
ಚಿತ್ರದುರ್ಗ ನ್ಯೂಸ್.ಕಾಂ
ರಾಜ್ಯ ವಕ್ಪ್ ಮಂಡಳಿಯ ಅಧ್ಯಕ್ಷರಾಗಿ ಚಿತ್ರದುರ್ಗದ ಕೆ.ಅನ್ವರ್ ಬಾಷ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ವಕ್ಫ್ ಅಧ್ಯಕ್ಷರಾಗಿದ್ದ ಶಾಫಿ ಸಅದಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಅನ್ವರ್‍ಬಾಷ ಆಯ್ಕೆಯಾಗಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಮಸೀದಿ ಮುತುವಲ್ಲಿಗಳ ಕ್ಷೇತ್ರದಿಂದ ಆಯ್ಕೆಯಾಗಿ ರಾಜ್ಯ ವಕ್ಪ್ ಮಂಡಳಿಯ ನಿರ್ದೇಶಕರಾಗಿದ್ದ ಅನ್ವರ್ ಬಾಷ, ಚಿತ್ರದುರ್ಗ ಜಿಲ್ಲಾ ವಕ್ಫ್ ಸಲಹಾ ಸಮಿತಿಗೆ 3 ಬಾರಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಮುಸ್ಲಿಂ ಸಮಾಜದ ಶಾಸಕರು, ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಸದಸ್ಯರು ವಕ್ಪ್ ಮಂಡಳಿಯ ಖಾಯಂ ಸದಸ್ಯರಾಗಿದ್ದು, ಅವರನ್ನು ಹೊರತುಪಡಿಸಿ ಸುಮಾರು ಎಂಟು ಜನ ನಿರ್ದೇಶಕರಿರುತ್ತಾರೆ.
ಎರಡೂವರೆ ದಶಕದ ನಂತರ ಚಿತ್ರದುರ್ಗಕ್ಕೆ ಅಧ್ಯಕ್ಷ ಸ್ಥಾನ:
ಸುಮಾರು ಎರಡುವರೆ ದಶಕಗಳ ಹಿಂದೆ ಚಿತ್ರದುರ್ಗದ ಶಾಸಕರಾಗಿದ್ದ ಸಿ.ಆರ್. ಮೊಹಮ್ಮದ್ ಸೈಫುದ್ದೀನ್ ಅವರು ವಕ್ಪ್ ಮಂಡಳಿಗೆ ಅಧ್ಯಕ್ಷರಾಗಿದ್ದರು. ಅವರ ನಂತರ ಸುಧೀರ್ಘ ವಿರಾಮದ ನಂತರ ಮೊಳಕಾಲ್ಮೂರು ತಾಲೂಕಿನ ಕೆ.ಅನ್ವರ್ ಬಾಷ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಎಂ.ಎ, ಎಲ್‍ಎಲ್‍ಬಿ ಪದವೀಧರರಾಗಿರುವ ಅನ್ವರ್ ಬಾಷ, 1983ರಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ, ಉಪಾಧ್ಯಕ್ಷ, ಬ್ಲಾಕ್ ಕಾಂಗ್ರೆಸ್ ಮಟ್ಟದಲ್ಲಿ ಪದಾಧಿಕಾರಿ ಹೀಗೆ ನಿರಂತರ 25 ವರ್ಷಗಳ ಕಾಲ ಪಕ್ಷದ ಕೆಲಸ ಮಾಡಿಕೊಂಡು ಬಂದಿದ್ದಾರೆ.
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ https://www.facebook.com/chitradurganews?mibextid=ZbWKwL)
(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/EQUQpKalYFT1fVcJDTDjCk)

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
