ಚಿತ್ರದುರ್ಗನ್ಯೂಸ್.ಕಾಂ
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತವಾಗಿ ಲ್ಯಾಪ್ ಟಾಪ್ಗಳನ್ನು ನೀಡಲಾಗುತ್ತಿದೆ. ಈ ಸಂಬಂಧ ಅರ್ಜಿ ಅಹ್ವಾನಿಸಿದ್ದು, ಸೆಪ್ಟಂಬರ್ 16 ಅರ್ಜಿ ಸಲ್ಲಿಸಲು ಕೊನೆಯ ದಿನ.
ಚಿತ್ರದುರ್ಗ ಉಪವಿಭಾಗ ಕಾರ್ಮಿಕ ಅಧಿಕಾರಿ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಲು ಇಚ್ಚಿಸಿದ್ದಲ್ಲಿ, ಅರ್ಜಿ ನಮೂನೆಯನ್ನು ಕಾರ್ಮಿಕ ಅಧಿಕಾರಿ, ಚಿತ್ರದುರ್ಗ ಉಪವಿಭಾಗ, ಜೆ.ಸಿ.ಆರ್.ಬಡಾವಣೆ, ಎಸ್ಬಿಎಂ ಬ್ಯಾಂಕ್, 1ನೇ ಮಹಡಿ, ಚಿತ್ರದುರ್ಗ ಇವರ ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಸೆ.16 ಅಂತಿಮ ದಿನವಾಗಿರುತ್ತದೆ. ತದನಂತರ ಬರುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-231394 ಗೆ ಸಂಪರ್ಕಿಸಬಹುದು ಎಂದು ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.

(ಚಿತ್ರದುರ್ಗ ಜಿಲ್ಲೆಯ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/HOKagK96PgX5hCdhvtFLfw)
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ Facebook page follow ಮಾಡಿ https://www.facebook.com/chitradurganews?mibextid=ZbWKwL)
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
