ಮುಖ್ಯ ಸುದ್ದಿ
ಕೋಟೆನಾಡಿನಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ | ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಡಿ.ಸುಧಾಕರ್
CHITRADURGA NEWS | 26 NAJUARY 2024
ಚಿತ್ರದುರ್ಗ: ದೇಶಾದ್ಯಂತ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಕೋಟೆನಾಡು ಚಿತ್ರದುರ್ಗದಲ್ಲಿ ಎಲ್ಲ ಶಾಲೆ, ಕಾಲೇಜು, ಸರ್ಕಾರಿ ಕಚೇರಿಗಳು ಸೇರಿದಂತೆ ಮನೆ ಮನೆಗಳ ಅಂಗಳದಲ್ಲೂ ರಂಗವಲ್ಲಿ ಹಾಕಿ ಗಣರಾಜ್ಯೋತ್ಸವಕ್ಕೆ ಶುಭ ಕೊರಲಾಯಿತು.
ಚಿತ್ರದುರ್ಗ ಜಿಲ್ಲಾ ಆಡಳಿತದಿಂದ ನಗರದ ಶ್ರೀ ಜಗದ್ಗುರು ಜಯದೇವ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಇದನ್ನೂ ಓದಿ: ರಾಷ್ಟ್ರಪ್ರಶಸ್ತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ದಿವ್ಯಪ್ರಭು ಜಿ.ಆರ್.ಜೆ
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ರಾಷ್ಟ್ರಧ್ವಜಾರೋಹಣ ನೆರವೇರಿಸುವ ಮೂಲಕ ಗಣರಾಜ್ಯೋತ್ಸವಕ್ಕೆ ಶುಭ ಕೋರಿದರು.
ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ, ಜಿಪಂ ಸಿಇಓ ಎಸ್.ಜೆ.ಸೋಮಶೇಖರ್, ತಹಶೀಲ್ದಾರ್ ನಾಗವೇಣಿ, ಪೌರಾಯುಕ್ತೆ ರೇಣುಕಾ ಸೇರಿದಂತೆ ಜಿಲ್ಲೆ, ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ರಾಷ್ಟ್ರಧ್ವಜಾರೋಹಣದ ನಂತರ ವಿವಿಧ ಶಾಲಾ ಕಾಲೇಜುಗಳ ಮಕ್ಕಳು ಸಾಂಸ್ಕøತಿಕ ನೃತ್ಯ ರೂಪಕಗಳನ್ನು ಪ್ರದರ್ಶಿಸಿದರು.
ಗಣರಾಜ್ಯೋತ್ಸವದ ಅಂಗವಾಗಿ ಮಕ್ಕಳು ಕೆನ್ನೆಗೆ ತ್ರಿವರ್ಣ ಹಾಕಿಸಿಕೊಂಡು ಗಮನ ಸೆಳೆದರು. ಆಟೋ, ಬಸ್ಸುಗಳ ಮೇಲೆ ರಾಷ್ಟ್ರಧ್ವಜಗಳು ರಾರಾಜಿಸಿದವು.