
ಚಿತ್ರದುರ್ಗ ನ್ಯೂಸ್: ದೇಶದ ಎರಡನೇ ಅತೀ ದೊಡ್ಡ ಗಣೇಶೋತ್ಸವ ಎಂದು ಹೆಸರು ಪಡೆದಿರುವ ಚಿತ್ರದುರ್ಗದ ಹಿಂದೂ ಮಹಾಗಣಪತಿ ಮಹೋತ್ಸವದ ಅಂಗವಾಗಿ ಸೆಪ್ಟಂಬರ್ 3 ಭಾನುವಾರ ಬೆಳಗ್ಗೆ ಗೋ ಪೂಜೆ ಹಾಗೂ ಧ್ವಜ ಪೂಜೆ ನಡೆಯಲಿದೆ.
ವಿಶ್ವಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ನಡೆಯುವ 2023ನೇ ಸಾಲಿನ ಹಿಂದೂ ಮಹಾಗಣಪತಿ ಉತ್ಸವಕ್ಕೆ ಸಿದ್ಧತೆಗಳು ಭರದಿಂದ ಸಾಗಿದ್ದು, ಭಾನುವಾರ ಬೆಳಗ್ಗೆ 8.30ಕ್ಕೆ ಗೋ ಪೂಜೆ, ಧ್ವಜ ಪೂಜೆಯೊಂದಿಗೆ ಪೆಂಡಾಲ್ ಹಾಕುವ ಕೆಲಸ ಪ್ರಾರಂಭವಾಗಲಿದೆ.
ಬಿ.ಡಿ.ರಸ್ತೆಯ ಜೈನ ಧಾಮದಲ್ಲಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆಯಾಗಲಿದ್ದು, ಈ ವರ್ಷ ಉತ್ಸವ ಸಮಿತಿ ಅಧ್ಯಕ್ಷರಾಗಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಸಂಘ ಪರಿವಾರದ ಹಿರಿಯ ಕಾರ್ಯಕರ್ತ ಜಿ.ಎಂ.ಸುರೇಶ್ ನಿಯೋಜನೆಯಾಗಿದ್ದಾರೆ.
(ಚಿತ್ರದುರ್ಗ ಜಿಲ್ಲೆಯ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/HOKagK96PgX5hCdhvtFLfw)
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ Facebook page follow ಮಾಡಿ https://www.facebook.com/chitradurganews?mibextid=ZbWKwL)

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
