ಚಿತ್ರದುರ್ಗ ನ್ಯೂಸ್.ಕಾಂ: ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿಗೆ ಸೇರಿದ ಕಾರು ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಬಳಿ ಗುರುವಾರ ರಾತ್ರಿ 10 ಗಂಟೆ ವೇಳೆಯಲ್ಲಿ ನಡೆದಿದೆ.
ಮಲ್ಲಾಡಿಹಳ್ಳಿ ಕ್ರಾಸ್ ಬಳಿ ನಡೆದ ಘಟನೆಯಲ್ಲಿ ಇನ್ನೋವಾ ಕಾರು ಬೈಕಿಗೆ ಡಿಕ್ಕಿಯಾಗಿದ್ದು, ಹೊಳಲ್ಕೆರೆ ತಾಲೂಕು ಕುನಗಲಿ ಗ್ರಾಮದ ಬೈಕ್ ಸವಾರ ಬಸವರಾಜಪ್ಪ(68) ಮೃತಪಟ್ಟಿದ್ದಾರೆ.
ಕಾರು ಡಿಕ್ಕಿಯಾದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಬಸವರಾಜಪ್ಪ ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಕಣ್ಣಿಗೆ ಖಾರದ ಪುಡಿ ಎರಚಿ ಬಂಗಾರದ ಸರ ಕಳ್ಳತನ | ಚಳ್ಳಕೆರೆಯ ಪಾವಗಡ ರಸ್ತೆಯಲ್ಲಿ ಘಟನೆ
ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಠಾರಿಯಾ ಅವರಿಗೆ ಸೇರಿದ ಕಾರು ಎನ್ನಲಾಗಿದೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಶಿವಮೊಗ್ಗ ಜಿಲ್ಲಾ ಪ್ರವಾಸಕ್ಕೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಅವರೊಟ್ಟಿಗೆ ಮುಖ್ಯ ಕಾರ್ಯದರ್ಶಿಯೂ ಆಗಮಿಸಿದ್ದರು. ಸಚಿವರ ಜೊತೆಗೆ ರಾಜೇಂದ್ರಕುಮಾರ್ ಕಠಾರಿಯಾ ತೆರಳಿದ್ದರಿಂದ ಅವರ ಚಾಲಕ ಧನುಷ್ ಮಾತ್ರ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದ. ಕಾರು ಚಾಲಕನ ವಿರುದ್ಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ https://www.facebook.com/chitradurganews?mibextid=ZbWKwL)
(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ.
https://chat.whatsapp.com/EQUQpKalYFT1fVcJDTDjCk)

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
