
CHITRADURGA NEWS | 04 SEPTEMBER 2024
ಚಿತ್ರದುರ್ಗ: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ) ಸೂರ್ಯಕಾಂತಿ(sunflower)ಯನ್ನು ಖರೀದಿಸಲು, ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳ ಆದೇಶದಂತೆ ಸೂರ್ಯಕಾಂತಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.
ಕ್ಲಿಕ್ ಮಾಡಿ ಓದಿ: Upper Bhadra Project: ಭದ್ರಾ ಮೇಲ್ದಂಡೆ ಯೋಜನೆಗೆ ಪುನಃ ವಿಘ್ನ | ಕಾಲುವೆ ನಿರ್ಮಾಣಕ್ಕೆ ಎದುರಾಯಿತು ತೊಡಕು

ಹಿರಿಯೂರು ತಾಲ್ಲೂಕಿನ ಯರಬಳ್ಳಿ/ಐಮಂಗಲ, ಧರ್ಮಪುರ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘ ಹಾಗೂ ಹಿರಿಯೂರು ಎ.ಪಿ.ಎಂ.ಸಿ, ಚಳ್ಳಕೆರೆ ತಾಲ್ಲೂಕಿನ ರಾಮಜೋಗಿಹಳ್ಳಿ, ದೇವರೆಡ್ಡಿಹಳ್ಳಿ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘ ಮತ್ತು ಚಳ್ಳಕೆರೆ ಎ.ಪಿ.ಎಂ.ಸಿ ಹಾಗೂ ಚಿತ್ರದುರ್ಗ ತಾಲ್ಲೂಕಿನ ತುರುವನೂರಿನ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘದಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.
ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮತಿ ಕಾರ್ಯದರ್ಶಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

