ಚಾಲನೆ ನೀಡಲಾಗಿದ್ದು, ಈ ಯೋಜನೆಯಿಂದಾಗಿ ರೈತರಿಗೆ ತಮ್ಮ ಕೃಷಿ ಮತ್ತು ನೀರಾವರಿ ಪಂಪ್‍ಸೆಟ್‍ಗಳಿಗೆ ಹಗಲಿನಲ್ಲಿ 7 ಗಂಟೆಗಳ ಕಾಲ ನಿರಂತರ ಗುಣಮಟ್ಟದ ವಿದ್ಯುತ್ ದೊರೆಯಲಿದೆ ಎಂದು ಹೇಳಿದರು.

ಈಗಾಗಲೇ ರಾಜ್ಯಾದ್ಯಂತ 3 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ ಸ್ಥಳ ಗುರುತಿಸಲಾಗಿದ್ದು, ಮುಖ್ಯಮಂತ್ರಿಗಳ ಸೂಚನೆಯಂತೆ ಒಂದು ತಿಂಗಳಲ್ಲಿ 500 ರಿಂದ 600 ಮೆಗಾ ವ್ಯಾಟ್ ಉತ್ಪಾದನೆ ಮಾಡುವ ನಿಟ್ಟಿನಲ್ಲಿ ಅಗತ್ಯ ತಯಾರಿಗಳು ನಡೆದಿವೆ. ವಿದ್ಯುತ್ ಉಪಕೇಂದ್ರಗಳು ಇರುವ ಸ್ಥಳಗಳ ಹತ್ತಿರ ಒಂದು ಮೆಗಾ ವ್ಯಾಟ್ ಉತ್ಪಾದನೆಗೆ ಕನಿಷ್ಟ ಸುಮಾರು 4 ಎಕರೆ ಜಮೀನು ಅಗತ್ಯವಾಗಿ ಬೇಕಾಗುತ್ತದೆ.

ಕ್ಲಿಕ್ ಮಾಡಿ ಓದಿ: ಅಡಿಕೆ ಧಾರಣೆ | ಹೊಸ ವರ್ಷಕ್ಕೆ ಮೊದಲೇ ಅಡಿಕೆ ಬೆಳೆಗಾರರಿಗೆ ಸಿಹಿ

ವಿದ್ಯುತ್ ಉಪಕೇಂದ್ರದ ಸಾಮಥ್ರ್ಯಕ್ಕೆ ಅನುಗುಣವಾಗಿ ಸೋಲಾರ್ ಪಾರ್ಕ್‍ಗಳಲ್ಲಿ ವಿದ್ಯುತ್ ಉತ್ಪಾದನೆ ಮಾಡಿ ಅಲ್ಲಿಯೇ ಪೂರೈಕೆ ಮಾಡಿ ಕೊಡಲಾಗುವುದು ಎಂದು ತಿಳಿಸಿದ ಅವರು, ಈಗಾಗಲೇ 1200 ಮೆಗಾ ವ್ಯಾಟ್ ಹಂಚಿಕೆಯಾಗಿದ್ದು, ಬಾಕಿ ಇರುವುದಕ್ಕೂ ಟೆಂಡರ್ ಕರೆಯಲಾಗಿದೆ ಎಂದು ಹೇಳಿದರು.

ರೈತರ ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದು, ಈ ಯೋಜನೆಯಡಿ ಖಾಸಗಿಯವರು ಬಂಡವಾಳ ಹೂಡಿಕೆ ಮಾಡುತ್ತಾರೆ. ಸರ್ಕಾರದಿಂದ ಲಭ್ಯವಿರುವೆಡೆ ಸರ್ಕಾರಿ ಭೂಮಿ ನೀಡಲಾಗುವುದು, ಅಲ್ಲದೆ ಸೋಲಾರ್ ಘಟಕಗಳಲ್ಲಿ ಉತ್ಪಾದಿಸುವ ವಿದ್ಯುತ್ ಅನ್ನು ಸರ್ಕಾರವೇ ಗರಿಷ್ಟ 3.17 ರೂ. ನಂತೆ ಖರೀದಿ ಮಾಡಲಾಗುವುದು.

ಸರ್ಕಾರಿ ಜಮೀನಿನಲ್ಲಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಪ್ರತಿ ಎಕರೆಗೆ ರೂ.25 ಸಾವಿರ ಹಣವನ್ನು ಖಾಸಗಿ ಏಜೆನ್ಸಿಯವರು ಪ್ರತಿ ವರ್ಷ ಪಾವತಿಸಬೇಕು, ಈ ಹಣವನ್ನು ಜಿಲ್ಲಾಧಿಕಾರಿಗಳ ಬಳಿ ಡಿಪಾಸಿಟ್ ಮಾಡಲಾಗುವುದು.

ಆಯಾ ಕ್ಷೇತ್ರದ ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಆಯಾ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಶಾಲೆ, ಅಂಗನವಾಡಿ, ಆಸ್ಪತ್ರೆ ಅಭಿವೃದ್ಧಿಗೆ ಅನುದಾನ ಬಳಕೆ ಮಾಡಬಹುದಾಗಿದೆ. ಈ ಯೋಜನೆಯಿಂದ ರೈತರಿಗೆ ರಾತ್ರಿಯ ಜೊತೆಗೆ ಹಗಲಿನಲ್ಲಿಯೂ ಉತ್ತಮ ವಿದ್ಯುತ್ ದೊರೆಯಲಿದ್ದು, ನಿದ್ದೆಗೆಟ್ಟು ನೀರಿಗಾಗಿ ಪರಿತಪಿಸುವುದು ತಪ್ಪಲಿದೆ ಎಂದರು.

ಕ್ಲಿಕ್ ಮಾಡಿ ಓದಿ: ಎಂ.ಸಿ.ಅರ್ಪಿತಾ ಮಹಿಳಾ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

ಅಕ್ರಮ-ಸಕ್ರಮ ಯೋಜನೆಯಡಿ ರಾಜ್ಯದಲ್ಲಿ ಸುಮಾರು 4.5 ಲಕ್ಷ ಕೃಷಿ ಪಂಪ್‍ಸೆಟ್ ಗಳು ಇವೆ. ಈ ಪೈಕಿ ಈಗಾಗಲೆ 2.5 ಲಕ್ಷ ಪಂಪ್‍ಸೆಟ್‍ಗಳನ್ನು ಅಕ್ರಮ-ಸಕ್ರಮದಡಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲಾಗಿದೆ, ಇನ್ನೂ 2 ಲಕ್ಷ ಪಂಪ್‍ಸೆಟ್‍ಗಳಿಗೆ ಸಂಪಕ್ ಒದಗಿಸಲು ಈಗಾಗಲೆ ಏಜೆನ್ಸಿ ಅವರನ್ನು ನಿಗದಿಪಡಿಸಿ ವಹಿಸಲಾಗಿದೆ. ಮುಂದಿನ ಒಂದೂವರೆ ವರ್ಷದೊಳಗೆ ಈ ಯೋಜನೆ ಸಂಪೂರ್ಣಗೊಳ್ಳುವ ವಿಶ್ವಾಸವಿದೆ ಎಂದರು.

ತೋಟದ ಮನೆಗಳಿಗೆ ಹಗಲು ಹೊತ್ತು 03 ಫೇಸ್ ಹಾಗೂ ರಾತ್ರಿ ವೇಳೆ ಸಿಂಗಲ್ ಫೇಸ್ ವಿದ್ಯುತ್ ಕೊಡಲು ಈಗಾಗಲೆ ನಿರ್ಣಯ ಮಾಡಲಾಗಿದ್ದು, ಎಲ್ಲ ಗ್ರಾಮಗಳಿಗೆ ನಿರಂತರ ಜ್ಯೋತಿ ಯಡಿ ವಿದ್ಯುತ್ ಪೂರೈಸಲು ಟೆಂಡರ್ ಪ್ರಕ್ರಿಯೆ ನಡೆದಿದ್ದು, ಶೀಘ್ರ ಕಾರ್ಯಾದೇಶ ನೀಡಲಾಗುವುದು ಎಂದರು.

ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ರಾಜ್ಯದ ಜನರಿಗೆ ಸೋಲಾರ್ ಪ್ಲಾಂಟ್ ಪರಿಚಯಿಸಿ, ಸುಮಾರು 3 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನಗೆ ಅನುಮೋದನೆ ನೀಡಿದ್ದು, ಈಗಾಗಲೇ ಹಲವೆಡೆ ವಿದ್ಯುತ್ ಉತ್ಪಾದನೆಯಾಗುತ್ತಿದೆ. ರೈತರ ಬೇಡಿಕೆಗೆ ಅನುಗುಣವಾಗಿ ಹಗಲಿನಲ್ಲಿ ನಿರಂತರ 7 ಗಂಟೆಗಳ ಕಾಲ ವಿದ್ಯುತ್ ದೊರೆಯಲಿದೆ.

ನೀರಗುಂದ ಸೋಲಾರ್ ಪ್ಲಾಂಟ್‍ನಿಂದ ಈಗಾಗಲೇ ಕಳೆದ ಮೂರು ದಿನಗಳಿಂದ ವಿದ್ಯುತ್ ಸರಬರಾಜು ಆಗುತ್ತಿದ್ದು, ಈ ಭಾಗದ ರೈತರು ಸಂತಸ ವ್ಯಕ್ತಪಡಿಸಿದ್ದು, ಕ್ಷೇತ್ರದ ಉಳಿದ ವಿದ್ಯುತ್ ಉಪಕೇಂದ್ರಗಳ ಬಳಿಯೂ ಸೋಲಾರ್ ಪ್ಲಾಂಟ್ ಸ್ಥಾಪಿಸಲು ಇಂಧನ ಸಚಿವರು ಒಪ್ಪಿದ್ದಾರೆ.

ಹೊಸದುರ್ಗ ತಾಲ್ಲೂಕು ಪದೇ ಪದೇ ಬರಕ್ಕೆ ತುತ್ತಾಗುವ ಪ್ರದೇಶವಾಗಿದ್ದು, ಈ ಭಾಗದಲ್ಲಿ ಯಾವುದೇ ನದಿಯ ನೀರಿನ ಮೂಲ ಲಭ್ಯವಿಲ್ಲ, ಹೀಗಾಗಿ ರೈತರು ಅಂತರ್ಜಲವನ್ನೇ ಹೆಚ್ಚಾಗಿ ನೆಚ್ಚಿಕೊಂಡಿದ್ದಾರೆ.

ಕ್ಲಿಕ್ ಮಾಡಿ ಓದಿ: 30 TMC ದಾಟಿದ ವಾಣಿವಿಲಾಸ ಸಾಗರ ಜಲಾಶಯ

ಸುಮಾರು 70 ಸಾವಿರ ಪಂಪ್‍ಸೆಟ್‍ಗಳನ್ನು ಅಕ್ರಮ-ಸಕ್ರಮದಡಿ ಸಂಪರ್ಕ ಕಲ್ಪಿಸಿ, ಗುಣಮಟ್ಟದ ವಿದ್ಯುತ್ ನೀಡಬೇಕಿದೆ. ಇದರ ಜೊತೆಗೆ ಭದ್ರಾ ಮೇಲ್ದಂಡೆ ಯೋಜನೆಯಡಿ 1.35 ಲಕ್ಷ ಎಕರೆಗೆ ನೀರು ಒದಗಿಸಲಾಗುವುದು ಹಾಗೂ ಭದ್ರಾ ಜಲಾಶಯದಿಂದ 800 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಪೂರೈಕೆ ಯೋಜನೆ ಜಾರಿಯಾಗುತ್ತಿದ್ದು, ಇವೆಲ್ಲವಕ್ಕೂ ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಬಲಪಡಿಸುವ ಅಗತ್ಯವಿದೆ, ಇದಕ್ಕಾಗಿ ಕ್ಷೇತ್ರ ವ್ಯಾಪ್ತಿಯಲ್ಲಿ 04 ವಿದ್ಯುತ್ ಸಬ್ ಸ್ಟೇಷನ್ ಮಂಜೂರು ಮಾಡುವಂತೆ ಇಂಧನ ಸಚಿವರಿಗೆ ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು, ಭೂಮಿಯನ್ನು ಗುರುತಿಸಿಕೊಟ್ಟರೆ, ಆದ್ಯತೆ ಮೇರೆಗೆ ವಿದ್ಯುತ್ ಸ್ಟೇಷನ್‍ಗಳನ್ನು ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಗ್ಯಾರಂಟಿ ಯೋಜನಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಶಿವಣ್ಣ ಸೇರಿದಂತೆ ಇಂಧನ ಇಲಾಖೆಯ ಅಧಿಕಾರಿಗಳು, ರೈತರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AgricultureChitradurgaChitradurga newsChitradurga UpdateselectricityIrrigation pumpsetKannada Latest NewsKannada NewsKusum-C schemeMinister KJ GeorgeSolar Parkಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕುಸುಮ್-ಸಿ ಯೋಜನೆಕೃಷಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ನೀರಾವರಿ ಪಂಪ್‍ಸೆಟ್‍ವಿದ್ಯುತ್ಸಚಿವ ಕೆ.ಜೆ.ಜಾರ್ಜ್ಸೋಲಾರ್ ಪಾರ್ಕ್
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಡಿಸೆಂಬರ್ 31 | ಹಣಕಾಸಿನ ವ್ಯವಹಾರಗಳಲ್ಲಿ ಅನುಕೂಲ, ದೀರ್ಘಕಾಲದ ಸಮಸ್ಯೆಗಳು ನಿವಾರಣೆ
Next Article VaniVilasa sagara dam ವಾಣಿವಿಲಾಸ ಸಾಗರ ಜಲಾಶಯ | ಇಂದಿನ ನೀರಿನ ಮಟ್ಟ
Leave a Comment

Leave a Reply Cancel reply

Your email address will not be published. Required fields are marked *

ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ
ಚಿತ್ರದುರ್ಗದಲ್ಲಿ ಯಕ್ಷಗಾನ ತಾಳಮದ್ದಳೆ | ಆಲಾಪಕ್ಕೆ ತಲೆದೂಗಿದ ಯಕ್ಷಗಾನ ಪ್ರಿಯರು
ಮುಖ್ಯ ಸುದ್ದಿ
ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ ಪ್ರಗತಿ ಪರಿಶೀಲನಾ ಸಭೆಯ ಸಿದ್ಧತೆ ಪರಿಶೀಲನೆ
ಬರದ ನಾಡಲ್ಲಿ ಮುಖ್ಯಮಂತ್ರಿ ಪ್ರಗತಿ ಪರಿಶೀಲನಾ ಸಭೆ | ಅನುಭವ ಮಂಟಪದಲ್ಲಿ ಭರದ ತಯಾರಿ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
Damaged electronic item
ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up