
ಚಿತ್ರದುರ್ಗ ನ್ಯೂಸ್.ಕಾಂ: ಸನಾತನ ಹಿಂದೂ ಧರ್ಮವನ್ನು ಅವಮಾನಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಚಿತ್ರದರ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಪ್ರತಿಭಟಿಸಿದರು.
ಸನಾತನ ಹಿಂದೂ ಧರ್ಮವನ್ನು ಡೆಂಘೀ, ಮಲೇರಿಯಾಕ್ಕೆ ಹೋಲಿಕೆ ಮಾಡಿ ಮಾತನಾಡುವವರ ಮನಸ್ಥಿತಿ ಕೊಳೆತು ಹೋಗಿದೆ. ದುರುದ್ದೇಶದಿಂದ, ಹಿಂದುಗಳ ನಡುವಿನ ಸಾಮರಸ್ಯ ಕದಡಲು, ನಮ್ಮ ನಂಬಿಕೆ ಹಾಗೂ ಧಾರ್ಮಿಕ ಭಾವನೆಗಳಿಗೆ ಘಾಸಿ ಮಾಡಲು ಹೀಗೆಲ್ಲಾ ಮಾತನಾಡುವವರ ಮೇಲೆ ಸರಿಯಾದ ಕ್ರಮ ಆಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್, ಸನಾತನ ಹಿಂದೂ ಧರ್ಮವನ್ನು, ಸನಾತನ ಧರ್ಮ ಡೆಂಘೀ ಇದ್ದಂತ, ಅದನ್ನು ವಿರೋಧಿಸಿದರೆ ಸಾಲದು ಅದನ್ನು ಸೊಳ್ಳೆಗಳು, ಡೆಂಘೀಜ್ವರ, ಮಲೇರಿಯಾ, ಕೋವಿಡ್ ರೋಗಗಳಂತೆ ನಿರ್ಮೂಲನೆ ಮಾಡಬೇಕು ಎಂದಿದ್ದಾರೆ. ಇಂಥವರಿಗೆ ಈ ಸಮಾಜ ಕೂಡ ಈ ಸರಿಯಾದ ಪಾಠ ಕಲಿಸಬೇಕು. ಧರ್ಮ ವಿರೋಧಿಗಳಿಗೆ ಭಾರತೀಯ ದಂಡ ಸಂಹಿತೆ ಕಲಂ 1538 ಹಾಗೂ 295ಂ ಪ್ರಕಾರ ಅಪರಾಧವಾಗಿದ್ದು, ಈ ಹಿನ್ನಲೆಯಲ್ಲಿ ಅರೋಪಿ ಉದಯನಿಧಿ ಸ್ಟಾಲಿನ್ ವಿರುದ್ಧ ಸೂಕ್ತ ಕಾನೂನು ಜರುಗಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಡಳಿತದ ಮೂಲಕ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಹಿಂದು ಜಾಗರಣ ವೇದಿಕೆ ಜಿಲ್ಲಾ ಸಂಚಾಲಕ ವಿರೇಂದ್ರ ಕುಮಾರ್, ಶಿವಶಕ್ತಿ ಬಾಲಾಜಿ, ರವಿಕುಮಾರ್, ಗರಡು ಕೇಸರಿ ಕುಮಾರ್ ಮತ್ತಿತರರಿದ್ದರು.
(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/HOKagK96PgX5hCdhvtFLfw)
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ https://www.facebook.com/chitradurganews?mibextid=ZbWKwL)

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
