ಚಿತ್ರದುರ್ಗ ನ್ಯೂಸ್..
ಚಂದಿರನ ಅಂಗಳದಲ್ಲಿ ಲ್ಯಾಂಡರ್ ಇಳಿಸುವ ಪ್ರಕ್ರಿಯೆ ಚಂದ್ರಯಾನ-3 ರಲ್ಲಿ ಅತ್ಯಂತ ಮಹತ್ವದ ಪ್ರಕ್ರಿಯೆ. ಹೀಗೆ ಚಂದ್ರನ ಅಂಗಳಕ್ಕೆ ಲ್ಯಾಂಡರ್ ಇಳಿಸುವ ತರಬೇತಿ 2017ರಲ್ಲಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿತ್ತು ಎನ್ನುವುದು ಹೆಮ್ಮೆಯ ಸಂಗತಿ.
ಹೌದು, ಚಳ್ಳಕೆರೆ ತಾಲೂಕಿನ ದೊಡ್ಡಉಳ್ಳಾರ್ತಿ ಬಳಿ ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) 473 ಎಕರೆ ಪ್ರದೇಶದಲ್ಲಿ ನೆಲೆನಿಂತಿದೆ.
ಈ ಪ್ರದೇಶದಲ್ಲಿ ಇಸ್ರೋ ವಿಜ್ಞಾನಿಗಳು ಚಂದ್ರನ ಮೇಲ್ಮೈ ಹೋಲುವಂತೆ ಭೂಮಿಯನ್ನು ಹದಗೊಳಿಸಿ, ಕುಳಿಗಳನ್ನು ನಿರ್ಮಿಸಿ ಅದರಲ್ಲಿ ಲ್ಯಾಂಡರ್ ಇಳಿಸಿ, ಅದರೊಳಗಿನಿಂದ ಪುಟಾಣಿ ರೋವರ್ ಅನ್ನು ಓಡಾಡಿಸಿದ್ದರು. ಚಂದ್ರನ ಮೇಲ್ಮೈ ಹೋಲುವ ಮಣ್ಣನ್ನು ತಮಿಳುನಾಡಿನ ಸೇಲಂನಿಂದ ತಂದು ಇಲ್ಲಿ ಹರಡಿಸಲಾಗಿತ್ತು. ಚಂದ್ರಯಾನ-3 ಸತತ 4 ವರ್ಷಗಳ ಪರಿಶ್ರಮವಾಗಿದೆ. ಇದಕ್ಕೆ ಪೂರಕವಾಗಿ, ಚಳ್ಳಕೆರೆ ತಾಲೂಕಿನಲ್ಲಿರುವ ದೊಡ್ಡುಳ್ಳಾರ್ತಿ ಚಂದ್ರಯಾನಕ್ಕೆ ಪೂರಕವಾಗಿ ಪ್ರಯೋಗಶಾಲೆಯಾಗಿತ್ತು ಎನ್ನುವುದು ಇಡೀ ಚಿತ್ರದುರ್ಗ ಹೆಮ್ಮೆಪಡುವ ಸಂಗತಿಯಾಗಿದೆ.
ಇದನ್ನೂ ಓದಿ: ಕೆನರಾ ಬ್ಯಾಂಕ್ನಿಂದ ವಿದ್ಯಾರ್ಥಿ ವೇತನ: ವಿದ್ಯಾಜ್ಯೋತಿ ಯೋಜನೆಯಡಿ 2.77 ಲಕ್ಷ ರೂ. ವಿತರಣೆ
ಇಸ್ರೋ ಮತ್ತು ಇಂಡಿಯಾದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಯಶಸ್ವಿಯಾಗಿದೆ. ವಿಕ್ರಂ ಸಾಫ್ಟ್ ಲ್ಯಾಂಡಿಂಗ್ ಆಗುವ ಮೂಲಕ ಇಡೀ ಯೋಜನೆಗೆ ಗೆಲುವು ಸಿಕ್ಕಿದೆ. ಚಂದಿರನ ಅಂಗಳದಲ್ಲಿ ವಿಕ್ರಂ ಲ್ಯಾಂಡರ್ ನಿಧಾನವಾಗಿ ಇಳಿಯುವ ಪ್ರಕ್ರಿಯೆ ಇಡೀ ಜಗತ್ತಿನ ಗಮನ ಸೆಳೆದಿತ್ತು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
