CHITRADURGA NEWS | 01 MAY 2026
ಚಿತ್ರದುರ್ಗ: ವಾಲ್ಮೀಕಿ ಧ್ವನಿ ಪತ್ರಿಕೆ ವತಿಯಿಂದ 16ನೇ ವರ್ಷದ 77 ಪಾಳೇಗಾರರ ನೆನಪಿನೊತ್ಸವ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಮೇ.22 ರಂದು ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗ ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಾಲ್ಮೀಕಿ ಧ್ವನಿ ಪತ್ರಿಕೆ ಸಂಪಾದಕರಾದ ಸೊಂಡೇಕೆರೆ ಶಿವಣ್ಣ ಹೇಳಿದರು.
ಇದನ್ನೂ ಓದಿ: ಸುಪ್ರೀಂ ಕೋರ್ಟ್ ನಿಂದ ವಿಶೇಷ ಲೋಕಾದಾಲತ್ | ಸದುಪಯೋಗ ಪಡೆದುಕೊಳ್ಳಿ | ನ್ಯಾ.ರೋಣ ವಾಸುದೇವ
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 15 ವರ್ಷಗಳಿಂದ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ, ನಮ್ಮ ಸಮುದಾಯದ ಮಕ್ಕಳಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.
ರಾಜನಹಳ್ಳಿ ವಾಲ್ಮೀಕಿ ಮಹಾಸಂಸ್ಥಾನದ ಶ್ರೀ ಪ್ರಸನ್ನ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್, ಮಾಜಿ ಸಚಿವರಾದ ಬಿ.ಶ್ರೀರಾಮುಲು, ಚಿಕ್ಕೋಡಿ ಸಂಸದರಾದ ಪ್ರಿಯಾಂಕ ಜಾರಕಿಹೊಳಿ, ಚಿತ್ರದುರ್ಗ ಸಂಸದರಾದ ಗೋವಿಂದ್ ಎಂ.ಕಾರಜೋಳ ಭಾಗವಹಿಸಲಿದ್ದಾರೆ.
ವಾಲ್ಮೀಕಿ ಧ್ವನಿ ಪತ್ರಿಕೆಯ ಸಂಪಾದಕರಾದ ಸೊಂಡೆಕೆರೆ ಶಿವಣ್ಣ ಪ್ರಾಸ್ತಾವಿಕವಾಗಿ ಮಾತನಾಡುವರು. ನಿವೃತ್ತ ಪ್ರಾಚಾರ್ಯರಾದ ಗುಡದೇಶ್ವರಪ್ಪ ಉಪನ್ಯಾಸ ನೀಡುವರು.
ಇದನ್ನೂ ಓದಿ: ಅಡಿಕೆ ಧಾರಣೆ | 30 ಏಪ್ರಿಲ್ | ಇಂದಿನ ಅಡಿಕೆ ರೇಟ್
ರಾಯಚೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಹನುಮಂತಪ್ಪ, ಶಾಸಕರಾದ ಎನ್.ವೈ.ಗೋಪಾಲಕೃಷ್ಣ, ಬಿ.ಜಿ.ಗೋವಿಂದಪ್ಪ, ಕೆ.ಸಿ.ವೀರೇಂದ್ರ (ಪಪ್ಪಿ) ಎಂ.ಚಂದ್ರಪ್ಪ, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ಕೆ ಬಸವರಾಜನ್, ಮದಕರಿ ವಿದ್ಯಾಸಂಸ್ಥೆ ಅಧ್ಯಕ್ಷರಾದ ಸಂದೀಪ್ ನಾಯಕ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಮಾರಸ್ವಾಮಿ, ಜಿಲ್ಲಾ ಉಪ ರಕ್ಷಣಾಧಿಕಾರಿಗಳಾದ ಶಿವಕುಮಾರ್, ಡಿ.ಎಸ್. ರಂಗಸ್ವಾಮಿ, ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ತಾಜ್ಮೀರ್, ಜಗಳೂರು ಅಚ್ಯುತಾಶ್ರಮ ಸ್ವಾಮಿಗಳಾದ ಜಿ.ದೇವೇಂದ್ರಪ್ಪ, ರಾಜ್ಯ ನಾಯಕ ಮುಖಂಡರಾದ ರಮೇಶ್ ವದ್ದಿಗೆರೆ, ದಾಕ್ಷರಸ ಮಂಡಳಿ ಅಧ್ಯಕ್ಷರಾದ ಯೋಗೀಶ್ ಬಾಬು, ಜಿಲ್ಲಾ ಬಿರ್ಸಾಮುಖಂಡರಾದ ಜೆ.ಬಿ.ರಾಜು, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಎನ್.ಆರ್.ಲಕ್ಷ್ಮಿಕಾಂತ್, ಜಿಲ್ಲಾ ನಾಯಕ ಮುಖಂಡರಾದ ತಿಪ್ಪೇಸ್ವಾಮಿ, ವಾಲ್ಮೀಕಿ ಮಹಾಸಭಾ ತಾಲೂಕು ಅಧ್ಯಕ್ಷರಾದ ಕಾಂತರಾಜು, ಜಿಲ್ಲಾ ವಾಲ್ಮೀಕಿ ಸಭಾಧ್ಯಕ್ಷರಾದ ಎಚ್.ಜೆ.ಕೃಷ್ಣಮೂರ್ತಿ, ಮಾಜಿನಗರ ಸಭಾಧ್ಯಕ್ಷರಾದ ತಿಪ್ಪಮ್ಮ ವೆಂಕಟೇಶ್, ಹಿರಿಯ ನ್ಯಾಯವಾದಿಗಳಾದ ಎಚ್.ಎಂ.ಎಸ್.ನಾಯಕ, ಮಾಜಿ ಜಿಲ್ಲಾ ಪರಿಷತ್ ಉಪಾಧ್ಯಕ್ಷರಾದ ಕೆ.ಪಾಪಯ್ಯ, ವದ್ದಿಗೆರೆ ನ್ಯಾಯವಾದಿಗಳಾದ ಹೆಚ್.ಜೆ. ಕಾಂತರಾಜು, ದಾವಣಗೆರೆ ಡಿಸಿಸಿ ಬ್ಯಾಂಕ್ ಜನರಲ್ ಮ್ಯಾನೇಜರ್ ಪಿ.ಜಿ.ರುದ್ರಪ್ಪ, ಜಿಲ್ಲಾ ನಾಯಕ ಸಂಘದ ಕಾರ್ಯದರ್ಶಿ ಮಂಜುನಾಥ್, ಮಹಿಳಾ ಮುಖಂಡರಾದ ರತ್ನಮ್ಮ, ರಾಜ್ಯ ರೈತ ಸಂಘ ಉಪಾಧ್ಯಕ್ಷರಾದ ಕೆ.ಪಿ.ಭೂತಯ್ಯ, ನಿವೃತ್ತ ನಾಯಕ ನೌಕರರ ಜಿಲ್ಲಾಧ್ಯಕ್ಷರಾದ ಬೋರಯ್ಯ, ಕೂಡ್ಲಿಗಿ ಪದವಿ ಪೂರ್ವ ಕಾಲೇಜ್ ಪ್ರಾಚಾರ್ಯರಾದ ಡಾ.ಕೊತ್ಲಮ್ಮ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ.ಎಸ್.ವಿನಾಯಕ್ ತೊಡರನಾಳ್, ಮಾಜಿ ಅಧ್ಯಕ್ಷರಾದ ಬಿ.ದಿನೇಶ್ ಗೌಡಗೆರೆ ಸೇರಿದ ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಎಸ್ ಎಸ್ ಎಲ್ ಸಿ,. ಪಿ ಯು ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ:
2025-26ನೇ ಸಾಲಿನಲ್ಲಿ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.85ಕ್ಕಿಂತ ಹೆಚ್ಚಿನ ಅಂಕ ಪಡೆದ ನಾಯಕ ಸಮುದಾಯದ ವಿದ್ಯಾರ್ಥಿ / ವಿದ್ಯಾರ್ಥಿನಿಯರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಬಿಸಿಲಿನ ಶಾಖದಿಂದ ರಕ್ಷಿಸಿಕೊಳ್ಳಲು ಡಾ.ಚಂದ್ರಕಾಂತ್ ಎಸ್. ನಾಗಸಮುದ್ರ ಸಲಹೆ
ಅರ್ಹ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ತಮ್ಮ ಅಂಕಪಟ್ಟಿ ಮತ್ತು ಮೊಬೈಲ್ ನಂಬರ್ ಅನ್ನು ದೂರವಾಣಿ ಸಂಖ್ಯೆ ಸೊಂಡೆಕೆರೆ ಶಿವಣ್ಣ – 7676030224, ಭೋರಯ್ಯ 9449065644, ದೊಡ್ಡ ಉಳ್ಳಾರ್ತಿ ಗೌರೀಶ್.9620906209, ಅಮಿತ್ 8880757640 ಗೆ ವಾಟ್ಸಪ್ ಮೂಲಕ ಮತ್ತು ನೇರವಾಗಿ ದಾಖಲೆಗಳನ್ನು ಮೇ.08 ರೊಳಗೆ ತಲುಪಿಸಲು ತಿಳಿಸಿದ್ದಾರೆ.
ವಿಶೇಷ ಸೂಚನೆ :
ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ಒಬ್ಬ ವಿದ್ಯಾರ್ಥಿಗೆ ಲ್ಯಾಪ್ಟಾಪ್ ನೀಡಲಾಗುವುದು. ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ಒಬ್ಬ ವಿದ್ಯಾರ್ಥಿಗೆ 10,000 ಪ್ರೋತ್ಸಾಹ ಧನ ನೀಡಲಾಗುವುದು. ಎಸ್ ಎಸ್ ಎಲ್ ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಒಬ್ಬ ವಿದ್ಯಾರ್ಥಿಗೆ 11,000 ಪ್ರೋತ್ಸಾಹ ಧನ ನೀಡಲಾಗುವುದು.
ವಿಶೇಷತೆ :
ಬಿರ್ಸಾಮುಂಡ ಜಿಲ್ಲಾ ಸಂಘವನ್ನು ಮಾಜಿ ಸಚಿವರಾದ ಶ್ರೀರಾಮುಲು ಅವರು ಉದ್ಘಾಟನೆ ಮಾಡಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಬಿ.ಎಸ್.ಎನ್.ಎಲ್ ನಿವೃತ್ತ ನೌಕರ ಬೋರಯ್ಯ, ವಾಲ್ಮೀಕಿ ಧ್ವನಿ ಪತ್ರಿಕೆಯ ಸಹ ಸಂಪಾದಕರಾದ ದೊಡ್ಡುಳ್ಳಾರ್ತಿ ಗೌರೀಶ್, ಗೋವಿಂದರಾಜು ಶಿವಮೂರ್ತಿ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

