CHITRADURGA NEWS | 08 AUGUST 2024
ಚಿತ್ರದುರ್ಗ: ಚಿತ್ರದುರ್ಗ ಗ್ರಾಮೀಣ ಉಪ ವಿಭಾಗ ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಹಿರೇಗುಂಟನೂರು ಗ್ರಾಮದಿಂದ ಗುತ್ತಿನಾಡು ಗ್ರಾಮದವರೆಗೆ 11ಕೆ.ವಿ. ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಗಸ್ಟ್ 9 ರಿಂದ 16ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 5 ರವರೆಗೆ ಹಿರೇಗುಂಟನೂರು ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ 11ಕೆ.ವಿ ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯ(Power cut) ಉಂಟಾಗಲಿದೆ.
ಕ್ಲಿಕ್ ಮಾಡಿ ಓದಿ: Murugha muth:ಒಂಟಿ ಕಂಬದ ಮಠದಲ್ಲಿ ಮಲ್ಲಿಕಾರ್ಜುನ ಶ್ರೀ ಸ್ಮರಣೋತ್ಸವ | ಹತ್ತಾರು ಮಠಾಧೀಶರು ಭಾಗೀ | ಯರ್ಯಾರು ಏನು ಹೇಳಿದ್ರು
ವಿದ್ಯುತ್ ಅಡಚಣೆಯಾಗುವ ಮಾರ್ಗಗಳು: 66/11 ಕೆವಿ ಹಿರೆಗುಂಟನೂರು ವಿವಿ ಕೇಂದ್ರದಿಂದ ಸರಬರಾಜಾಗುವ 11 ಕೆವಿ ಮಾರ್ಗಗಳ್ಲಲಿ ವಿದ್ಯುತ್ ಅಡಚಣೆಯಾಗುತ್ತದೆ.
ಎಫ್-9 ಸೀಬಾರ ಮತ್ತು ಎಫ್-10 ಬೀರಾವರ ಎನ್.ಜೆ.ವೈ 11ಕೆವಿ ಮಾರ್ಗಗಳಲ್ಲಿ ವಿದ್ಯುತ್ ಅಡಚಣೆಯಾಗಲಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: 66/11ಕೆವಿ ಹಿರೇಗುಂಟನೂರು ವ್ಯಾಪ್ತಿಯ ಹಿರೇಗುಂಟನೂರು ಗೊಲ್ಲರಹಟ್ಟಿ, ಚಿಕ್ಕಪುರ, ಸೀಬಾರ, ಗುತ್ತಿನಾಡು, ಈಚಲನಾಗೇನಹಳ್ಳಿ, ಹುಣಸೆಕಟ್ಟೆ, ಸಾದರಹಳ್ಳಿ, ಕೆ.ಬಳ್ಳೇಕಟ್ಟೆ ಹಾಗೂ ಬೀರಾವರ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕ್ಲಿಕ್ ಮಾಡಿ ಓದಿ: warden suspended: ವಿದ್ಯಾರ್ಥಿ ನಿಲಯದ ವಾರ್ಡನ್ ಅಮಾನತು | ಜಿಪಂ ಸಿಇಒ ಆದೇಶ
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಚಿತ್ರದುರ್ಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number