ಚಿತ್ರದುರ್ಗ: ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ವಾಣಿವಿಲಾಸ ಸಾಗರ ನೀರು ಸರಬರಾಜು ಯೋಜನೆಯ ಮುಖ್ಯ ಕೊಳವೆ ಮಾರ್ಗ ಮಧ್ಯೆದಲ್ಲಿ ಪೈಪ್ಲೈನ್ ದುರಸ್ಥಿ ಕೆಲಸವನ್ನು ಕೈಗೊಳ್ಳಬೇಕಾಗಿರುವುದರಿಂದ ವಾಣಿವಿಲಾಸ ಸಾಗರ ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಇದೇ ಆಗಸ್ಟ್ 25 ರಿಂದ ದುರಸ್ಥಿಯಾಗುವವರೆಗೂ ಸ್ಥಗಿತಗೊಳಿಸಲಾಗುತ್ತಿದೆ.
ಇದನ್ನೂ ಓದಿ: ಕೋಟೆನಾಡಿನ ಜನರ ಅಭಿಮಾನದ ಸಂಗತಿ | ಚಂದ್ರಯಾನಕ್ಕೂ-ಚಿತ್ರದುರ್ಗಕ್ಕೂ ಇರುವ ನಂಟೇನು ಗೊತ್ತಾ..?
ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರನ್ನು ಉಪಯೋಗಿಸಲು ಕೋರಿದೆ ಹಾಗೂ ನೀರನ್ನು ಕುದಿಸಿ, ಆರಿಸಿ, ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
